ಕರೂರ್ : ಕರೂರ್ ಕಾಲ್ತುಳಿತ ಘಟನೆಯಲ್ಲಿ ಮೃತಪಟ್ಟವರ ಶವಗಳನ್ನು ಮರಣೋತ್ತರ ಪರೀಕ್ಷೆಯ ನಂತರ ಅವರ ಕುಟುಂಬ ಸದಸ್ಯರಿಗೆ ಹಸ್ತಾಂತರಿಸಗುತ್ತಿದೆ.
ಸಿಎಂ ಎಂ.ಕೆ. ಸ್ಟಾಲಿನ್ ಅವರ ಪ್ರಕಾರ, ನಿನ್ನೆ ಟಿವಿಕೆ (ತಮಿಳಗ ವೆಟ್ರಿ ಕಳಗಂ) ಮುಖ್ಯಸ್ಥ ಮತ್ತು ನಟ ವಿಜಯ್ ಅವರ ರ್ಯಾಲಿಯಲ್ಲಿ ನಡೆದ ಕಾಲ್ತುಳಿತ ಘಟನೆಯಲ್ಲಿ ಇಲ್ಲಿಯವರೆಗೆ 39 ಜನರು ಪ್ರಾಣ ಕಳೆದುಕೊಂಡಿದ್ದಾರೆ.
ಕಾಲ್ತುಳಿದಲ್ಲಿ ಇಲ್ಲಿಯವರೆಗೆ 39 ಜನರು ಸಾವನ್ನಪ್ಪಿದ್ದಾರೆ. ನಮ್ಮ ರಾಜ್ಯದ ಇತಿಹಾಸದಲ್ಲಿ, ಯಾವುದೇ ರಾಜಕೀಯ ಪಕ್ಷ ಆಯೋಜಿಸಿದ ಕಾರ್ಯಕ್ರಮದಲ್ಲಿ ಇಷ್ಟೊಂದು ದೊಡ್ಡ ಸಂಖ್ಯೆಯ ಜನರು ಪ್ರಾಣ ಕಳೆದುಕೊಂಡಿಲ್ಲ, ಮತ್ತು ಭವಿಷ್ಯದಲ್ಲಿಯೂ ಇಂತಹ ದುರಂತ ಸಂಭವಿಸಬಾರದು ಎಂದು ಕರೂರ್ ಕಾಲ್ತುಳಿತ ಘಟನೆಯ ಕುರಿತು ತಮಿಳುನಾಡು ಸಿಎಂ ಎಂ.ಕೆ. ಸ್ಟಾಲಿನ್ ಹೇಳಿದ್ದಾರೆ.
ಪ್ರಸ್ತುತ, 51 ಜನರು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಾನು ಭಾರವಾದ ಹೃದಯದಿಂದ, ಪ್ರಾಣ ಕಳೆದುಕೊಂಡವರಿಗೆ ಗೌರವ ಸಲ್ಲಿಸುತ್ತೇನೆ. ಮೃತರ ಕುಟುಂಬಗಳಿಗೆ 10 ಲಕ್ಷ ರೂ. ಪರಿಹಾರ ನೀಡಲಾಗುವುದು. ಗಾಯಗೊಂಡವರಿಗೆ 1 ಲಕ್ಷ ರೂ. ಪರಿಹಾರ ನೀಡಲಾಗುವುದು. ನಿವೃತ್ತ ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖಾ ಆಯೋಗವನ್ನು ರಚಿಸಲು ನಾನು ಆದೇಶಿಸಿದ್ದೇನೆ” ಎಂದು ಹೇಳಿದ್ದಾರೆ.
#WATCH | Karur, Tamil Nadu | Visuals from the Government Medical College and Hospital, where the bodies of victims of the Karur stampede incident are being handed over to their family members after the postmortem.
As per CM MK Stalin, so far, 39 people have lost their lives… pic.twitter.com/T2TuVuTuGv
— ANI (@ANI) September 28, 2025