ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ನಟ ದರ್ಶನ್ ಪ್ರಕರಣದಿಂದ ಕೈಬಿಡುವಂತೆ ಕೋರ್ಟಿಗೆ ಅರ್ಜಿ ಸಲ್ಲಿಸಿದ್ದಾರೆ. ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ 57 ಕೋರ್ಟ್ ಗೆ ನಟ ದರ್ಶನ್ ಅರ್ಜಿ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ. ಇದೆ ವೇಳೆ ಹಾಸಿಗೆ ದಿಂಬು ಸೇರಿದಂತೆ ಕನಿಷ್ಠ ಸೌಲಭ್ಯ ನೀಡುವಂತೆ ಕೂಡ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ಬಳಿಕ ಅಕ್ಟೋಬರ್ 9ಕ್ಕೆ ವಿಚಾರಣೆ ಮುಂದೂಡಿ ಕೋರ್ಟ್ ಆದೇಶ ಹೊರಡಿಸಿತು.
ಇದೀಗ ನಟ ದರ್ಶನ್ ಕೋರ್ಟ್ ಗೆ ಹಾಜರಾಗಿದ್ದಾರೆ. ಆರೋಪಿ ದರ್ಶನ್ ಪರವಾಗಿಲ್ಲ ಸುನೀಲ್ ವಾದ ಮಂಡಿಸಿದರು. ಇನ್ನು ಆರೋಪಿಗಳನ್ನು ಕ್ವಾರೆಂಟೈನಲ್ಲಿ ಇಟ್ಟಿದ್ದಾರೆ. ಜೈಲಿನ ಅಧಿಕಾರಿಗಳು ಆದೇಶ ಪಾಲಿಸುತ್ತಿಲ್ಲ. ಇದೆ ವೇಳೆ ಕೊಲೆ ಆರೋಪಿ ದರ್ಶನ್ ಗೆ ಜಡ್ಜ್ ಆದೇಶ ಪಾಲಿಸುತ್ತಿದ್ದಾರ ಎಂದು ಪ್ರಶ್ನಿಸಿದರು. ಆಗ ಇಲ್ಲ ಸರ್ ಯಾವ ಆದೇಶಗಳನ್ನು ಸಹಪಾಲಿಸುತ್ತಿಲ್ಲ. 25/3 ಫೀಟ್ ಮಾತ್ರ ಓಡಾಡಲು ಅವಕಾಶ ಕೊಟ್ಟಿದ್ದಾರೆ ವಾಕಿಂಗ್ ಮಾಡಲು ಸೂರ್ಯನ ಬೆಳಕು ಬರುತ್ತಿಲ್ಲ ಎಂದು ಆರೋಪಿ ದರ್ಶನ್ ಜಡ್ಜ್ ಗೆ ತಿಳಿಸಿದರು.
ಸಾಮಾನ್ಯ ಸೆಲ್ ಗೆ ಆರೋಪಿಗಳನ್ನು ಶಿಫ್ಟ್ ಮಾಡಿ ಎಂದು ದರ್ಶನ್ ಪರ ವಕೀಲರು ವಾದ ಮಂಡಿಸಿದರು ಕ್ವಾರಂಟೈನ್ಸ್ ಅಲ್ಲಿಂದ ಮಾಡುವಂತೆ ಮನವಿ ಮಾಡಿದರು. ಇದೇ ವೇಳೆ ಪವಿತ್ರ ಗೌಡ ಕೂಡ ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆಗೆ ಹಾಜರಾದರು. 20 ಬಾರಿ ಕೌಟ್ ಆರ್ಡರ್ ಕೇಳುತ್ತಾರೆ. ಇದು ಗುಂಡರಾಜ್ಯವೇ ಕೋರ್ಟ್ ಆರ್ಡರ್ ಗೆ ಮಾನ್ಯತೆ ನೀಡುತ್ತಿಲ್ಲ. ಜೈಲು ಅಧಿಕಾರಿಗಳ ವಿರುದ್ಧ ದರ್ಶನ್ ಪರವಾಗಿ ಆರೋಪ ಮಾಡಿದರು. ಈ ವೇಳೆ ಅಕ್ಟೋಬರ್ 9ಕ್ಕೆ ಕೋರ್ಟ್ ವಿಚಾರಣೆ ಮುಂದೂಡಿ ಆದೇಶ ಹೊರಡಿಸಿತು.