ಶಿವಮೊಗ್ಗ : ಪ್ರತಿಭಾವಂತ ವಿದ್ಯಾರ್ಥಿಗಳು ಸಮಾಜದ ಆಸ್ತಿ. ಅವರು ಶೈಕ್ಷಣಿಕವಾಗಿ ಉತ್ತಮ ಸಾಧನೆ ಮಾಡಿದಾಗ ಗುರುತಿಸಿ ಗೌರವಿಸುವುದರಿಂದ ಇನ್ನೊಬ್ಬರಿಗೆ ಉತ್ತೇಜನ ಸಿಕ್ಕಂತೆ ಆಗುತ್ತದೆ ಇಂತಹ ಪ್ರಯತ್ನಗಳು ಹೆಚ್ಚಾಗಬೇಕು ಎಂದು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಹೇಳಿದರು.
ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ಪ್ರಾಂತ್ಯ ಆರ್ಯ ಈಡಿಗರ ಸಭಾಭವನದಲ್ಲಿ ಶನಿವಾರ ಪ್ರಾಂತ್ಯ ಆರ್ಯ ಈಡಿಗರ ಸಂಘದ ವತಿಯಿಂದ ಎಸ್.ಎಸ್.ಎಲ್.ಸಿ., ದ್ವಿತೀಯ ಪಿಯುಸಿ, ಅಂತಿಮ ಪದವಿ, ಸ್ನಾತಕೋತ್ತರ ಪದವಿಯಲ್ಲಿ ಅತಿಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಗೌರವಿಸಿ ಅವರು ಮಾತನಾಡುತ್ತಿದ ಅವರು, ಪ್ರತಿಭೆ ಯಾರ ಸ್ವತ್ತು ಅಲ್ಲ. ಒಂದು ಕಾಲದಲ್ಲಿ ಶೈಕ್ಷಣಿಕವಾಗಿ ಹಿಂದುಳಿದಿದ್ದ ನಮ್ಮ ಸಮಾಜದ ಮಕ್ಕಳು ಉನ್ನತ ವಿದ್ಯಾಭ್ಯಾಸ ಪಡೆದು ಉತ್ತಮ ನೌಕರಿ ಮಾಡುತ್ತಿದ್ದಾರೆ. ಪ್ರತಿಭೆ ಇದ್ದವರನ್ನು ಪ್ರೋತ್ಸಾಹಿಸುವ ಕೆಲಸವಾಗಬೇಕು. ಸರ್ವರೂ ಸಮುದಾಯದ ಆಭಿವೃದ್ದಿಗೆ ತಮ್ಮ ಸಹಕಾರ ನೀಡಬೇಕು ಎಂದು ತಿಳಿಸಿದರು.
ಸಿಗಂದೂರು ಕ್ಷೇತ್ರದ ಧರ್ಮದರ್ಶಿ ಡಾ. ರಾಮಪ್ಪ ಮಾತನಾಡಿ, ಪೋಷಕರು ಮಕ್ಕಳ ಶೈಕ್ಷಣಿಕ ಪ್ರತಿಭೆಯನ್ನು ಪ್ರೋತ್ಸಾಹಿಸಬೇಕು. ಮಕ್ಕಳಿಗೆ ಯಾವ ಕ್ಷೇತ್ರದಲ್ಲಿ ಆಸಕ್ತಿ ಇದೆ ಎನ್ನುವುದನ್ನು ಅರಿತು ಅವರ ಸಾಧನೆಯನ್ನು ಗೌರವಿಸಬೇಕು. ಸಂಘವು ಅನೇಕ ವರ್ಷಗಳಿಂದ ದಾನಿಗಳ ಸಹಕಾರದಿಂದ ಪ್ರತಿಭಾ ಪುರಸ್ಕಾರ ನಡೆಸಿಕೊಂಡು ಬರುತ್ತಿರುವುದು ಅಭಿನಂದಾರ್ಹ ಸಂಗತಿ ಎಂದರು.
ಈ ವೇಳೆ ಮರಸ ಮಂಜಪ್ಪ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಪರಮೇಶ್ವರ ಟಿ., ಕೆ.ಹೊಳೆಯಪ್ಪ, ರಘುಪತಿ, ಶಿವಪ್ಪ ಕಲಸಿ, ದಿವಾಕರ್, ಕರುಣಾಕರ, ತಾರಾಮೂರ್ತಿ, ನಾಗರಾಜ್, ಹಾಲಪ್ಪ, ಎಂ.ಸಿ.ಪರಶುರಾಮಪ್ಪ, ಅಜ್ಜಪ್ಪ, ಹುಚ್ಚಪ್ಪ ಮಂಡಗಳಲೆ, ತುಕಾರಾಂ ಶಿರವಾಳ, ಕೆ.ಸಿ.ಮೂರ್ತಿ, ಗಣಪತ ಹೆನಗೇರಿ, ಮಹಾಬಲೇಶ್ವರ ಕೌತಿ, ರವಿಕುಮಾರ್ ಇನ್ನಿತರರು ಹಾಜರಿದ್ದರು.
ಶಿವಮೊಗ್ಗ: ಸೆ.29ರಂದು ಸಾಗರದ ಶೃಂಗೇರಿ ಶಂಕರಮಠದಲ್ಲಿ ‘ಶಾರದಾ ಪ್ರಸಾದ ಪುರಸ್ಕಾರ’ ಪ್ರದಾನ
KMF ಹಾಲು ಉತ್ಪಾದಕರಿಗೆ ಸರಿಯಾಗಿ ಸ್ಪಂದಿಸುತ್ತಿಲ್ಲ: ಸಾಗರ ತಾಲ್ಲೂಕು ಅಧ್ಯಕ್ಷ ನಾಗರಾಜ್