ದಾವಣಗೆರೆ: ಲಂಚ ಸ್ವೀಕರಿಸುತ್ತಿದ್ದಂತ ವೇಳೆಯಲ್ಲಿ ಲೋಕಾಯುಕ್ತ ಪೊಲೀಸರು ದಾಳಿಯನ್ನು ನಡೆಸಿ ಇಬ್ಬರು ಗ್ರಾಮ ಪಂಚಾಯ್ತಿ ಸದಸ್ಯರನ್ನು ರೆಡ್ ಹ್ಯಾಂಡ್ ಹಿಡಿರುವಂತ ಘಟನೆ ದಾವಣಗೆರೆಯಲ್ಲಿ ನಡೆದಿದೆ.
ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಹೊದಿಗೆರೆ ಗ್ರಾಮ ಪಂಚಾಯ್ತಿ ಸದಸ್ಯರಾದಂತ ಪ್ರದೀಪ್, ಶಿವಕುಮಾರ್ ಎಂಬುವರೇ ಲೋಕಾಯುಕ್ತ ಬಲೆಗೆ ಬಿದ್ದಂತವರಾಗಿದ್ದಾರೆ.
ಈ ಇಬ್ಬರು ಗುತ್ತಿಗೆದಾರ ಜಾವೇದ್ ನಿಂದ 10,000 ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುತ್ತ ಪೊಲೀಸರು ದಾಳಿ ನಡೆಸಿದ್ದಾರೆ. ಲಂಚ ಪಡೆಯಲು ಸಹಾಯ ಮಾಡ್ತಿದ್ದ ಮಧ್ಯವರ್ತಿ ಮಂಜುನಾಥ್ ಎಂಬುವರನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಲೋಕಾಯುಕ್ತ ಎಸ್ ಪಿ ಎಂ ಎಸ್ ಕೌಲಾಪುರ ನೇತೃತ್ವದಲ್ಲಿ ಈ ದಾಳಿಯನ್ನು ನಡೆಸಲಾಗಿದೆ. ಇದೀಗ ಚನ್ನಗಿರಿಯ ಹೊದಿಗೆರೆ ಗ್ರಾಮ ಪಂಚಾಯ್ತಿ ಸದಸ್ಯರಾದಂತ ಪ್ರದೀಪ್, ಶಿವಕುಮಾರ್ ಅವರನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಬಿಜೆಪಿಯವರು ಬೆಂಗಳೂರಿನಲ್ಲಿ ಸಣ್ಣ ಪಿಲ್ಲರ್ ಕೂಡ ಹಾಕಿಲ್ಲ, ಒಂದು ಮೇಲ್ಸೇತುವೆಯನ್ನೂ ಮಾಡಿಲ್ಲ: ಡಿಕೆಶಿ