ಕೊಪ್ಪಳ : ರಾಜ್ಯದಲ್ಲಿ ಸಾಮಾಜಿಕ, ಶೈಕ್ಷಣಿಕ & ಆರ್ಥಿಕ ಸಮೀಕ್ಷೆ ವಿಚಾರವಾಗಿ ಕರ್ತವ್ಯಲೋಪ ಹಿನ್ನೆಲೆಯಲ್ಲಿ ಕೊಪ್ಪಳದ ಓರ್ವ ಶಿಕ್ಷಕನನ್ನು ಅಮಾನತು ಮಾಡಿ, ಅಮಾನತು ಮಾಡಿ ಕೊಪ್ಪಳ ಜಿಲ್ಲಾಧಿಕಾರಿ ಸುರೇಶ್ ಇಟ್ನಾಳ್ ಆದೇಶ ಹೊರಡಿಸಿದ್ದಾರೆ.
ಜೂಲಕುಂಟಿ ಸರ್ಕಾರಿ ಶಾಲೆಯ ಸಹಾಯಕ ಶಿಕ್ಷಕ ರಾಮಪ್ಪ ಸಸ್ಪೆಂಡ್ ಆಗಿದ್ದು, ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಜೂಲಕುಂಟಿ ಗ್ರಾಮದಲ್ಲಿ ಶಿಕ್ಷಕರಾಗಿ ಕೆಲಸ ನಿರ್ವಹಿಸುತ್ತಿದ್ದು, ಸಮೀಕ್ಷೆಯಲ್ಲಿ ಶೂನ್ಯ ಪ್ರಗತಿ ಸಾಧಿಸಿದ ಹಿನ್ನೆಲೆಯಲ್ಲಿ ರಾಮಪ್ಪನನ್ನು ಅಮಾನತುಗೊಳಿಸಲಾಗಿದೆ. ಕೆಲದಿನಗಳಿಂದ ಮೊಬೈಲ್ ಸ್ವಿಚ್ ಆಫ್ ಮಾಡಿ ಕೊಂಡಿರುವ ರಾಮಪ್ಪ ಇದುವರೆಗೂ ಯಾವುದೇ ಮನೆಗೆ ಸಮೀಕ್ಷೆಗೆ ತೆರಳದ ಕರ್ತವ್ಯ ಲೋಪ ಎಸಗಿಸಿದ್ದಾನೆ. ಹೀಗಾಗಿ ಸಹಾಯಕ ಶಿಕ್ಷಕನನ್ನು ಅವನತ ಮಾಡಿ ಡಿಸಿ ಆದೇಶ ಹೊರಡಿಸಿದ್ದಾರೆ.