ಬೆಂಗಳೂರು: ನಗರದಲ್ಲಿ ಸೀರೆ ಅಂಗಡಿಯಲ್ಲಿ ಸೀರೆ ಕದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆಯೊಬ್ಬರನ್ನು ಸಾರ್ವಜನಿಕರ ಎದುರು ಅಂಗಡಿ ಮಾಲೀಕ ಹಿಗ್ಗಾಮುಗ್ಗ ಥಳಿಸಿದ್ದರು. ಗುಪ್ತಾಂಗಕ್ಕೂ ಒದ್ದು ಹಲ್ಲೆ ಮಾಡಿದ್ದರು. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದಂತ ಪೊಲೀಸರು ಅಂಗಡಿ ಮಾಲೀಕ ಉಮೇದ್ ರಾಮ್ ಬಂಧಿಸಿದ್ದಾರೆ.
ಬೆಂಗಳೂರಲ್ಲಿ ಸ್ಯಾರಿ ಅಂಗಡಿಯೊಂದರಲ್ಲಿ ಸೀರೆ ಕದ್ದ ಕಾರಣಕ್ಕೆ ಮಹಿಳೆಯೊಬ್ಬರನ್ನು ಅಂಗಡಿ ಮಾಲೀಕ ಉಮೇದ್ ರಾಮ್ ಎಂಬಾತ ಸಾರ್ವಜನಿಕರ ಎದುರು ಕಾಲಿನಿಂದ ಒದ್ದು ಹಲ್ಲೆ ಮಾಡಿದ್ದಂತ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ಸಂಬಂಧ ಸುಮೋಟೋ ಕೇಸ್ ದಾಖಲಿಸಿದಂತ ಪೊಲೀಸರು ಸೀರೆ ಅಂಗಡಿ ಮಾಲೀಕ ಉಮೇದ್ ರಾಮ್ ಎಂಬಾತನನ್ನು ಕೆ ಆರ್ ಮಾರ್ಕೆಟ್ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಅಂದಹಾಗೇ ಆಂಧ್ರಪ್ರದೇಶ ಮೂಲದ ಹಂಪಮ್ಮ ಎಂಬಾಕೆ ಸೀರೆ ಅಂಗಡಿಯಲ್ಲಿ 50ಕ್ಕೂ ಹೆಚ್ಚು ಸೀರೆಗಳನ್ನು ಕದ್ದಿದ್ದರು. ಈ ಎಲ್ಲಾ ದೃಶ್ಯಾವಳಿಯು ಅಂಗಡಿಯಲ್ಲಿನ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ನಿನ್ನೆ ಸೀರೆ ಕದಿಯುತ್ತಿದ್ದಂತ ಸಂದರ್ಭದಲ್ಲಿ ರೆಡ್ ಹ್ಯಾಂಡ್ ಸಿಕ್ಕಿ ಬಿದ್ದಿದ್ದರು. ಈ ಕಾರಣಕ್ಕೆ ಅಂಗಡಿಯ ಮುಂಭಾಗಕ್ಕೆ ಎಳೆದು ತಂದಿದ್ದಂತ ಮಾಲೀಕ ಉಮೇದ್ ರಾಮ್, ಕಾಲಿನಿಂದ ಥಳಿಸಿ ಹಲ್ಲೆ ಮಾಡಿದ್ದರು. ಈ ಎಲ್ಲಾ ಘಟನೆಯನ್ನು ಸಾರ್ವಜನಿಕರು ಮೊಬೈಲ್ ನಲ್ಲಿ ವೀಡಿಯೋ ಮಾಡಿಕೊಂಡು, ಸಾಮಾಜಿಕ ಮಾಧ್ಯಮಗಳಲ್ಲಿ ಶೇರ್ ಮಾಡಿ, ಆಕ್ರೋಶ ಹೊರ ಹಾಕಿದ್ದರು.







