ಬೆಂಗಳೂರು: ನಗರದಲ್ಲಿ ಕಾನೂನು ಸುವ್ಯವಸ್ಥೆ ಕರ್ತವ್ಯದ ಜೊತೆಯಲ್ಲಿ ಸಂಚಾರಿ ನಿಯಮ ಉಲ್ಲಂಘನೆ ಮಾಡುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವ ಬಗ್ಗೆ ಪೊಲೀಸರಿಗೆ ಆಯುಕ್ತರಾದಂತ ಸೀಮಾಂತ್ ಕುಮಾರ್ ಸಿಂಗ್ ಖಡಕ್ ಸೂಚನೆ ನೀಡಿದ್ದಾರೆ.
ಈ ಕುರಿತಂತೆ ಸುತ್ತೋಲೆ ಹೊರಡಿಸಿರುವಂತ ಅವರು, ಬೆಂಗಳೂರು ನಗರದ ಎಲ್ಲಾ ಕಾನೂನು ಸುವ್ಯವಸ್ಥೆ ವಿಭಾಗದ ಉಪ ಪೊಲೀಸ್ ಆಯುಕ್ತರಿಗೆ ಈ ಮೂಲಕ ತಿಳಿಯಪಡಿಸುವುದೇನೆಂದರೆ ಹೆಚ್ಚಿನ ವಾಹನಗಳ ದಟ್ಟಣೆ (ಪೀಕ್ ಅವಧಿಯಲ್ಲಿ ) ಅವಧಿಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಅಧಿಕಾರಿ/ಸಿಬ್ಬಂದಿಗಳು ಕೂಡ : ಟ್ರಾಫಿಕ್ ಜಂಕ್ಷನ್‌ಗಳಲ್ಲಿ ಸಂಚಾರ ಪೊಲೀಸರೊಂದಿಗೆ ಸೇರಿ ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡುವ ಕರ್ತವ್ಯ ನಿರ್ವಹಿಸುವಂತೆ ತಿಳಿಸಿದ್ದಾರೆ.
ಕಾನೂನು ಸುವ್ಯವಸ್ಥೆ ವಿಭಾಗದ ಅಧಿಕಾರಿ, ಸಿಬ್ಬಂದಿಗಳು ಸಂಚಾರಿ ಪೊಲೀಸ್ ಅಧಿಕಾರಿ ಸಿಬ್ಬಂದಿಗಳೊಂದಿಗೆ ಸಹಕರಿಸುವ ಜೊತೆಗೆ ತಮ್ಮ ಕರ್ತವ್ಯದ ಅವಧಿಯಲ್ಲಿ ವಾಹನ ಸವಾರ, ಚಾಲಕರು ಸಂಚಾರ ನಿಯಮಗಳ ಉಲ್ಲಂಘನೆ ಮಾಡುತ್ತಿರುವುದು ಕಂಡುಬಂದಲ್ಲಿ, ಅದನ್ನು ತಮ್ಮ ಮೊಬೈಲ್‌ನಲ್ಲಿ ಸೆರೆಹಿಡಿದು, ತಮ್ಮ ಮೊಬೈಲ್‌ನಲ್ಲಿ ಪೊಲೀಸ್ ಇಲಾಖೆಯ ಪಬ್ಲಿಕ್-ಐ ಆರ್ ಅನ್ನು ಡೌನ್ ಲೋಡ್ ಮಾಡಿಕೊಂಡು, ಅದರಲ್ಲಿ ಸಂಚಾರ ನಿಯಮಗಳನ್ನು ಉಲ್ಲಂಘಿಸಿರುವ ಭಾವ ಚಿತ್ರಗಳನ್ನು ಅಪ್‌ಲೋಡ್ ಮಾಡಲು ಕ್ರಮವಹಿಸುವಂತೆ ಸೂಚಿಸಿದ್ದಾರೆ.
ಇನ್ನೂ ಪ್ರತಿ ವಾರಕ್ಕೊಮ್ಮೆ ಅಧಿಕಾರಿ/ಸಿಬ್ಬಂದಿಗಳು ಸಂಚಾರ ನಿಯಮಗಳನ್ನು ಉಲ್ಲಂಘನೆ ಮಾಡಿರುವ ಬಗ್ಗೆ ಅಪ್‌ಲೋಡ್ ಮಾಡಿರುವ ವಿವರಗಳನ್ನು ಸಂಬಂಧಪಟ್ಟ ವಿಭಾಗಗಳ ಡಿಸಿಪಿ ಅವರು ಕ್ರೋಡಿಕರಿಸಿ ಈ ಕಛೇರಿಗೆ ಸಲ್ಲಿಸಲು ತಿಳಿಸಿದ್ದಾರೆ.
‘ರಸ್ತೇಲಿ ಕಣ್ಣು ಮುಚ್ಚಿ’ಕೊಂಡು ಓಡಾಡ್ತೀರಾ?: ಬೆಂಗಳೂರಲ್ಲಿ ಸಿಟಿ ರೌಡ್ಸ್ ವೇಳೆ ಅಧಿಕಾರಿಗಳಿಗೆ ‘ಸಿಎಂ ಪುಲ್ ಕ್ಲಾಸ್’
ಅಮೆರಿಕಾದ ಭಾರತೀಯ ಉತ್ಪನ್ನಗಳ ಮೇಲಿನ ಸುಂಕದ ಬಿಕ್ಕಟ್ಟನ್ನು ಕೇಂದ್ರವು ಬಗೆಹರಿಸಲಿ: ಸಚಿವ ಎಂ ಬಿ ಪಾಟೀಲ್