ಬೆಂಗಳೂರು : ರಾಜ್ಯ ಸರ್ಕಾರವು ಗ್ರಾಮ ಸಹಾಯಕರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಕಂದಾಯ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ 10,450 ಗ್ರಾಮ ಸಹಾಯಕರು ಸೇವೆಯಿಂದ ನಿವೃತ್ತಿ ಹೊಂದಿದಾಗ ಇಲ್ಲವೇ ಸೇವೆಯಲ್ಲಿರುವಾಗಲೇ ಮೃತಪಟ್ಟರೆ 5 ಲಕ್ಷ ರೂ. ಇಡುಗಂಟು ನೀಡುವ ಮಹತ್ವ ನಿರ್ಧಾರವನ್ನು ಗುರುವಾರ ನಡೆದ ಸಚಿವ ಸಂಪುಟ ಸಭೆ ತೆಗೆದುಕೊಂಡಿದೆ.
ಗ್ರಾಮ ಸಹಾಯಕರ ಸೇವೆಯನ್ನು ಗ್ರೂಪ್ -ಡಿ ಹುದ್ದೆಯಲ್ಲಿ ಸಕ್ರಮ ಗೊಳಿಸುವ ಇಲ್ಲವೇ ಸದ್ಯ ನೀಡುತ್ತಿರುವ ಗೌರವ ಧನವನ್ನು 15000 ರೂ.ನಿಂದ 27,000 ರೂ.ಗೆ ಹೆಚ್ಚಿಸುವ ಪ್ರಸ್ತಾವವೂ ಸರ್ಕಾರದ ಮುಂದಿದ್ದು, ಕಂದಾಯ ಇಲಾಖೆಯಲ್ಲಿನ 10,450 ಗ್ರಾಮ ಸಹಾಯಕರು ನಿವೃತ್ತಿಯಾದಾಗ ಇಲ್ಲವೇ ಸೇವೆಯಲ್ಲಿದ್ದಾಗಲೇ ಮೃತಪಟ್ಟರೆ 5 ಲಕ್ಷ ರೂ, ಇಡುಗಂಟು ನೀಡಲು ತೀರ್ಮಾನಿಸಲಾಗಿದೆ ಎಂದು ಸಚಿವ ಎಚ್.ಕೆ.ಪಾಟೀಲ್ ಹೇಳಿದರು.
ಸಚಿವ ಸಂಪುಟದ ಪ್ರಮುಖ ನಿರ್ಣಯಗಳು
ಕೇಂದ್ರ ಸರ್ಕಾರದ 15ನೇ ಹಣಕಾಸು ಆಯೋಗದ ಯೋಜನೆಯಡಿ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳು ಇಲಾಖೆಯ ವಿಸ್ತರಣೆ ಹಾಗೂ ಆಧುನೀಕರಣದ ರೂ.329.00 ಕೋಟಿಗಳ ಪರಿಷ್ಕೃತ ಕ್ರಿಯಾ ಯೋಜನೆಗೆ ಆಡಳಿತಾತ್ಮಕ ಅನುಮೋದನೆ.
ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲ್ಲೂಕಿನಲ್ಲಿ ಹೊಸದಾಗಿ ತಾಲ್ಲೂಕು ಪ್ರಜಾಸೌಧ ಕಟ್ಟಡವನ್ನು ರೂ.16 ಕೋಟಿಗಳ ಅಂದಾಜು ಮೊತ್ತದಲ್ಲಿ ನಿರ್ಮಿಸಲು ಆಡಳಿತಾತ್ಮಕ ಅನುಮೋದನೆ.
”ಶ್ರೀ ಮಲೈ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ (ತಿದ್ದುಪಡಿ) ಮಸೂದೆ, 2025”ಕ್ಕೆ ಅನುಮೋದನೆ.
ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣ ನಗರಕ್ಕೆ 2ನೇ ಹಂತದ ಒಳಚರಂಡಿ ವ್ಯವಸ್ಥೆ ಒದಗಿಸುವ ಯೋಜನೆಯ ರೂ.128.74 ಕೋಟಿಗಳ ಪರಿಷ್ಕೃತ ಡಿಪಿಆರ್‌ಗೆ ಆಡಳಿತಾತ್ಮಕ ಅನುಮೋದನೆ.
ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ಘಟಕದ ಅಧೀನದಲ್ಲಿ ಹೊಸದಾಗಿ ಸ್ಥಾಪಿಸಿರುವ ಎರಡು ಐ.ಆರ್ೆ.ಬಿ ಪಡೆಗಳಿಗೆ ಅವಶ್ಯಕವಿರುವ ಮೂಲಭೂತ ವಸತಿ/ ವಸತಿಯೇತರ ಸೌಕರ್ಯಗಳನ್ನು ರೂ.60 ಕೋಟಿಗಳ ಅಂದಾಜು ವೆಚ್ಚದಲ್ಲಿ ಕಲ್ಪಿಸಲು ನಿರ್ಧಾರ.
ಇನ್‌ಸ್ಟಿಟ್ಯೂಟ್ ಆಫ್ ಗ್ಯಾಸ್ಟೋಎಂಟ್ರಾಲಜಿ ಸೈನ್ಸಸ್ ಅಂಡ್ ಆರ್ಗನ್ ಟ್ರಾನ್ಸ್‌ಪ್ಲಾಂಟ್, ಬೆಂಗಳೂರು ಸಂಸ್ಥೆಗೆ ಅವಶ್ಯವಿರುವ ರೋಬೋಟಿಕ್ ವೈದ್ಯಕೀಯ ಉಪಕರಣವನ್ನು ರೂ.20 ಕೋಟಿಗಳ ಅಂದಾಜು ಮೊತ್ತದಲ್ಲಿ ಖರೀದಿಸಲು ಆಡಳಿತಾತ್ಮಕ ಅನುಮೋದನೆ.
ಮುಖ್ಯಮಂತ್ರಿ @siddaramaiah ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡ ಪ್ರಮುಖ ನಿರ್ಣಯಗಳು ಹೀಗಿವೆ #CabinetDecisions pic.twitter.com/V17rWx15l2
— DIPR Karnataka (@KarnatakaVarthe) September 25, 2025