ಬೆಂಗಳೂರು : ಬೆಂಗಳೂರಿನಲ್ಲಿ ಘೋರ ದುರಂತ ಒಂದು ಸಂಭವಿಸಿದ್ದು, ಪೌಡರ್ ಮಿಕ್ಸಿಂಗ್ ಯಂತ್ರಕ್ಕೆ ಸಿಲುಕಿ ಕಾರ್ಮಿಕ ನೊಬ್ಬ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಬಾಗಲಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಯಂತ್ರಕ್ಕೆ ಸಿಲುಕಿ ಬಿಹಾರ ಮೂಲದ ರಾಜು ಪಾಸ್ವಾನ್ (23) ಎನ್ನುವ ಕಾರ್ಮಿಕ ಸಾವನ್ನಪ್ಪಿದ್ದಾನೆ.
ಸಂತೋಷ್ ಎಂಬವರಿಗೆ ಸೇರಿದ ಪೌಡರ್ ಕಂಪನಿಯಲ್ಲಿ ಈ ಒಂದು ದುರ್ಘಟನೆ ನಡೆದಿದೆ. ಇಂದು ಮಧ್ಯಾಹ್ನ 12:30 ಕಂಪನಿಯಲ್ಲಿ ರಾಜು ಕೆಲಸ ಮಾಡುತ್ತಿದ್ದ ವೇಳೆ ಪೌಡರ್ ಮಿಕ್ಸಿಂಗ್ ಮಾಡುವ ಯಂತ್ರಕ್ಕೆ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಸ್ಥಳಕ್ಕೆ ಬಾಗಲಕುಂಟೆ ಠಾಣೆ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ.