ಬೆಂಗಳೂರು : ಮಂಡ್ಯ ಜಿಲ್ಲೆ ಮದ್ದೂರಿನಲ್ಲಿ ಗಣೇಶ ವಿಸರ್ಜನೆ ವೇಳೆ ಕಿಡಿಗೇಡಿಗಳು ಗಣೇಶ ಮೆರವಣಿಗೆಯ ಮೇಲೆ ಕಲ್ಲೆಸೆತ ನಡೆಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಮದ್ದೂರಿನಲ್ಲಿ ಭಾರಿ ಪ್ರತಿಭಟನೆ ನಡೆಸಲಾಗಿತ್ತು. ಹಿಂದೂ ಕಾರ್ಯಕರ್ತರು ಬೃಹತ್ ಪ್ರಮಾಣದಲ್ಲಿ ಪ್ರತಿಭಟನೆ ನಡೆಸಿದ್ದರು. ಈ ವೇಳೆ ಪೊಲೀಸರು ಕಾರ್ಯಕರ್ತ ಮೇಲೆ ಲಾಠಿ ಚಾರ್ಜ್ ಸಹ ನಡೆಸಿದ್ದರು.
ಪ್ರಕರಣ ಗಂಭೀರ ಪಡೆದುಕೊಳ್ಳುತ್ತಿದ್ದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ವಿಪಕ್ಷ ನಾಯಕ ಆರ್ ಅಶೋಕ್ ಸೇರಿದಂತೆ ಎಲ್ಲಾ ಬಿಜೆಪಿ ನಾಯಕರು ಮಂಡ್ಯ ಜಿಲ್ಲೆಯ ಮದ್ದೂರಿಗೆ ಭೇಟಿ ನೀಡಿ ಬೃಹತ್ ಶೋಭಾ ಯಾತ್ರೆಯಲ್ಲಿ ಪಾಲ್ಗೊಂಡರು. ಇದೀಗ ಈ ಒಂದು ಘಟನೆಗೆ ಸಂಬಂಧಿಸಿದಂತೆ ಮದ್ದೂರಿನಲ್ಲಿ ನಡೆದಂತಹ ಗಣೇಶ ಮೆಸವಣಿಗೆ ವೇಳೆ ಕಲ್ಲೇಸೆತ ಹಾಗೂ ಲಾಠಿ ಚಾರ್ಜ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸತ್ಯಶೋಧನಾ ಸಮಿತಿ ಬಿ.ವೈ ವಿಜಯೇಂದ್ರ ಗೆ ವರದಿ ಸಲ್ಲಿಸಿದೆ.
ಬೆಂಗಳೂರಿನ ಮಲ್ಲೇಶ್ವರಂ ನಲ್ಲಿರುವ ಬಿಜೆಪಿ ಕಚೇರಿಯಲ್ಲಿ ವರದಿ ಸಲ್ಲಿಸಲಾಯಿತು. ರಾಜ್ಯ ಬಿಜೆಪಿ ಮುಖ್ಯ ವಕ್ತಾರ ಅಶ್ವಥ್ ನಾರಾಯಣ ನೇತೃತ್ವದ ಈ ಒಂದು ಸತ್ಯಶೋಧನಾ ಸಮಿತಿಯಲ್ಲಿ ರಾಜ್ಯ ಬಿಜೆಪಿ ಸಹ ಉಸ್ತುವಾರಿ ಸುಧಾಕರ ರೆಡ್ಡಿ, ಮಾಜಿ ಶಾಸಕ ಪಿ. ರಾಜೀವ್, ಮಂಡ್ಯ ಜಿಲ್ಲಾ ಬಿಜೆಪಿ ಘಟಕ ಅಧ್ಯಕ್ಷ ಜೀತೇಂದ್ರ ಕುಮಾರ್ ಇದೇ ಸಂದರ್ಭದಲ್ಲಿ ಉಪಸ್ಥಿತರಿದ್ದರು.