ಬರೇಲಿ : ಉತ್ತರ ಪ್ರದೇಶದ ಬರೇಲಿಯಲ್ಲಿ ಐ ಲವ್ ಮೊಹಮ್ಮದ್ ಅಭಿಯಾನಕ್ಕೆ ಕರೆಕೊಟ್ಟಿದ್ದ ಧರ್ಮಗುರುವನ್ನು ಪೊಲೀಸರು ಬಂಧಿಸಿದ್ದಾರೆ.
ಐ ಲವ್ ಮೊಹಮ್ಮದ್” ವಿವಾದದ ಕುರಿತು ಉತ್ತರ ಪ್ರದೇಶದ ಬರೇಲಿಯಲ್ಲಿ ಹಿಂಸಾತ್ಮಕ ಪ್ರತಿಭಟನೆಗಳಿಗೆ ಸಂಬಂಧಿಸಿದಂತೆ ಪೊಲೀಸರು 10 ಎಫ್ಐಆರ್ಗಳನ್ನು ದಾಖಲಿಸಿದ್ದಾರೆ. ಪ್ರತಿಭಟನಾಕಾರರು ಪೊಲೀಸರೊಂದಿಗೆ ಗಲಾಟೆ ಮಾಡಿದಲ್ಲೆಲ್ಲಾ ಎಫ್ಐಆರ್ ದಾಖಲಿಸಲಾಗುವುದು ಎಂದು ಅವರು ಹೇಳಿದ್ದಾರೆ.
ಪೊಲೀಸರು ಮೌಲಾನಾ ತೌಕೀರ್ ರಜಾ ಅವರನ್ನು ಗೃಹಬಂಧನದಲ್ಲಿ ಇರಿಸಿದ್ದಾರೆ. ನಿನ್ನೆ ತಡರಾತ್ರಿ ಪೊಲೀಸರು ತೌಕೀರ್ ರಾಜಾ ಅವರನ್ನು ಅವರ ಆಪ್ತ ಸ್ನೇಹಿತನ ಮನೆಯಿಂದ ಬೇರೆ ಸ್ಥಳಕ್ಕೆ ಸ್ಥಳಾಂತರಿಸಿದ್ದಾರೆ ಎಂದು ವರದಿಯಾಗಿದೆ.