ಶಿವಮೊಗ್ಗ: ಸಾಗರದ ಕಲ್ಮನೆ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಜಯಪ್ರಕಾಶ್ ಮಾವಿನಕುಳಿ, ಉಪಾಧ್ಯಕ್ಷರಾಗಿ ಪ್ರಕಾಶ್ ಗೊರಮನೆ ಆಯ್ಕೆಯಾಗಿದ್ದಾರೆ.
ಇಂದು ಸಾಗರದ ಕಲಮನೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತಕ್ಕೆ ಅಧ್ಯಕ್ಷರು, ಉಪಾಧ್ಯಕ್ಷರ ಆಯ್ಕೆಗಾಗಿ ಚುನಾವಣೆ ನಡೆಯಿತು. ಈ ಚುನಾವಣೆಯಲ್ಲಿ ಕಲ್ಮನೆ ಸೊಸೈಟಿಯ ನೂತನ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಜಯಪ್ರಕಾಶ್ ಮಾವಿನಕುಳಿ, ಉಪಾಧ್ಯಕ್ಷರಾಗಿ ಪ್ರಕಾಶ ಗೊರಮನೆ ಆಯ್ಕೆಯಾಗಿದ್ದಾರೆ.
ಈ ಸಂದರ್ಭದಲ್ಲಿ ನಿರ್ದೇಶಕರುಗಳಾಗಿ ಜಯಕುಮಾರ್, ಮಧುರ, ಅಮೃತ, ಎಂ ಡಿ ರಾಮಚಂದ್ರ, ರಾಮಚಂದ್ರಗೌಡ್ರು, ರಾಮಚಂದ್ರ ಮಾವಿನಸರ, ವಿ ಡಿ ರವೀಂದ್ರ, ಸುರೇಶ್ ಎಂ ಹೊಸೂರು, ಪ್ರಸನ್ನ ಸಿ, ಆರ್ ಎಸ್ ಗಿರಿ, ರಾಮದಾಸ, ನರಿ ಮಂಜಪ್ಪ, ಸಾಗರ ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯ ನಾಗರಾಜ್ ಕಲ್ಮನೆ, ಸೋಮಶೇಖರ್, ಎಂ ಜಿ ಕೃಷ್ಣಮೂರ್ತಿ ಸೇರಿದಂತೆ ಇತರರು ಉಪಸ್ಥಿತರಿದ್ದರು.
ವರದಿ; ವಸಂತ ಬಿ ಈಶ್ವರಗೆರೆ.., ಸಂಪಾದಕರು
ಸೆ.28ರಂದು ಧಾರವಾಡ ಜಿಲ್ಲೆಯ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut
ಜಾತಿ ಸಮೀಕ್ಷೆ ವೇಳೆ ಈಡಿಗರು ಎಂದು ನಮೂದಿಸಿ: ಸೊರಬ ತಾಲ್ಲೂಕು ಮಾಜಿ ಅಧ್ಯಕ್ಷ ಕೆ.ಅಜ್ಜಪ್ಪ ಮನವಿ
ಆರೋಗ್ಯ ಸಂಜೀವಿನಿ ಜಾರಿ: ಸಿಎಂ, ಡಿಸಿಎಂಗೆ ಸಾಗರ ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಂತೋಷ್ ಕುಮಾರ್ ಧನ್ಯವಾದ