ಮಂಡ್ಯ: ರಾಜ್ಯದಲ್ಲಿ ಭೀಕರ ಅಪಘಾತ ಎನ್ನುವಂತೆ ಸ್ಕೈವಾಕ್ ಕಂಬಕ್ಕೆ ಬೈಕ್ ಡಿಕ್ಕಿಯಾದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದ ತೀವ್ರತೆಗೆ ರಾಯಲ್ ಎನ್ ಫೀಲ್ಡ್ ಬೈಕ್ ನಜ್ಜುಗುಜ್ಜಾಗಿದ್ದರೇ, ಸವಾರರಿಬ್ಬರ ದೇಹಗಳು ಛಿದ್ರ ಛಿದ್ರಗೊಂಡಿದ್ದಾವೆ.
ಮಂಡ್ಯದಲ್ಲಿ ಭೀಕರ ರಸ್ತೆ ಅಪಘಾತ ಯುವಕರಿಬ್ಬರ ದೇಹ ಛಿದ್ರ ಛಿದ್ರವಾಗಿವೆ. ಸ್ಕೈವಾಕ್ ಕಂಬಕ್ಕೆ ರಾಯಲ್ ಎನ್ಫೀಲ್ಡ್ ಬೈಕ್ ಡಿಕ್ಕಿ, ಸ್ಥಳದಲ್ಲೇ ಇಬ್ಬರೂ ಸಾವನ್ನಪ್ಪಿದ್ದಾರೆ. ಮಂಡ್ಯದ ಬೆಂ-ಮೈ ಹೆದ್ದಾರಿಯ ಸರ್ಕಾರಿ ಮಹಿಳಾ ಕಾಲೇಜು ಬಳಿ ಘಟನೆ ನಡೆದಿದೆ.
ನೂತನವಾಗಿ ನಿರ್ಮಾಣವಾಗಿರುವ ಸ್ಕೈವಾಕ್ ಗೆ ಬೈಕ್ ಡಿಕ್ಕಿಯಾಗಿ ಭೀಕರ ಅಪಘಾತಕ್ಕೆ ಯುವಕರಿಬ್ಬರ ದೇಹ ಛಿದ್ರ ಛಿದ್ರಗೊಂಡಿವೆ. ಮಂಡ್ಯದ ಉದಯಗಿರಿ ಹಾಗೂ ಯತ್ತಗದಹಳ್ಳಿಯ ಡ್ಯಾನಿಲ್(20) ಜೋಶ್ ಆ್ಯಲ್ಡ್ಸ್ ( 20) ಮೃತ ಯುವಕರಾಗಿದ್ದಾರೆ.
ಬೆಂಗಳೂರಿನಿಂದ ಮಂಡ್ಯಕ್ಕೆ ಬೈಕ್ ನಲ್ಲಿ ಯುವಕರು ಬರುತ್ತಿದ್ದರು. ಈ ವೇಳೆ ಬೆಂ-ಮೈ ಹೆದ್ದಾರಿಯಲ್ಲಿದ್ದ ಸ್ಕೈವಾಕ್ ಕಂಬಕ್ಕೆ ರಭಸವಾಗಿ ಬೈಕ್ ಡಿಕ್ಕಿಯಾಗಿದೆ. ಢಿಕ್ಕಿ ರಭಸಕ್ಕೆ ಯುವಕರ ದೇಹ ಛಿದ್ರ ಛಿದ್ರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಪೊಲೀಸರ ಭೇಟಿ ನೀಡಿ ಪರಿಶೀಲಿಸಿದರು. ಮೃತ ದೇಹಗಳನ್ನು ಮಂಡ್ಯ ಮಿಮ್ಸ್ ಶವಗಾರಕ್ಕೆ ರವಾನಿಸಲಾಗಿದೆ. ಈ ಸಂಬಂಧ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ವರದಿ: ಗಿರೀಶ್ ರಾಜ್, ಮಂಡ್ಯ
ಬೆಂಗಳೂರಿನ 1,200 ಚದುರ ಅಡಿಗಿಂತ ಹೆಚ್ಚಿನ ವಿಸ್ತೀರ್ಣದ ಕಟ್ಟಡ ಮಾಲೀಕರಿಗೆ ಸರ್ಕಾರ ಗುಡ್ ನ್ಯೂಸ್
ಕಡೂರು, ತರೀಕೆರೆ ಬಸ್ ನಿಲ್ದಾಣಕ್ಕೆ, ಕಡೂರಲ್ಲಿ ವಸತಿಗೃಹ ನಿರ್ಮಾಣಕ್ಕೆ ಸಚಿವ ರಾಮಲಿಂಗಾರೆಡ್ಡಿ ಶಂಕುಸ್ಥಾಪನೆ