ಬೆಂಗಳೂರು: ರಾಜ್ಯ ಸರಕಾರದ ‘ಸಿ’ ವೃಂದದ ಮೇಲ್ಪಟ್ಟ ಎಲ್ಲ ಅಧಿಕಾರಿ, ನೌಕರರ ಮುಂಬಡ್ತಿಗೆ ತರಬೇತಿ ಕಡ್ಡಾಯಗೊಳಿಸುವ ಸಂಬಂಧದ ನಿಯಮಾವಳಿ ಅಂತಿಮಗೊಳಿಸಲಾಗಿದ್ದು, ಇಂದು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ಸಿಗುವ ಸಾಧ್ಯತೆ ಇದೆ.
ರಾಜ್ಯ ಸರಕಾರದ ‘ಸಿ’ ವೃಂದ ಮೇಲ್ಪಟ್ಟ ಎಲ್ಲ ಅಧಿಕಾರಿ, ನೌಕರರಿಗೆ ಮುಂಬಡ್ತಿಗೆ ತರಬೇತಿ ಕಡ್ಡಾಯಗೊಳಿಸುವ ಮಹತ್ವದ ನಿರ್ಣಯವನ್ನು ರಾಜ್ಯ ಸಚಿವ ಸಂಪುಟ ಸಭೆ ಕೈಗೊಂಡಿದೆ. ಕೇಂದ್ರ ನಾಗರಿಕ ಸೇವಾ ಅಧಿ ಕಾರಿಗಳಿಗೆ ಸೇವಾವಧಿ ನಡುವೆ ಲಾಲ್ ಬಹದ್ದೂರ್ ಶಾಸ್ತ್ರಿ ಅಕಾಡೆಮಿಯಲ್ಲಿ ತರಬೇತಿ ವ್ಯವಸ್ಥೆ ಇದ್ದು, ಅದೇ ಮಾದರಿಯಲ್ಲಿ ರಾಜ್ಯ ಸರಕಾರದ ಎಲ್ಲ ಅಧಿಕಾರಿ ವರ್ಗಕ್ಕೆ ತರಬೇತಿಗೆ ನಿರ್ಧರಿಸಲಾಗಿದೆ. ಮುಂಬಡ್ತಿಗಾಗಿ ಈ ತರಬೇತಿಯನ್ನು ಕಡ್ಡಾಯಗೊಳಿಸಲು ನಿರ್ಧರಿಸಲಾಗಿದೆ ಎಂದು ಹೇಳಲಾಗಿದೆ.