ಮಂಡ್ಯ: ನಾಳೆ ಶ್ರೀರಂಗಪಟ್ಟಣದಲ್ಲಿ ಅದ್ದೂರಿ ದಸರಾ ಆಚರಣೆ ಮಾಡಲಾಗುತ್ತಿದೆ. ಮೈಸೂರು ದಸರೆಗಯ ಮೂಲ ಶ್ರೀರಂಗಪಟ್ಟಣ ದಸರಾ ಆಗಿದೆ. 415ನೇ ದಸರಾ ಆಚರಣೆ ಶ್ರೀರಂಗಪಟ್ಟಣದಲ್ಲಿ ಸಕಲ ಸಿದ್ದತೆಯನ್ನು ಜಿಲ್ಲಾಡಳಿತ ಕೈಗೊಳ್ಳಲಾಗಿದೆ.
ಶ್ರೀರಂಗ ಪಟ್ಟಣದ ಕಿರಂಗೂರು ಬನ್ನಿ ಮಂಟಪದ ಬಳಿ ದಸರಾ ಜಂಬೂ ಸವಾರಿಗೆ ಚಾಲನೆ ನೀಡಲಾಯಿತು. ಕಿರಂಗೂರು ಬನ್ನಿ ಮಂಟಪದ ಬಳಿ ಜಂಬೂ ಸವಾರಿಗಾಗಿ ಸಕಲ ಸಿದ್ದತೆ ಕೈಗೊಳ್ಳಲಾಗಿದೆ. ದಸರಾ ಬನ್ನಿಮಂಟದ ಬಳಿ ಬನ್ನಿಮರಕ್ಕೆ ಪೂಜೆ ಸಲ್ಲಿಸಿ ಜಂಬೂ ಸವಾರಿಗೆ ಚಾಲನೆ ನೀಡಲಾಯಿತು.
ನಾಳೆ ಮಧ್ಯಾಹ್ನ ಅಭಿಜಿನ್ ಲಗ್ನದಲ್ಲಿ ಸಂಪ್ರದಾಯದಂತೆ ಅರ್ಚಕ ಭಾನುಪ್ರಕಾಶ್ ನೇತೃತ್ವದಲ್ಲಿ ಪೂಜಾ ಕೈಂಕರ್ಯ ನೆರವೇರಲಿದೆ. ಪೂಜೆ ಸಲ್ಲಿಕೆ ಬಳಿಕ ಗಣ್ಯರ ತಾಯಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆಯೊಂದಿಗೆ ಜಂಬೂ ಸವಾರಿಗೆ ಚಾಲನೆ ದೊರೆಯಲಿದೆ. ಕಿರಂಗೂರು ಬನ್ನಿ ಮಂಟಪದಿಂದ ಪಟ್ಟಣದ ರಂಗನಾಥ ದೇಗುಲವರೆಗೂ ಸಾಗಲಿರುವ ಜಂಬೂ ಸವಾರಿ ಮೆರವಣಿಗೆ ಸಾಗಲಿದೆ.
ಜಂಬೂ ಸವಾರಿಯ ಮೆರವಣಿಗೆಯಲ್ಲಿ ಸಾಗಲಿರುವ ಸ್ತಬ್ಧಚಿತ್ರ ಹಾಗು ಹಲವು ಕಲಾ ಪ್ರದರ್ಶನ ತಂಡಗಳು ಪಾಲ್ಗೊಳ್ಳಲಿದ್ದಾವೆ. ಆನೆಯ ಮೇಲೆ ಮೇಲಿನ ಮರದ ಅಂಬಾರಿಯಲ್ಲಿ ತಾಯಿ ಚಾಮುಂಡೇಶ್ವರಿತ ಕಂಚಿನ ವಿಗ್ರಹ ಮೆರವಣಿಗೆ ಸಾಗಲಿದೆ.
ದಸರಾ ಜಂಬೂ ಸವಾರಿಗೆ ಖ್ಯಾತ ಕನ್ನಡ ಚಲನಚಿತ್ರ ನಿರ್ದೇಶಕ ಟಿ.ಎಸ್.ನಾಗಭರಣ ಚಾಲನೆ ನೀಡಲಿದ್ದಾರೆ. ಶ್ರೀರಂಗ ಪಟ್ಟಣದ ರಂಗನಾಥ ಮೈದಾನದಲ್ಲಿ ನಾಲ್ಕು ದಿನ ದಸರಾ ವೇದಿಕೆ ಕಾರ್ಯಕ್ರಮ ನಡೆಯಲಿದೆ. ವೇದಿಕೆ ಕಾರ್ಯಕ್ರಮಕ್ಕಾಗಿ ರಂಗನಾಥ ಮೈದಾನದಲ್ಲಿ ವಿಶಾಲ ವೇದಿಕೆ ನಿರ್ಮಾಣವಾಗಿದೆ. ನಾಳಿನ ಶ್ರೀರಂಗಪಟ್ಟಣ ದಸರಾ ಕಾರ್ಯಕ್ರಮಕ್ಕಾಗಿ ಜಿಲ್ಲಾಡಳಿತದಿಂದ ಸಕಲ ಸಿದ್ದತೆ ಕೈಗೊಂಡಿದೆ.
ವರದಿ: ಗಿರೀಶ್ ರಾಜ್, ಮಂಡ್ಯ
ರಾಜ್ಯದಲ್ಲಿ ‘ರೇಷನ್ ಕಾರ್ಡ್’ ರದ್ದತಿಗೆ ಕಾರಣವೇನು? ನೀವು ಏನು ಮಾಡಬೇಕು? ಇಲ್ಲಿದೆ ಮಾಹಿತಿ | Ration Card Cancel
ಸಾಗರದಲ್ಲಿ ರಸ್ತೆ ಗುಂಡಿ ಮುಚ್ಚುವಂತೆ ಆಗ್ರಹಿಸಿ ಬಿಜೆಪಿಯಿಂದ ಪ್ರತಿಭಟನೆ