ಉತ್ತರ ಕನ್ನಡ: ಜಿಲ್ಲೆಯಲ್ಲಿ ಘೋರ ದುರಂತವೊಂದು ಸಂಭವಿಸಿದೆ. ಮನೆಯಲ್ಲಿದ್ದಂತ ಎಲ್ ಪಿ ಜಿ ಸಿಲಿಂಡರ್ ಸ್ಪೋಟಗೊಂಡು ಯುವತಿ ಸಾವನ್ನಪ್ಪಿರುವಂತ ಘಟನೆ ನಡೆದಿದೆ.
ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲ್ಲೂಕಿನ ಮರ್ಕಿಕೊಡ್ಲು ಗ್ರಾಮದಲ್ಲಿ ರಂಜಿತಾ ನಾಗಪ್ಪ ದೇವಾಡಿಗ(21) ಸಾವನ್ನಪ್ಪಿದ್ದಾರೆ. ಮನೆಯಲ್ಲಿದ್ದಂತ ಎಲ್ ಪಿ ಜಿ ಸಿಲಿಂಡರ್ ಸ್ಪೋಟಗೊಂಡ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.
ಪೋಷಕರು ಕೆಲಸಕ್ಕೆ ತೆರಳಿದ್ದ ಸಂದರ್ಭದಲ್ಲಿ ಎಲ್ ಪಿ ಜಿ ಸಿಲಿಂಡರ್ ಸ್ಪೋಟಗೊಂಡಿದೆ. ಅನಾರೋಗ್ಯದಿಂದ ಮನೆಯಲ್ಲೇ ಉಳಿದಿದ್ದ ರಂಜಿತಾ ಸಾವನ್ನಪ್ಪಿದ್ದಾರೆ. ಮನೆಯಲ್ಲಿ ಎಲ್ ಪಿ ಜಿ ಸಿಲಿಂಡರ್ ಸ್ಪೋಟಕ್ಕೆ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಶಿರಸಿ ಗ್ರಾಮಾಂತರ ಠಾಣೆಯ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದರು.
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ – ರಾಜ್ಯದಲ್ಲಿ ಸೆ.29ರವರೆಗೆ ಭಾರಿ ಮಳೆ