ಶಿವಮೊಗ್ಗ: ರಾಜ್ಯ ಸರ್ಕಾರಿ ನೌಕರರು ಹಾಗೂ ಅವರ ಅವಲಂಬಿತ ಕುಟುಂಬದವರಿಗೆ ಆರೋಗ್ಯ ಸಂಜೀವಿನಿ ಯೋಜನೆಯನ್ನು ಸರ್ಕಾರ ಅಕ್ಟೋಬರ್.1, 2025ರಿಂದ ಜಾರಿಗೊಳಿ ಆದೇಶಿಸಿದೆ. ಇದಕ್ಕೆ ಕಾರಣರಾದಂತ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿಎಸ್ ಷಡಕ್ಷರಿಗೆ ಸಾಗರ ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಂತೋಷ್ ಕುಮಾರ್.ಎನ್ ಧನ್ಯವಾದ ತಿಳಿಸಿದ್ದಾರೆ.
ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು ಸರ್ಕಾರಿ ನೌಕರರ ಬಹು ದಿನಗಳ ಬೇಡಿಕೆಯಲ್ಲಿ ಸರ್ಕಾರಿ ನೌಕರರು ಹಾಗೂ ಅವರ ಅವಲಂಬಿತರಿಗೆ ಉಚಿತ ಚಿಕಿತ್ಸೆ ನೀಡುವಂತ ಆರೋಗ್ಯ ಸಂಜೀವಿನಿ ಯೋಜನೆ ಜಾರಿಗೆ ತರುವುದು ಒಂದಾಗಿತ್ತು. ನೌಕರರ ಬಹು ದಿನಗಳ ಬೇಡಿಕೆಯನ್ನು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಈಡೇರಿಸಿದ್ದಾರೆ. ಅವರಿಗೆ ನೌಕರರ ಬೇಡಿಕೆ ಈಡೇರಿಸಿದ ಅವರಿಗೆ ಧನ್ಯವಾದ ತಿಳಿಸಿದ್ದಾರೆ.
ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು ಸರ್ಕಾರಿ ನೌಕರರು, ಅವರ ಅವಲಂಬಿತ ಕುಟುಂಬಸ್ಥರಿಗೆ ಶತಾಯಗತಾಯ ಜಾರಿಗೊಳಿಸಲೇ ಬೇಕು ಎನ್ನುವ ಪಣವನ್ನು ರಾಜ್ಯಾಧ್ಯಕ್ಷ ಸಿಎಸ್ ಷಡಕ್ಷರಿ ತೊಟ್ಟಿದ್ದರು. ಅದರಂತೆ ಕಾರ್ಯರೂಪಕ್ಕೆ ತರುವಲ್ಲಿ ಯಶಸ್ವಿಯಾಗಿದ್ದಾರೆ. ಅವರ ಛಲ, ಅವಿರತ ಶ್ರಮದಿಂದ ಅಕ್ಟೋಬರ್.1, 2025ರಿಂದ ರಾಜ್ಯದಲ್ಲಿ ಉಚಿತ ಚಿಕಿತ್ಸಾ ಸೌಲಭ್ಯ ನೀಡುವಂತ ಆರೋಗ್ಯ ಸಂಜೀವಿನಿ ಜಾರಿಗೊಳ್ಳುತ್ತಿದೆ. ಇದಕ್ಕೆ ಕಾರಣ ಕರ್ತರಾದಂತ ನಮ್ಮ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿಎಸ್ ಷಡಕ್ಷರಿ ಅವರಿಗೆ ಸಾಗರ ತಾಲ್ಲೂಕು ಸರ್ಕಾರಿ ನೌಕರರ ಪರವಾಗಿ ಅಧ್ಯಕ್ಷ ಸಂತೋಷ್ ಕುಮಾರ್ ಎನ್ ಧನ್ಯವಾದ ಅರ್ಪಿಸಿದ್ದಾರೆ.
ರಾಜ್ಯದ ಸರ್ಕಾರಿ ನೌಕರರ ಇನ್ನೂ ಹಲವು ಬೇಡಿಕೆಗಳಿದ್ದಾವೆ. ಅದಲ್ಲೂ ಎನ್ ಪಿ ಎಸ್ ರದ್ದುಗೊಳಿಸಿ ಓಪಿಎಸ್ ಜಾರಿಗೊಳಿಸಬೇಕು ಎಂಬುದು ಪ್ರಮುಖ ಬೇಡಿಕೆಯಾಗಿದೆ. ಈ ಬೇಡಿಕೆಯನ್ನು ರಾಜ್ಯ ಸರ್ಕಾರ ಆದಷ್ಟು ಶೀಘ್ರದಲ್ಲೇ ಈಡೇರಿಸುವ ಭರವಸೆ ಇದೆ ಎಂಬುದಾಗಿ ಹೇಳಿದ್ದಾರೆ.
ರಾಜ್ಯದಲ್ಲಿ ಜಾತಿಗಣತಿ ಸಮೀಕ್ಷೆಗೆ ಹಾಜರಾಗದ ಶಿಕ್ಷಕರಿಗೆ ಶಾಕಿಂಗ್ ನ್ಯೂಸ್: ಹೊಸನಗರದಲ್ಲಿ ‘BRC ಸಸ್ಪೆಂಡ್’