ಮಹಿಷಾಸುರನ ನಾಶಕ್ಕಾಗಿ ಅವತಾರ ತಾಳಿದ ಶ್ರೀ ದೇವಿಯ ಉತ್ಸವ ಎಂದರೆ ನವರಾತ್ರಿ, ನವರಾತ್ರಿಯಲ್ಲಿ ಶ್ರೀ ದೇವಿಯ ಉಪಾಸನೆಯನ್ನು ಭಕ್ತಿ ಶ್ರದ್ಧೆಯಿಟ್ಟು ಮಾಡುವುದರಿಂದ ದೇವಿತತ್ತ್ವದ ಲಾಭವಾಗುತ್ತದೆ.
ಸಾಧಕರ ದೃಷ್ಟಿಯಲ್ಲಿ ಈ ‘ರಾತ್ರಿ’ಗಳು ಮಹತ್ವಪೂರ್ಣವಾಗಿರುತ್ತವೆ. ಹೀಗೆ ಬಹಳಷ್ಟು ರೀತಿಯ ರಾತ್ರಿಗಳಿರುತ್ತವೆ, ಉದಾ. ಕಾಲರಾತ್ರಿ, ಶಿವರಾತ್ರಿ, ಮೋಹರಾತ್ರಿ, ವೀರರಾತ್ರಿ, ದಿವ್ಯರಾತ್ರಿ, ದೇವರಾತ್ರಿ ಇತ್ಯಾದಿ. ಇವುಗಳಲ್ಲಿ ಭಗವತಿ ತತ್ವವನ್ನು ಜಾಗೃತಗೊಳಿಸಬೇಕಾಗುತ್ತದೆ; ನವರಾತ್ರಿಯಲ್ಲಿನ ಮೊದಲ ಮೂರು ದಿನಗಳಂದು ತಮೋಗುಣವನ್ನು ಕಡಿಮೆ ಮಾಡಲು ತಮೋಗುಣಿ ಮಹಾಕಾಳಿಯ, ನಂತರದ ಮೂರು ದಿನಗಳಂದು ರಜೋಗುಣವನ್ನು ವೃದ್ಧಿಸಲು ಮಹಾಲಕ್ಷ್ಮೀಯ ಮತ್ತು ಕೊನೆಯ ಮೂರು ದಿನಗಳಂದು ಸಾಧನೆಯನ್ನು ತೀವ್ರವಾಗಿ ಮಾಡಲು ಸತ್ತ್ವಗುಣಿ ಮಹಾಸರಸ್ವತಿಯ ಪೂಜೆಯನ್ನು ಮಾಡುತ್ತಾರೆ.
ನವರಾತ್ರಿಯ ಬಗ್ಗೆ ಧರ್ಮಶಾಸ್ತ್ರವು ಏನು ಹೇಳುತ್ತದೆ ? :
‘ರಾತ್ರಿ’ ಎಂದರೆ ಆಗುತ್ತಿರುವ ಬದಲಾವಣೆ. ದೇವಿಯ ಒಂದು ಹೆಸರು ‘ಕಾಲರಾತ್ರಿ’ ಎಂದಾಗಿದೆ. ‘ಕಾಲರಾತ್ರಿ’ ಎಂದರೆ ಕಾಲಪುರುಷನಲ್ಲಿ ಬದಲಾವಣೆ ಮಾಡುವವಳು. ತಿರುಗುವುದು ಪೃಥ್ವಿಯ ಗುಣಧರ್ಮವಾಗಿದೆ. ಪೃಥ್ವಿಯು ತಿರುಗುತ್ತಿರುವುದರಿಂದ ಬದಲಾವಣೆಗಳು ಆಗುತ್ತಿರುತ್ತವೆ, ಅಂದರೆ ರಾತ್ರಿ ಮತ್ತು ಹಗಲು ಆಗುತ್ತವೆ. ಇಂತಹ ಬದಲಾವಣೆಗಳನ್ನು ಸಹಿಸುವ ಶಕ್ತಿಯು ಶರೀರದಲ್ಲಿರಬೇಕೆಂದು ವ್ರತ-ವೈಕಲ್ಯಗಳನ್ನು ಮಾಡುತ್ತಾರೆ.
ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ, ದೃಷ್ಟಿ ದೋಷ, ಮನೆಯಲ್ಲಿ ದಟ್ಟದರಿದ್ರ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬದ ಕಷ್ಟ, ಹಣಕಾಸಿನ ಅಡಚಣೆ, ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಲು ಈಗಲೇ ಕರೆ ಮಾಡಿ 9686268564
ನವರಾತ್ರಿಯ ಇತಿಹಾಸ :
ರಾಮನಿಂದ ರಾವಣನ ವಧೆಯಾಗಬೇಕೆಂದು ನಾರದರು ರಾಮನಿಗೆ ಶರವನ್ನರಾತ್ರಿ ವ್ರತವನ್ನು ಮಾಡಲು ಹೇಳಿದ್ದರು. ಈ ವ್ರತವನ್ನು ಪೂರ್ಣಗೊಳಿಸಿದ ನಂತರ ರಾಮನು ಲಂಕೆಯ ಮೇಲೆ ಆಕ್ರಮಣ ಮಾಡಿ ಯುದ್ಧದಲ್ಲಿ ರಾವಣನನ್ನು ವಧಿಸಿದನು.
ದೇವಿಯು, ಮಹಿಷಾಸುರನೆಂಬ ರಾಕ್ಷಸನೊಂದಿಗೆ ಪಾಡ್ಯದಿಂದ ನವಮಿಯವರೆಗೆ ಒಂಬತ್ತು ದಿನಗಳ ಕಾಲ ಯುದ್ಧವನ್ನು ಮಾಡಿ ನವಮಿಯ ರಾತ್ರಿ ಅವನನ್ನು ಕೊಂದಳು. ಅಂದಿನಿಂದ ಅವಳಿಗೆ ಮಹಿಷಾಸುರಮರ್ದಿನಿ ಎನ್ನತೊಡಗಿದರು.
ನವರಾತ್ರಿಯ ಆಚರಣೆಯ ಮಹತ್ವ:
ಜಗತ್ತಿನಲ್ಲಿ ಯಾವಾಗ ತಾಮಸಿಕ, ಅಸುರೀ ಮತ್ತು ಕ್ರೂರ ಜನರು ಪ್ರಬಲರಾಗಿ ಸಾತ್ತ್ವಿಕ ಮತ್ತು ಧರ್ಮನಿಷ್ಠ ಸಜ್ಜನರನ್ನು ಪೀಡಿಸುತ್ತಾರೆಯೋ, ಆಗ ದೇವಿಯು ಧರ್ಮಸಂಸ್ಥಾಪನೆಗಾಗಿ ಪುನಃ ಪುನಃ ಅವತಾರ ತಾಳುತ್ತಾಳೆ. ಇದು ಆ ದೇವಿಯ ವ್ರತವಾಗಿದೆ.
ನವರಾತ್ರಿಯಲ್ಲಿ ದೇವಿತತ್ತ್ವವು ಎಂದಿಗಿಂತ ೧೦೦೦ ಪಟ್ಟು ಹೆಚ್ಚು ಕಾರ್ಯನಿರತವಾಗಿರುತ್ತದೆ.
ನವರಾತ್ರಿ ವ್ರತವನ್ನು ಆಚರಿಸುವ ಪದ್ಧತಿ :
‘ಅಖಂಡ ದೀಪಪ್ರಜ್ವಲನೆ ಅಂದರೆ ನವರಾತ್ರಿಯ ೯ ದಿನಗಳಲ್ಲಿಯೂ ಸತತವಾಗಿ ದೀಪವನ್ನು ಉರಿಸುವುದು, ಶ್ರೀ ದೇವಿಯ ಮಹಾತ್ಮೆಯ ಪಠಣ (ಚಂಡೀಪಾಠ), ಸಪ್ತ ಶತಿಪಾಠ, ದೇವಿಭಾಗವತ, ಸರಸ್ವತಿಪೂಜೆ, ಉಪವಾಸ, ಜಾಗರಣೆ ಮುಂತಾದ ವಿವಿಧ ಕಾರ್ಯಕ್ರಮಗಳನ್ನು ನಡೆಸಿ ಅವರವರ ಶಕ್ತಿಸಾಮರ್ಥ್ಯಕ್ಕನುಸಾರವಾಗಿ ನವರಾತ್ರಿ ಮಹೋತ್ಸವವನ್ನು ಆಚರಿಸುತ್ತಾರೆ.
ನವದುರ್ಗೆಯರು:
ಮಾರ್ಕಂಡೇಯ ಋಷಿಗಳು ಬರೆದಿರುವ ದುರ್ಗಾಸಪ್ತಶತಿ ಎಂಬ ಗ್ರಂಥವು ತಂತ್ರ ಮತ್ತು ಮಂತ್ರ ಈ ಎರಡೂ ಮಾರ್ಗಗಳಲ್ಲಿ ಪ್ರಸಿದ್ಧವಾಗಿದ್ದು ಭಾರತದಲ್ಲಿ ಇಂದು ಲಕ್ಷಾಂತರ ಜನರು ಸಪ್ತಶತಿಯ ಪಠಣ ಮಾಡುತ್ತಿರುವುದು ಕಂಡುಬರುತ್ತದೆ. ಭಗವಾನ ಹಿರಣ್ಯಗರ್ಭ ಮುನಿಗಳು ಮಂತ್ರಯೋಗ ಸಮೀಕ್ಷೆಯಲ್ಲಿ ಹೇಳಿರುವ ಶ್ರೀ ದುರ್ಗಾಸಪ್ತಶತಿಯಲ್ಲಿನ ದೇವಿಯ ಹೆಸರುಗಳ ಶಾಸ್ತ್ರೀಯ ಅರ್ಥ ಮತ್ತು ಇಂದಿನ ಭೌತಿಕ ವಿಜ್ಞಾನವು ಮಾಡಿರುವ ಪ್ರಗತಿಯ ಬಗ್ಗೆ ಇಲ್ಲಿ ನಾವು ವಿಚಾರ ಮಾಡೋಣ.
೧. ಶೈಲಪುತ್ರಿ : ‘ಶೈಲಮ್’ ಅಂದರೆ ಯಾವ ಪರ್ವತದಲ್ಲಿ ಮಾಣಿಕ್ಯ, ರತ್ನ ಮತ್ತಿತರ ಅತ್ಯಮೂಲ್ಯ ವಸ್ತುಗಳ ಸಂಗ್ರಹವಿದೆಯೋ, ಅಂತಹ ಪರ್ವತ. ಈ ಅತ್ಯಮೂಲ್ಯ ವಸ್ತುಗಳ ಸಂಗ್ರಹವನ್ನು ನೋಡಿಯೂ ಭೌತಿಕ ಸುಖದೆಡೆಗೆ ಆಕರ್ಷಿತಗೊಳ್ಳದೆ, ಭೌತಿಕತೆಯ ತ್ಯಾಗವನ್ನು ಮಾಡಿ ಆತ್ಮಜ್ಞಾನವನ್ನು ಪಡೆಯಲು ಪ್ರವೃತ್ತವಾಗುವವಳೆಂದರೆ ಶೈಲಪುತ್ರಿ.
೨. ಬ್ರಹ್ಮಚಾರಿಣಿ : ‘ಬ್ರಹ್ಮಚಾರಯಿತುಂ ಶೀಲಂ ಯಸ್ಯಾಃ ಸಾ ಬ್ರಹ್ಮಚಾರಿಣಿ|’ ಅಂದರೆ ಬ್ರಹ್ಮರೂಪವಾಗುವುದು ಯಾರ ಶೀಲವಾಗಿದೆಯೋ ಮತ್ತು ಯಾರ ಆಚಾರಗಳು ಅದರಂತಿವೆಯೋ ಅವಳೇ ಬ್ರಹ್ಮಚಾರಿಣಿ.
೩. ಚಂದ್ರಘಂಟಾ : ‘ಚಂದ್ರಃ ಘಂಟಾಯಾಂ ಯಸ್ಯಾ ಸಾ ಚಂದ್ರಘಂಟಾ| ಆಹ್ಲಾದಯತಿ ಇತಿ ಚಂದ್ರಃ|’ ಅಂದರೆ ಆಹ್ಲಾದಕಾರಕ ಚಂದ್ರನು ಯಾರ ದ್ವಾರದಲ್ಲಿ ಸ್ಥಿರವಾಗಿದ್ದಾನೆಯೋ ಅವಳೇ ಚಂದ್ರಘಂಟಾ. ಆಹ್ಲಾದವೆಂದರೆ ಮಮತೆ, ಕ್ಷಮಾಶೀಲತೆ ಮತ್ತು ವಾತ್ಸಲ್ಯ ಈ ಮೂರೂ ಗುಣಗಳ ಸಮ್ಮಿಲಿತ ಸ್ಥಿತಿ.
೪. ಕೂಷ್ಮಾಂಡಾ : ‘ಕುತ್ಸಿತಃ ಉಷ್ಮಾಃ ಕೂಷ್ಮಾಃ|’ ಕುತ್ಸಿತಃ ಅಂದರೆ ಸಹಿಸಲು ಕಠಿಣ ವಾದುದು. ಉಷ್ಮಾ ಎಂದರೆ ಸೂಕ್ಷ್ಮ ಲಹರಿಗಳ ಗೊಂದಲ (ಧ್ವನಿ). ‘ತ್ರಿವಿಧತಾಪಯುಕ್ತಃ ಸಂಸಾರಃ ಸ ಅಂಡೇ ಮಾಂಸಪೇಶ್ಯಾಮ್ ಉದರರೂಪಾಯಾಂ ಯಸಾಃ ಸಾ ಕೂಷ್ಮಾಂಡಾ|’ ಇದರ ಅರ್ಥವು ಹೀಗಿದೆ ? ತ್ರಿವಿಧತಾಪಗಳೆಂದರೆ ಉತ್ಪತ್ತಿ (ಜನ್ಮ), ಸ್ಥಿತಿ (ಬೆಳವಣಿಗೆ) ಮತ್ತು ಲಯ (ಮೃತ್ಯು). ‘ಮೃತ್ಯು (ಮೋಕ್ಷ) ಅಂದರೆ ಅನಿಶ್ಚಿತ ಕಾಲಾವಧಿಯ ವರೆಗೆ ವಿಶಿಷ್ಟ ಪದ್ಧತಿಯಿಂದ ನಾಶವಾಗುವುದು’. ‘ಸಂಸಾರ’ವೆಂದರೆ ‘ಪುನಃಪುನಃ’ ಮತ್ತು ‘ಅಂಡಃ’ ಅಂದರೆ ‘ವಿಶಿಷ್ಟ ನಿಯಂತ್ರಣದಿಂದ ಯುಕ್ತವಾಗಿರುವ ಕೋಶ.’ ಮಾಂಸ, ಜೀವಕೋಶಗಳು, ಉದರ ಮತ್ತು ರೂಪ ಇವುಗಳಿಂದ ಯುಕ್ತಸಂಪನ್ನವಾದ ಜೀವಗಳು ಈ ಕೋಶದಲ್ಲಿ ತ್ರಿವಿಧ ತಾಪಗಳ ಪುನರಾವೃತ್ತಿಯ ಅವಸ್ಥೆಯಿಂದ ಪುನಃಪುನಃ ಹೋಗುತ್ತಾರೆ. ಈ ಪ್ರಕ್ರಿಯೆಯಿಂದ ಬಿಡುಗಡೆ ಹೊಂದಲು ಯಾರ ಕೃಪೆಯ ಆವಶ್ಯಕತೆಯಿದೆಯೋ ಅವಳೇ ಕೂಷ್ಮಾಂಡಾ.
೫. ಸ್ಕಂದಮಾತಾ : ‘ಭಗಃ’ ಎಂದರೆ ತೇಜಸ್ಸು. ‘ಭಗವತಿ’ ಎಂದರೆ ‘ವಿಶಿಷ್ಟ ಯೋಗ್ಯತೆ ಯುಳ್ಳ ಸ್ಪಂದನ ಲಹರಿಗಳಿಂದ ಯುಕ್ತವಾದಂತಹ ತೇಜಸ್ಸು’. ಬ್ರಹ್ಮದೇವ ಮತ್ತು ಭಗವತಿ ದೇವಿಯ ಸಮ್ಮಿಲಿತ ಅವಸ್ಥೆಯಿಂದ ಸನತ್ಕುಮಾರ ಅಥವಾ ಸ್ಕಂದ ಎಂಬ ಹೆಸರಿನ ವಿಶಿಷ್ಟ ರಚನೆಯ ಕಿರಣ ಸಮೂಹವು ಉತ್ಪನ್ನವಾಯಿತು. ಭೂಲೋಕದಿಂದ ಸತ್ಯಲೋಕದ ವರೆಗಿನ ಲೋಕಗಳನ್ನು ‘ಸ್ಕಂದರೇಷೆ’ ಎನ್ನುತ್ತಾರೆ. ಭೂಲೋಕದಿಂದ ಸತ್ಯಲೋಕದವರೆಗಿನ ವ್ಯಾಹ್ಯತಿಗಳ ಮೇಲೆ ಸ್ಕಂದರೇಷೆಯ ನಿಯಂತ್ರಣವಿದೆ. ವ್ಯಾಹ್ಯತಿ ಅಂದರೆ ಗೂಢ ಸ್ವರ ಅಥವಾ ಮಂತ್ರ. ಸಪ್ತಲೋಕಗಳ ಹೆಸರುಗಳಂತೆ ಅನುಕ್ರಮವಾಗಿ ಭೂಃ, ಭುವಃ, ಸ್ವಃ, ಮಹಃ, ಜನಃ, ತಪಃ ಮತ್ತು ಸತ್ಯ ಇವು ಏಳು ವ್ಯಾಹ್ಯತಿಗಳಾಗಿವೆ. ಈ ಏಳೂ ಲೋಕಗಳ ನಿಯಂತ್ರಕರ ಮಾತೆಯೇ ಸ್ಕಂದಮಾತೆ. ಈ ಏಳೂ ಲೋಕಗಳಿಂದ ಪಾರಾಗಿ ಹೋಗಲು ಯಾರ ಸಹಾಯ ಬೇಕಾಗುತ್ತದೆಯೋ ಅವಳಿಗೆ ಸ್ಕಂದಮಾತೆ ಎನ್ನುತ್ತಾರೆ.
೬. ಕಾತ್ಯಾಯನಿ : ‘ಕಾತ್ಯಾಯನಸ್ಯ ಅಪತ್ಯಂ ಸ್ತ್ರೀ ಕಾತ್ಯಾಯನಿ|’ (ಕಾತ್ಯಾಯನನ ಮಗಳು ಕಾತ್ಯಾಯನಿ) ‘ಅಯನ’ ಎಂದರೆ ‘ಹಲವಾರು ನಕ್ಷತ್ರ ಸಮೂಹಗಳಿಂದ ಯುಕ್ತವಾಗಿರುವ ಭಾಗ’. ಕಾತ್ಯಾಯನ ಋಷಿಗಳು ಇಂತಹ ಒಂದು ಅಯನದ ಪಾಲಕರಾಗಿದ್ದರು. ಒಮ್ಮೆ ಕಾತ್ಯಾಯನರ ಅಯನಗಳಲ್ಲಿನ ದೇವತೆಗಳ ಮೇಲೆ (ತೇಜಸ್ಸಿನ ಮೇಲೆ) ಅವರದ್ದೇ ಅಯನದಲ್ಲಿನ ಅಯೋಗ್ಯ ಸ್ಪಂದನಲಹರಿಗಳ ಒಂದು ಶಕ್ತಿಯುತ ಸಮೂಹವು ಆಕ್ರಮಣ ಮಾಡಿತು. ಘರ್ಷಣೆಯಿಂದ ಬಹುದೊಡ್ಡ ಉತ್ಪಾತವಾಗುವ ಸಮಯ ಬಂದಿತು. ಆಗ ಕಾತ್ಯಾಯನ ಋಷಿಗಳ ಆಶ್ರಮದಲ್ಲಿ ಸೂಕ್ಷ್ಮಾತಿಸೂಕ್ಷ್ಮ ಶಕ್ತಿಲಹರಿಗಳ ಒಂದು ಅಂಶವು ಒಬ್ಬ ಚಿಕ್ಕ ಬಾಲಕಿಯ ಆಕಾರದಲ್ಲಿ ಪ್ರವೇಶಿಸಿತು. ಈ ಬಾಲಕಿಯನ್ನು ಕಾತ್ಯಾಯನ ಋಷಿಗಳು ತಮ್ಮ ಸಂತಾನವೆಂದು ಪರಿಗಣಿಸಿದರು; ಆದುದರಿಂದ ಅವಳು ‘ಕಾತ್ಯಾಯನಿ’ ಎಂಬ ಹೆಸರಿನಿಂದ ಪ್ರಸಿದ್ಧಿ ಹೊಂದಿದಳು. ಕಾತ್ಯಾಯನಿಯು ಶಕ್ತಿಯುತ ಅಯೋಗ್ಯ ಸ್ಪಂದನಲಹರಿಗಳನ್ನು ಯೋಗ್ಯ ಸ್ಪಂದನಲಹರಿಗಳನ್ನಾಗಿ ಪರಿವರ್ತಿಸಿ ದೇವತೆಗಳಿಗೆ (ತೇಜಸ್ಸಿಗೆ) ಸಹಾಯ ಮಾಡಿದಳು.
ಜಗತ್ಪ್ರಸಿದ್ಧ ಅಮೇರಿಕನ್ ಶಾಸ್ತ್ರಜ್ಞರಾದ ಡಾ.ಕಾರ್ಲ್ ಸೇಗನ್ ಹೇಳುತ್ತಾರೆ, ‘ಓರ್ವ ಹೆಸರಾಂತ ರಷ್ಯಾದ ವೈಜ್ಞಾನಿಕರು ಮಾಡಿರುವ ಸಂಶೋಧನೆಯಲ್ಲಿ ಕಂಡು ಬಂದಿರುವುದೇ ನೆಂದರೆ ಕೆಲವು ಸ್ಪಂದನಗಳು ಅವಕಾಶದಲ್ಲಿ (ಸ್ಪೇಸ್‌ನಲ್ಲಿ) ಅಘನೀಕರಣಗೊಂಡು (ಡೀಮೆಟೀರಿಯಲೈಜೇಶನ್ ಆಗಿ) ಪುನಃ ಯಾವಾಗ ಬೇಕಾದರೂ ಅವುಗಳ ಘನೀಕರಣ (ಮೆಟೀರಿಯಲೈಜೇಶನ್) ಆಗುತ್ತದೆ; ಆದರೆ ಈ ಪ್ರಕ್ರಿಯೆಯು ಯಾವ ವಿಧದಿಂದ ಆಗುತ್ತದೆ ಎಂಬುದನ್ನು ಈಗಲೂ ಖಚಿತವಾಗಿ ಹೇಳಲು ಆಗುವುದಿಲ್ಲ.’
೭. ಕಾಳರಾತ್ರಿ : ಹಲವಾರು ಅಯೋಗ್ಯ ಸ್ಪಂದನಲಹರಿಗಳು ಒಟ್ಟು ಸೇರಿ ಸಿದ್ಧವಾಗುವ ಶಕ್ತಿಯೆಂದರೆ ‘ಕಾಲ’. ವ್ಯಕ್ತಿಯ (ಅಥವಾ ಪ್ರಾಣಿಗಳ) ಅಯೋಗ್ಯ ಸ್ಪಂದನಲಹರಿಗಳು ಆ ವ್ಯಕ್ತಿಯಲ್ಲಿ ಭಯವನ್ನುಂಟು ಮಾಡುತ್ತವೆ. ಆ ಸ್ಪಂದನಲಹರಿಗಳಲ್ಲಿ ವಿಶಿಷ್ಟ ಕ್ಷಮತೆ ಉಂಟಾಯಿತೆಂದರೆ ವಾತಾವರಣದಲ್ಲಿನ ಇದೇ ಜಾತಿಯ ಇತರ ಸ್ಪಂದನಗಳನ್ನು ವ್ಯಕ್ತಿಯ (ಅಥವಾ ಆ ಪ್ರಾಣಿಯ) ಶರೀರದೆಡೆ ಆಕರ್ಷಿಸುತ್ತವೆ. ಈ ರೀತಿ ಅಯೋಗ್ಯ ಸ್ಪಂದನಲಹರಿಗಳ ಶಕ್ತಿಯು ಹೆಚ್ಚಾಯಿತೆಂದರೆ ಆಗಬಾರದಂತಹ ಘಟನೆಗಳು ಮತ್ತು ಕೃತಿಗಳು ಆ ವ್ಯಕ್ತಿಯಿಂದ ಆಗುತ್ತವೆ. ಅವುಗಳ ಪ್ರತಿಕ್ರಿಯೆಗಳನ್ನು ನಾವು ಆಪತ್ತು ಅಥವಾ ಸಂಕಟ ಎನ್ನುತ್ತೇವೆ. ಇಂತಹ ಆಪತ್ತನ್ನು ಅಥವಾ ಸಂಕಟವನ್ನು ತರುವ ಅಯೋಗ್ಯ ಸ್ಪಂದನಲಹರಿಗಳ ಸಾಮೂಹಿಕ ಶಕ್ತಿಯ, ಅಂದರೆ ಕಾಲದ ರಾತ್ರಿಯೇ (ಅಂದರೆ ವಿನಾಶಿಕಾ ಅರ್ಥಾತ್ ವಿನಾಶ ಮಾಡುವವಳು) ‘ಕಾಳರಾತ್ರಿ’. ‘ವಿನಾಶಿಕಾ’ ಅಂದರೆ ‘ವಿಶೇಷೇಣ ನಾಶಯತಿ ಇತಿ|’ (ಸಂಪೂರ್ಣವಾಗಿ ನಾಶ ಮಾಡುವವಳು). ‘ವಿಶೇಷ’ ಎಂದರೆ ‘ವಿಗತಃ ಶೇಷಃ ಯಸ್ಮಾತ್|’ (ವಿಶಿಷ್ಟ) ಶೇಷವೂ ಇಲ್ಲದಂತೆ ನಾಶ ಮಾಡುವುದು.
೮. ಮಹಾಗೌರಿ : ತಪಸ್ಯೇನೆ ಮಹಾನ್ ‘ಗೌರಃ’, ಅಂದರೆ ‘ತೇಜಸ್ಸ’ನ್ನು ಪ್ರಾಪ್ತಮಾಡಿ ಕೊಂಡವಳೇ ಮಹಾಗೌರಿ’. ಮಂತ್ರಯೋಗಸಮಿಕ್ಷೆಯಲ್ಲಿ ‘ಸಮಾಧಿ’ ಎಂಬ ಪದದ ವ್ಯುತ್ಪತ್ತಿಯನ್ನು ‘ಸಮ್ + ಆ + ಅಧಿ’ ಎಂದು ಹೇಳಲಾಗಿದೆ. ‘ಸಮ್’ ಅಂದರೆ ಸೂಕ್ಷ್ಮಾತಿಸೂಕ್ಷ್ಮ ಶಕ್ತಿತರಂಗಗಳ ಸಮ್ಯಕ್, ‘ಆ’ ಅಂದರೆ ‘ವರೆಗೆ’ ಮತ್ತು ‘ಧಿ’ ಅಂದರೆ ‘ಮಾನವನ ಶರೀರದಿಂದ ನಿರಂತರವಾಗಿ ಉತ್ಸರ್ಜಿತಗೊಳ್ಳುವ ಸ್ಪಂದನಲಹರಿಗಳು’. ಧೀ ಎಂಬ ಲಹರಿಗಳನ್ನು ಸೂಕ್ಷ್ಮಾತಿಸೂಕ್ಷ್ಮಶಕ್ತಿ ಲಹರಿಗಳ ಸಮ್ಯಕ್ ಅವಸ್ಥೆಯ ತನಕ ಕೊಂಡೊಯ್ಯುವ ಪ್ರಕ್ರಿಯೆಯನ್ನು ಸಮಾಧಿ ಎನ್ನುತ್ತಾರೆ. ಈ ರೀತಿ ಪುನಃ ಪುನಃ ಸಮಾಧಿಯನ್ನು ಸಾಧಿಸುವುದಕ್ಕೆ ‘ತಪಸ್ಯಾ’ ಎನ್ನುತ್ತಾರೆ. ಇಂತಹ ತಪಸ್ಸನ್ನು ವಿಶಿಷ್ಟ ಕಾಲಾವಧಿಯ ತನಕ ಮಾಡುವುದರಿಂದ ‘ಗೌರ’ ಅಥವಾ ‘ತೇಜಸ್ಸು’ ಪ್ರಾಪ್ತವಾಗುತ್ತದೆ. ಇಂತಹ ತೇಜಸ್ಸಿನ ಅತ್ಯುಚ್ಚ ತೇಜಸ್ಸನ್ನು ಅಂದರೆ ಮಹಾನ್ ಗೌರವನ್ನು ಯಾವಳು ಪಡೆದುಕೊಂಡಿದ್ದಾಳೆಯೋ ಅವಳು ಮತ್ತು ಯಾರ ಪ್ರಸಾದದಿಂದ ಸಮಾಧಿಯನ್ನು ಸಾಧಿಸಬಹುದೋ ಅವಳೇ ‘ಮಹಾಗೌರಿ’.
೯. ಸಿದ್ಧಿದಾತ್ರಿ : ಸಾಮಾನ್ಯ ಸ್ಪಂದನಲಹರಿಗಳನ್ನು ಸೂಕ್ಷ್ಮಾತಿಸೂಕ್ಷ್ಮ ಶಕ್ತಿತರಂಗಗಳಲ್ಲಿ ಶಾಶ್ವತವಾಗಿ ಸೇರಿಸುವುದಕ್ಕೆ ‘ಮೋಕ್ಷ ಅಥವಾ ಸಿದ್ಧಿ’ ಎನ್ನುತ್ತಾರೆ. ಸಿದ್ಧಿಯನ್ನು ನೀಡುವವಳು ಸಿದ್ಧಿದಾತ್ರಿ.’
ದಸರಾ ಹಬ್ಬದ ಮಹತ್ವ :
ಮಹಿಷಾಸುರನ ಮಾಯೆಯನ್ನು ಗುರುತಿಸಿ ಅವನ ಅಸುರೀ ಪಾಶದಿಂದ ಮುಕ್ತರಾಗಲು ಶಕ್ತಿ ಉಪಾಸನೆಯ ಆವಶ್ಯಕತೆಯಿದೆ. ಇದಕ್ಕಾಗಿ ನವರಾತ್ರಿಯ ಒಂಭತ್ತು ದಿನ ಶಕ್ತಿಯ ಉಪಾಸನೆಯನ್ನು ಮಾಡಬೇಕು. ದಶಮಿಯಂದು ವಿಜಯೋತ್ಸವವನ್ನು ಆಚರಿಸಬೇಕು. ಇದನ್ನೇ ದಸರಾ (ದಶಹರಾ)/ವಿಜಯದಶಮಿ ಎನ್ನುತ್ತಾರೆ.
ದಸರಾ ಶಬ್ದದ ಉತ್ಪತ್ತಿ :
ದಸರಾ ಎನ್ನುವ ಶಬ್ದದ ಒಂದು ವ್ಯುತ್ಪತ್ತಿಯು ದಶಹರಾ ಎಂದೂ ಇದೆ. ದಶ ಎಂದರೆ ಹತ್ತು, ಹರಾ ಎಂದರೆ ಸೋತಿವೆ. ದಸರಾದ ಮೊದಲ ಒಂಬತ್ತು ದಿನಗಳ ನವರಾತ್ರಿಗಳಲ್ಲಿ ಹತ್ತೂ ದಿಕ್ಕುಗಳು ದೇವಿಯ ಶಕ್ತಿಯಿಂದ ಸಂಪನ್ನವಾಗಿರುತ್ತವೆ ಮತ್ತು ನಿಯಂತ್ರಣಕ್ಕೊಳಪಟ್ಟಿರುತ್ತವೆ. ಅಂದರೆ ಹತ್ತೂ ದಿಕ್ಕುಗಳಲ್ಲಿನ ದಿಕ್ಪಾಲಕರು, ಗಣರು ಮುಂತಾದವರ ಮೇಲೆ ನಿಯಂತ್ರಣವಿರುತ್ತದೆ. ಹತ್ತೂ ದಿಕ್ಕುಗಳ ಮೇಲೆ ವಿಜಯವು ದೊರಕಿರುತ್ತದೆ. ಇದಕ್ಕೆ ಸಂಬಂಧಪಟ್ಟಂತೆ ಈ ದಿನಕ್ಕೆ ದಶಹರಾ, ದಸರಾ, ವಿಜಯ ದಶಮಿ ಮುಂತಾದ ಹೆಸರುಗಳಿವೆ
ಆಯುಧಪೂಜೆ (ಶಸ್ತ್ರಪೂಜೆ) ಅಂದರೆ ಏನು?:
ಈ ದಿನ ರಾಜರು, ಸಾಮಂತರು, ಸರದಾರರು ತಮ್ಮತಮ್ಮ ಶಸ್ತ್ರಗಳನ್ನು ಸ್ವಚ್ಛಗೊಳಿಸಿ, ಸಾಲಾಗಿ ಇಟ್ಟು ಪೂಜೆ ಮಾಡುತ್ತಾರೆ. ಹಾಗೆಯೇ ರೈತರು ಮತ್ತು ಕುಶಲ ಕರ್ಮಿಗಳು ತಮ್ಮತಮ್ಮ ಶಸ್ತ್ರಗಳ ಪೂಜೆಯನ್ನು ಮಾಡುತ್ತಾರೆ. ಕೆಲವರು ಈ ಪೂಜೆಯನ್ನು ನವಮಿಯಂದೂ ಮಾಡುತ್ತಾರೆ.
ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ, ದೃಷ್ಟಿ ದೋಷ, ಮನೆಯಲ್ಲಿ ದಟ್ಟದರಿದ್ರ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬದ ಕಷ್ಟ, ಹಣಕಾಸಿನ ಅಡಚಣೆ, ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಲು ಈಗಲೇ ಕರೆ ಮಾಡಿ 9686268564
ರಾಜವಿಧಾನ: ‘ದಸರಾ’ ವಿಜಯದ ಹಬ್ಬವಾಗಿರುವುದರಿಂದ ಈ ದಿನ ರಾಜರಿಗೆ ವಿಶೇಷ ವಿಧಿಯನ್ನು ಹೇಳಲಾಗಿದೆ. ಇದು ವಿಜಯದ, ಪರಾಕ್ರಮದ ಹಬ್ಬವಾಗಿದೆ. ಅರ್ಜುನನು ಅಜ್ಞಾತವಾಸದಲ್ಲಿ ಶಮಿಯ ಉಡಿಯಲ್ಲಿ ಇಟ್ಟ ಶಸ್ತ್ರಗಳನ್ನು ತೆಗೆದು, ವಿರಾಟನ ಗೋವುಗಳನ್ನು ಸೆರೆ ಹಿಡಿದ ಕೌರವಸೈನ್ಯದ ಮೇಲೆ ಆಕ್ರಮಣ ಮಾಡಿ ಇದೇ ದಿನ ವಿಜಯವನ್ನು ಸಂಪಾದಿ ಸಿದ್ದನು. ಈ ದಿನದಂದೇ ಶ್ರೀರಾಮಚಂದ್ರನು ರಾವಣನ ಮೇಲೆ ವಿಜಯ ಪಡೆದು ಆತನನ್ನು ವಧಿಸಿದ್ದನು ಎಂದು ನಂಬಲಾಗುತ್ತದೆ. ಈ ಘಟನೆಗಳ ಸಂಕೇತವಾಗಿ ಈ ದಿನಕ್ಕೆ ವಿಜಯದಶಮಿ ಎಂದು ಹೆಸರು ಬಂದಿದೆ. ಹಾಗೆ ನೋಡಿದರೆ ಈ ಹಬ್ಬವು ಬಹಳ ಪ್ರಾಚೀನ ಕಾಲದಿಂದ ನಡೆದು ಬಂದಂತಿದೆ. ಪ್ರಾರಂಭದ ಕಾಲದಲ್ಲಿ ಇದು ಕೃಷಿಗೆ ಸಂಬಂಧಪಟ್ಟ ಒಂದು ಲೋಕೋತ್ಸವವಾಗಿತ್ತು. ಮಳೆಗಾಲದಲ್ಲಿ ಬಿತ್ತಿದ ಪ್ರಥಮ ಪೈರು ಮನೆಗೆ ಬಂದಾಗ ರೈತರು ಈ ಉತ್ಸವವನ್ನು ಆಚರಿಸುತ್ತಿದ್ದರು. ಕಲಶ ಸ್ಥಾಪನೆಯ ದಿನ ಕಲಶದ ಕೆಳಗಿನ ಪೀಠದಲ್ಲಿ ಒಂಭತ್ತು ಧಾನ್ಯಗಳನ್ನು ಬಿತ್ತುತ್ತಾರೆ. ದಸರಾದಂದು ಈ ಧಾನ್ಯದ ಮೊಳಕೆಗಳನ್ನು ತೆಗೆದು ದೇವರಿಗೆ ಅರ್ಪಿಸುತ್ತಾರೆ. ಅನೇಕ ಕಡೆ ಗದ್ದೆಯಲ್ಲಿ ಬೆಳೆದ ಭತ್ತದ ತೆನೆಗಳನ್ನು ಕೊಯ್ದು ತಂದು ಅವುಗಳನ್ನು ಮನೆಯ ಪ್ರವೇಶದ್ವಾರಕ್ಕೆ ತೋರಣದಂತೆ ಕಟ್ಟುತ್ತಾರೆ. ಈ ಪದ್ಧತಿಯಿಂದ ಕೃಷಿಗೆ ಸಂಬಂಧಪಟ್ಟ ಈ ಹಬ್ಬದ ಸ್ವರೂಪ ಸ್ಪಷ್ಟವಾಗುತ್ತದೆ. ಮುಂದೆ ಈ ಹಬ್ಬಕ್ಕೆ ಧಾರ್ಮಿಕ ಸ್ವರೂಪವನ್ನು ಕೊಡಲಾಯಿತು ಮತ್ತು ಇತಿಹಾಸ ಕಾಲದಲ್ಲಿ ಇದು ರಾಜಕೀಯ ಸ್ವರೂಪದ ಹಬ್ಬವಾಯಿತು.
ನಾವೆಲ್ಲಾ ಭಕ್ತಿ ಶ್ರದ್ಧೆಯಿಂದ ಶ್ರೀ ದುರ್ಗಾದೇವಿಯ ಉಪಾಸನೆಯನ್ನು ಮಾಡಿ ಶ್ರೀ ದೇವಿಯ ಕೃಪೆಯನ್ನು ಪಡೆಯೋಣ.