ಶಿವಮೊಗ್ಗ: ಜಿಲ್ಲೆಯ ಸಾಗರ ತಾಲ್ಲೂಕಿನ ಉಳ್ಳೂರಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಸುಗಳನ್ನು ಕಡ್ಡಾಯವಾಗಿ ನಿಲ್ಲಿಸುವಂತೆ ಶಾಸಕ ಗೋಪಾಲಕೃಷ್ಣ ಬೇಳೂರು ಸೂಚಿಸಿದ್ದಾರೆ.
ಈ ಕುರಿತಂತೆ ಶಿವಮೊಗ್ಗದ ವಿಭಾಗೀಯ ನಿಯಂತ್ರಣಾಧಿಕಾರಿಗಳಿಗೆ ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಪತ್ರ ಬರೆದು ಸೂಚಿಸಿದ್ದಾರೆ. ಅದರಲ್ಲಿ ಸಾಗರ ತಾಲ್ಲೂಕು, ಉಳ್ಳೂರು ಗ್ರಾಮ ಪಂಚಾಯಿತಿಯ ಉಳ್ಳೂರು ಗ್ರಾಮವು ಪಂಚಾಯಿತಿಯ ಕೇಂದ್ರ ಸ್ಥಾನವಾಗಿದ್ದು, ಈ ವ್ಯಾಪ್ತಿಯಲ್ಲಿ ಸುಮಾರು 700 ರಿಂದ 800 ಕುಟುಂಬಗಳು ವಾಸಿಸುತ್ತಿದ್ದು, ಸದರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಸಾರ್ವಜನಿಕರು, ರೈತಾಪಿ ವರ್ಗದವರು, ಮಹಿಳೆಯರು ವೃದ್ಧರು ಆಸ್ಪತ್ರೆ ಹಾಗೂ ಇನ್ನಿತರೆ ಕೆಲಸ ಕಾರ್ಯಗಳಿಗೆ ಹಾಗೂ ಶಾಲಾ ಮಕ್ಕಳು ವಿದ್ಯಾಭ್ಯಾಸ ಸಲುವಾಗಿ ನಗರ ಪ್ರದೇಶಕ್ಕೆ ಸ್ಥಳೀಯವಾಗಿ ಮತ್ತು ಶಿವಮೊಗ್ಗ ಮಾರ್ಗವಾಗಿ ಚಲಿಸುವ ಸರ್ಕಾರಿ ಬಸ್ ಮುಖಾಂತರವಾಗಿಯೇ ತೆರಳಬೇಕಾಗಿರುತ್ತದೆ ಎಂದಿದ್ದಾರೆ.
ಈ ಹಿನ್ನಲೆಯಲ್ಲಿ ಸಾಗರದಿಂದ ಶಿವಮೊಗ್ಗ ಮತ್ತು ಶಿವಮೊಗ್ಗದಿಂದ ಸಾಗರ ಮಾರ್ಗವಾಗಿ ಸಾಗರ ಡಿಪೊ ವ್ಯಾಪ್ತಿಯಿಂದ ಹೊರಡುವ ಸರ್ಕಾರಿ ಬಸ್ ಗಳನ್ನು ಉಳ್ಳೂರು ಗ್ರಾಮದಲ್ಲಿ ಎಲ್ಲಿ ಸುವಂತೆ ಈ ಮೂಲಕ ಸೂಚಿಸಿದ್ದಾರೆ. ಈ ಮೂಲಕ ಉಳ್ಳೂರಲ್ಲಿ ಸಾಗರದಿಂದ ಶಿವಮೊಗ್ಗ, ಶಿವಮೊಗ್ಗದಿಂದ ಸಾಗರಕ್ಕೆ ತೆರಳುವಂತ ಬಸ್ಸುಗಳನ್ನು ನಿಲ್ಲಿಸಲಾಗುತ್ತಿದೆ. ಜೊತೆಗೆ ಉಳ್ಳೂರಲ್ಲಿ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣ ಎಂಬುದಾಗಿ ಬೋರ್ಡ್ ಕೂಡ ಹಾಕಲಾಗಿದೆ.
ಉಳ್ಳೂರಲ್ಲಿ KSRTC ಬಸ್ ನಿಲ್ಲಿಸುವಂತೆ ‘ಕರ್ನಾಟಕ ರಕ್ಷಣಾ ನವಶಕ್ತಿ ವೇದಿಕೆ’ ಮನವಿ ಮಾಡಿತ್ತು, ಕನ್ನಡ ನ್ಯೂಸ್ ನೌ ಸುದ್ದಿ ಪ್ರಕಟ
ಕಳೆದ ಸೆ.18ರಂದು ಶಿವಮೊಗ್ಗ: ಉಳ್ಳೂರಲ್ಲಿ KSRTC ಬಸ್ ನಿಲ್ಲಿಸುವಂತೆ ‘ಕರ್ನಾಟಕ ರಕ್ಷಣಾ ನವಶಕ್ತಿ ವೇದಿಕೆ’ ಮನವಿ ಎಂಬುದಾಗಿ ನಿಮ್ಮ ಕನ್ನಡ ನ್ಯೂಸ್ ನೌ ಸುದ್ದಿ ಪ್ರಕಟಿಸಿತ್ತು. ಅದರಲ್ಲಿ ಸಾಗರ ತಾಲ್ಲೂಕು ಉಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಉಳ್ಳೂರು ಗ್ರಾಮವು ಪಂಚಾಯಿತಿಯ ಕೇಂದ್ರ ಸ್ಥಾನವಾಗಿದ್ದು ಈ ವ್ಯಾಪ್ತಿಯಲ್ಲಿ ಸುಮಾರು 700 ರಿಂದ 800 ಕುಟುಂಬಗಳು ವಾಸಿಸುತ್ತಿದ್ದು, ಸದರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಸಾರ್ವಜನಿಕರು, ರೈತಾಪಿ ವರ್ಗದವರು, ಮಹಿಳೆಯರು ವೃದ್ಧರು ಆಸ್ಪತ್ರೆ ಹಾಗೂ ಇನ್ನಿತರೆ ಕೆಲಸ ಕಾರ್ಯಗಳಿಗೆ ಹಾಗೂ ಶಾಲಾ ಮಕ್ಕಳು ವಿದ್ಯಾಭ್ಯಾಸ ಸಲುವಾಗಿ ನಗರ ಪ್ರದೇಶಕ್ಕೆ ಸ್ಥಳೀಯವಾಗಿ ಮತ್ತು ಶಿವಮೊಗ್ಗ ಮಾರ್ಗವಾಗಿ ಚಲಿಸುವ ಸರ್ಕಾರಿ ಬಸ್ ಮುಖಾಂತರವಾಗಿಯೇ ತೆರಳುತ್ತಿದ್ದಾರೆ. ಆದರೆ ಸಾಗರದಿಂದ ಶಿವಮೊಗ್ಗ ಮತ್ತು ಶಿವಮೊಗ್ಗದಿಂದ ಸಾಗರ ಮಾರ್ಗವಾಗಿ ಚಲಿಸುವ ಸರ್ಕಾರಿ ಬಸ್ಗಳು ಉಳ್ಳೂರು ಗ್ರಾಮದ ಕೆರೆಯ ಹತ್ತಿರ ಇರುವ ಬಸ್ ಸ್ಯಾಂಡ್ ನಲ್ಲಿ ಏರಿ ಹಾಗೂ ತಿರುವು ಇದೇ ಎಂಬ ಕಾರಣದಿಂದ ಸ್ಥಳೀಯ ಬಸ್ ಮತ್ತು ಮುಂಭಾಗ ಸರ್ಕಾರಿ ಬಸ್ಗಳು ನಿಲ್ಲಿಸದೇ, ಉಳ್ಳೂರು ಗ್ರಾಮದಿಂದ ದೂರವಿರುವ ಸಿಗಂಧೂರೇಶ್ವರಿ ಕಾಲೇಜ್ ನಿಲ್ಲಿಸುತ್ತಿರುತ್ತಾರೆ ಎಂದು ಆರೋಪಿಸಿದ್ದರು.
ಹೀಗೆ ಉಳ್ಳೂರು ಬಿಟ್ಟು, ಬೇರೆಡೆ ಕೆ ಎಸ್ ಆರ್ ಟಿ ಸಿ ಬಸ್ ನಿಲ್ಲಿಸುತ್ತಿರುವುದರಿಂದ ವೃದ್ದರು ಗರ್ಭಿಣಿಯರು ಹಾಗೂ ಮಹಿಳೆಯರು ಸಾರ್ವಜನಿಕರು ಸಿಗಂಧೂರೇಶ್ವರಿ ಕಾಲೇಜು ಬಳಿ ನಿಂತು ಬಸ್ ಹತ್ತುವುದು ಅಸಾಧ್ಯವಾಗಿದೆ. ಹೀಗಾಗಿ ಸರ್ಕಾರಿ ಬಸ್ಗಳನ್ನು ಉಳ್ಳೂರು ಗ್ರಾಮ ಬಿ.ಎಸ್.ಎನ್.ಎಲ್. ಕಛೇರಿ ಮುಂಭಾಗದಲ್ಲಿ ನಿಲ್ಲಿಸುವಂತೆ ಮನವಿ ಮಾಡಲಾಗಿದೆ. ಇದರಿಂದ ಸಾರ್ವಜನಿಕರಿಗೆ ಬಹಳ ಅನುಕೂಲವಾಗುತ್ತದೆ. ಈ ಹಿಂದೆ ಖಾಸಗಿ ಬಸ್ ಹಾಗೂ ಸರ್ಕಾರಿ ಬಸ್ಗಳು ಈ ಸ್ಥಳದಲ್ಲಿ ನಿಲ್ಲಿಸುತ್ತಿದ್ದು, ಸಾರ್ವಜನಿಕರು ತೊಂದರೆ ಇಲ್ಲದೇ ನಗರ ಪ್ರದೇಶಗಳಿಗೆ ತೆರಳುತ್ತಿದ್ದರು ಎಂದು ಮನವಿ ಪತ್ರದಲ್ಲಿ ಮನವರಿಕೆ ಮಾಡಿಕೊಡಲಾಗಿತ್ತು.
ಈ ಸುದ್ದಿಯನ್ನು ಗಮನಿಸಿರುವಂತ ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಅವರು, ಶಿವಮೊಗ್ಗ ವಿಭಾಗೀಯ ನಿಯಂತ್ರಣಾಧಿಕಾರಿಗಳಿಗೆ ಪತ್ರ ಬರೆದು ಉಳ್ಳೂರಲ್ಲಿ ಕೆ ಎಸ್ ಆರ್ ಟಿ ಸಿ ಬಸ್ ನಿಲ್ಲಿಸುವಂತೆ ಸೂಚಿಸಿದ್ದರು. ಅವರ ಸೂಚನೆಯಂತೆ ಇದೀಗ ಉಳ್ಳೂರಲ್ಲಿ ಶಿವಮೊಗ್ಗ, ಸಾಗರಕ್ಕೆ ತೆರಳುವ ಸಾರಿಗೆ ಬಸ್ಸುಗಳನ್ನು ನಿಲುಗಡೆ ಮಾಡಲಾಗುತ್ತಿದ್ದು, ವಿದ್ಯಾರ್ಥಿಗಳಿಗೆ, ವೃದ್ದರಿಗೆ, ಗರ್ಭಿಣಿ ಮಹಿಳೆಯರು ಸೇರಿದಂತೆ ಸಾರ್ವಜನಿಕರಿಗೆ ಅನುಕೂಲವಾದಂತೆ ಆಗಿದೆ.
ವರದಿ; ವಸಂತ ಬಿ ಈಶ್ವರಗೆರೆ.., ಸಂಪಾದಕರು
ಸೊರಬ ತಾಲ್ಲೂಕಿನ ರಸ್ತೆಗಳಲ್ಲಿ ‘ಗುಂಡಿ ದರ್ಬಾರ್’: ಮುಚ್ಚುವಂತೆ ಆಗ್ರಹಿಸಿ ‘ಬಿಜೆಪಿ ಪ್ರತಿಭಟನೆ’, ಭಾರೀ ಆಕ್ರೋಶ
ರಾಜ್ಯದಲ್ಲಿ ‘ರೇಷನ್ ಕಾರ್ಡ್’ ರದ್ದತಿಗೆ ಕಾರಣವೇನು? ನೀವು ಏನು ಮಾಡಬೇಕು? ಇಲ್ಲಿದೆ ಮಾಹಿತಿ | Ration Card Cancel
ಮಂಗಳೂರಿನಲ್ಲಿ ‘ಟೆಕ್ ಪಾರ್ಕ್’ ಪ್ರಸ್ತಾವ; ಶೀಘ್ರವೇ ಸಚಿವ ಸಂಪುಟದಲ್ಲಿ ಅನುಮೋದನೆ- ಸಚಿವ ಪ್ರಿಯಾಂಕ್ ಖರ್ಗೆ