ನವದೆಹಲಿ : ರಾಜ್ಯದ ಜನತೆಗೆ ಕೇಂದ್ರ ಸರ್ಕಾರ ಇದೀಗ ಮತ್ತೊಂದು ಸಿಹಿ ಸುದ್ದಿಯೊಂದನ್ನು ನೀಡಿದ್ದು, ಬೆಂಗಳೂರು ಮತ್ತು ಮುಂಬೈ ನಡುವೆ ಹೊಸ ಸೂಪರ್‌ಫಾಸ್ಟ್ ರೈಲಿಗೆ ಕೇಂದ್ರ ರೈಲ್ವೆ ಸಚಿವಾಲಯ ಅನುಮೋದನೆ ನೀಡಿದೆ. ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಕರ್ನಾಟಕದ ಜನರಿಗೆ ಗುಡ್ ನ್ಯೂಸ್ ನೀಡಿದ್ದಾರೆ. ಅದೇನೆಂದರೆ ಬೆಂಗಳೂರು ಟು ಮುಂಬೈಗೆ ಸೂಪರ್ ಫಾಸ್ಟ್ ರೈಲು ಘೋಷಣೆ ಮಾಡಿದ್ದಾರೆ.
ಈ ವಿಚಾರವಾಗಿ ಮಾತನಾಡಿರುವ ಸಚಿವ ಅಶ್ವಿನಿ ವೈಷ್ಣವ್, ಶೀಘ್ರದಲ್ಲೇ ನಾವು ಬೆಂಗಳೂರು ಟು ಮುಂಬೈ ನಡುವೆ ಸೂಪರ್‌ಫಾಸ್ಟ್ ರೈಲು ಪ್ರಾರಂಭಿಸುತ್ತೇವೆ. ಎರಡೂ ನಗರಗಳು ಪ್ರಮುಖ ಆರ್ಥಿಕ ಕೇಂದ್ರಗಳಾಗಿವೆ. ಹಾಗಾಗಿ ಇದು ಪ್ರಮುಖ ಯೋಜನೆ ಆಗಿದೆ ಎಂದು ಹೇಳಿದರು. ಇನ್ನು ಸಂಸದ ತೇಜಸ್ವಿ ಸೂರ್ಯ ಕೂಡ ಈ ವಿಚಾರವಾಗಿ ಮಾತನಾಡಿದ್ದು, ಬೆಂಗಳೂರು ಮತ್ತು ಮುಂಬೈ ನಡುವೆ ಹೊಸ ಸೂಪರ್‌ಫಾಸ್ಟ್ ರೈಲಿಗೆ ಕೇಂದ್ರ ರೈಲ್ವೆ ಸಚಿವಾಲಯ ಅನುಮೋದನೆ ನೀಡಿದೆ. ಆ ಮೂಲಕ ಎರಡೂ ನಗರಗಳ ಜನರ 30 ವರ್ಷಗಳ ಬೇಡಿಕೆ ಈಡೇರಿದೆ ಎಂದಿದ್ದಾರೆ.
ಸದ್ಯ ಬೆಂಗಳೂರು ಮತ್ತು ಮುಂಬೈ ಮಧ್ಯೆ ಉದ್ಯಾನ್ ಎಕ್ಸ್‌ಪ್ರೆಸ್ ಒಂದೇ ಸಂಚಾರ ನಡೆಸಿದ್ದು, ಇದು 24 ಗಂಟೆಗಳಿಗಿಂತ ಹೆಚ್ಚು ಸಮಯವನ್ನು ತೆಗೆದುಕೊಳ್ಳುತ್ತದೆ. ಕಳೆದ ವರ್ಷ 26 ಲಕ್ಷಕ್ಕೂ ಹೆಚ್ಚು ಜನರು ಈ ಎರಡೂ ನಗರಗಳಿಗೆ ವಿಮಾನದಲ್ಲಿ ಪ್ರಯಾಣಿಸಿದ್ದಾರೆ. ಹೀಗಾಗಿ 30 ವರ್ಷಗಳಿಂದ ಬೇಡಿಕೆ ಇಡಲಾಗಿತ್ತು. ಸದ್ಯ ಈ ಹೊಸ ಸೂಪರ್‌ಫಾಸ್ಟ್ ರೈಲಿ ಸೇವೆಯು ಲಕ್ಷಾಂತರ ಪ್ರಯಾಣಿಕರಿಗೆ ಕೈಗೆಟುಕವ ದರದೊಂದಿಗೆ ಅನುಕೂಲಕರವಾಗಲಿದೆ ಎಂದು ಅವರು ಹೇಳಿದ್ದಾರೆ.
I have some great news for people of Bengaluru and Mumbai.
From last 30 years, our two great cities were connected by only one super fast train -Udyan Express. Even that train took more than 24 hrs to reach. This forced most people to inevitably take bus or flights. Travel was… pic.twitter.com/NZmJ2rhiLs
— Tejasvi Surya (@Tejasvi_Surya) September 27, 2025