ಬೆಂಗಳೂರು : ರಾಜ್ಯದಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿಯಾಗಿದೆ. ಸಫಾರಿಗೆ ಹೋಗಿದ್ದ ಪ್ರವಾಸಿಗ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಬೆಂಗಳೂರು ಹೊರವಲಯ ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಈ ಘಟನೆ ನಡೆದಿದೆ. ಬೆಂಗಳೂರಿನ ನಾಗರಬಾವಿಯ ನಿವಾಸಿ ನಂಜಪ್ಪ (45) ಹೃದಯಾಗಾತದಿಂದ ಮೃತಪಟ್ಟಿದ್ದಾರೆ. ಪತ್ನಿ ಇಬ್ಬರು ಮಕ್ಕಳೊಂದಿಗೆ ಸಫಾರಿ ವೀಕ್ಷಣೆ ಬಂದಿದ್ದ ವೇಳೆ ನಂಜಪ್ಪ ಸಫಾರಿ ಬಸ್ಸಿನಲ್ಲಿಯೇ ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ. ಝೂ ಅಂಬುಲೆನ್ಸ್ ಮೂಲಕ ನಂಜಪ್ಪರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಚಿಕಿತ್ಸೆ ಫಲಕಾರಿಯಾಗದೆ ನಂಜಪ್ಪ ಮೃತಪಟ್ಟಿದ್ದಾರೆ. ಬನ್ನೇರುಘಟ್ಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಮನೆಯಲ್ಲಿ ಕುಸಿದುಬಿದ್ದು `ಎಎಸ್ ಐ’ ಸಾವು
ಮಂಗಳೂರಿನಲ್ಲಿ ಎಎಸ್ ಐ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಮಂಗಳೂರುನಗರದ ಮಹಿಳಾ ಠಾಣೆಯಲ್ಲಿ ಎಎಸ್ಐ ಆಗಿದ್ದ ರಾಜೇಶ್ ಹೆಗ್ಡೆ (54) ಶನಿವಾರ ಹೃದಯಾ ಘಾತದಿಂದ ನಿಧನರಾದರು.
ಕಾಸರಗೋಡು ಜಿಲ್ಲೆಯ ಹೊಸದುರ್ಗ ಮೂಲದವರಾದ ಹೆಗ್ಡೆ, ಶನಿವಾರ ಮಧ್ಯಾಹ್ನ ಊಟಕ್ಕೆ ತೆರಳಿದ್ದ ವೇಳೆ ಮನೆಯಲ್ಲಿಯೇ ಹೃದಯಾಘಾತಕ್ಕೀಡಾಗಿ ಮೃತಪಟ್ಟಿದ್ದಾರೆ.