ಶಿವಮೊಗ್ಗ: ಕನ್ನಡದ ಹಿರಿಯ ಸಾಹಿತಿ, ಸಾಹಿತ್ಯ ಲೋಕದ ಅಕ್ಷರ ಮಾಂತ್ರಿಕ ಡಾ.ಎಸ್ ಎಲ್ ಭೈರಪ್ಪ ಅವರು ನಿಧನರಾಗಿದ್ದಾರೆ. ಅವರ ನಿಧನಕ್ಕೆ ಸಾಗರ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಸಂತಾಪ ಸೂಚಿಸಿದ್ದಾರೆ.
ಈ ಕುರಿತಂತೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ಕನ್ನಡ ಸಾಹಿತ್ಯ ಲೋಕದ ಅಪೂರ್ವ ಚೇತನ ಪದ್ಮಭೂಷಣ ಎಸ್. ಎಲ್. ಭೈರಪ್ಪ ಅವರ ಅಗಲಿಕೆ ಸಾಹಿತ್ಯ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಹೇಳಿದ್ದಾರೆ.
ಪದ್ಮಭೂಷಣ ಗೌರವ ಪುರಸ್ಕೃತ ನಾಡಿನ ಖ್ಯಾತ ಸಾಹಿತಿ ಎಸ್.ಎಲ್. ಭೈರಪ್ಪ ಅವರು ನಿಧನರಾದ ಸುದ್ದಿ ತಿಳಿದು ಮನಸ್ಸಿಗೆ ಅತೀವ ನೋವಾಗಿದೆ. ಅಗಲಿದ ಅವರ ಆತ್ಮಕ್ಕೆ ಭಗವಂತ ಚಿರಶಾಂತಿಯನ್ನು ನೀಡಲಿ. ಅವರ ಪುಸ್ತಕ ಓದುಗರಿಗೆ ಹಾಗೂ ಕುಟುಂಬ ಸದಸ್ಯರಿಗೆ ಈ ಅಗಲಿಕೆಯ ನೋವು ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಹೇಳುವ ಮೂಲಕ ಎಸ್ ಎಲ್ ಭೈರಪ್ಪ ಅವರ ನಿಧನಕ್ಕೆ ಸಂತಾಪವನ್ನು ಶಾಸಕ ಗೋಪಾಲಕೃಷ್ಣ ಬೇಳೂರು ಸೂಚಿಸಿದ್ದಾರೆ.
ವರದಿ; ವಸಂತ ಬಿ ಈಶ್ವರಗೆರೆ.., ಸಂಪಾದಕರು
BREAKING: ಹಿರಿಯ ಸಾಹಿತಿ ಎಸ್ಎಲ್ ಭೈರಪ್ಪ ಇನ್ನಿಲ್ಲ | SL Bhyrappa is no more
ಸಾಗರದಲ್ಲಿ ರಸ್ತೆ ಗುಂಡಿ ಮುಚ್ಚುವಂತೆ ಆಗ್ರಹಿಸಿ ಬಿಜೆಪಿಯಿಂದ ಪ್ರತಿಭಟನೆ