ಬಾಗಲಕೋಟೆ : ರಾಜ್ಯಾದ್ಯಂತ ಭಾರಿ ಮಳೆ ಸುರಿಯುತ್ತಿದ್ದು ಅದರಲ್ಲೂ ಉತ್ತರ ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕ ಭಾಗದಲ್ಲಿ ಮಳೆಯಿಂದಾಗಿ ಜನ ಜೀವನ ಸಂಪೂರ್ಣವಾಗಿ ಅಸ್ತವ್ಯಸ್ತವಾಗಿದೆ. ಇದೀಗ ಬಾಗಲಕೋಟೆಯಲ್ಲಿ ಮನೆಯ ಮೇಲ್ಚಾವಣಿ ಕುಸಿದು ವೃದ್ದೆ ಸಾವನಪ್ಪಿದ್ದಾರೆ.
ನಗರದ ಕಿಲ್ಲಾ ಓಣಿಯಲ್ಲಿ ಭಾರಿ ಮಳೆಯಿಂದಾಗಿ ಮನೆಗಳು ಕುಸಿದು ಬಿದ್ದಿದ್ದು, ಈ ವೇಳೆ ಮನೆಯ ಮೇಲ್ಚಾವಣಿ ಕುಸಿದು ವೃದ್ದೆ ಒಬ್ಬರಿಗೆ ತಲೆಗೆ ಮತ್ತು ಕೈಗಳಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ನಡೆದಿದೆ. ಶಶಿಕಲಾ ದಾಬಡೆ ಎನ್ನುವವರಿಗೆ ಗಂಭೀರವಾದ ಗಾಯಗಳಾಗಿದ್ದು, ಪುತ್ರ ವೆಂಕಟೇಶ್ ಸ್ವಲ್ಪದರಲ್ಲಿ ಬಚಾವ್ ಆಗಿದ್ದಾರೆ. ಇದುವರೆಗೂ ಬಾಗಲಕೋಟೆ ಜಿಲ್ಲೆಯ ಅದ್ಯಂತ 340ಕ್ಕೂ ಹೆಚ್ಚು ಮನೆಗಳು ಕುಸಿದು ಬಿದ್ದಿವೆ ಎಂದು ವರದಿಯಾಗಿದೆ.