ರಾಜ್ಯ ಸರ್ಕಾರವು ಅಲ್ಪಸಂಖ್ಯಾತ ಸಮುದಾಯವರಿಗೆ ಸಿಹಿಸುದ್ದಿ ನೀಡಿದ್ದು, ಸ್ವಾವಲಂಬಿ ಸಾರಥಿ ಸೇರಿದಂತೆ ವಿವಿಧ ಯೋಜನೆಗಳಡಿ ಸಾಲ, ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ 2025-26 ನೇ ಸಾಲಿಗೆ ಅನುಷ್ಠಾನಗೊಳ್ಳುತ್ತಿರುವ ವೃತ್ತಿ ಪ್ರೋತ್ಸಾಹ ಯೋಜನೆ, ಶ್ರಮಶಕ್ತಿ ಯೋಜನೆ, ಸ್ವಾವಲಂಬಿ ಸಾರಥಿಯೋಜನೆ (ಪ್ಯಾಸೆಂಜರ್ ಅಟೋ ರಿಕ್ಷಾ, ಟ್ಯಾಕ್ಸಿ, ಗೂಡ್ಸ್), ನೇರಸಾಲ ವ್ಯಾಪಾರ ಉದ್ದಿಮೆ, ವಿದೇಶ ವ್ಯಾಸಾಂಗಕ್ಕೆ ಸಾಲ ಯೋಜನೆ, ಮಹಿಳಾ ಸ್ವ ಸಹಾಯ ಸಂಘ ಯೋಜನೆ, ಸಾಂತ್ವನ ಯೋಜನೆ, ರೇಷ್ಮೆ ನೂಲು ಬಿಚ್ಚಾಣಿಕೆ ಯೋಜನೆಗಳಡಿ ಸಾಲ, ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ವೆಬ್ಸೈಚಟ್ https://kmdconline.karnataka.gov.in ಮೂಲಕ ಅಕ್ಟೋಬರ 16, 2025ರೊಳಗಾಗಿ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ : 0836-2748226 ಗೆ ಸಂಪರ್ಕಿಸಬಹುದು ಎಂದು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.