ತುಮಕೂರು : ತುಮಕೂರಿನ ಕೈಗಾರಿಕಾ ಪ್ರದೇಶದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದೆ. ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು ತುಮಕೂರು ನಗರದ ವಸಂತ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ಈ ಒಂದು ಬೆಂಕಿ ದುರಂತ ಸಂಭವಿಸಿದೆ. ಫೋಮ್ ಮ್ಯಾನು ಫ್ಯಾಕ್ಟರಿಂಗ್ ಫ್ಯಾಕ್ಟರಿಯಲ್ಲಿ ಬೆಂಕಿ ದುರಂತ ಸಂಭವಿಸಿದೆ.
ಇಂದು ಭಾನುವಾರ ಆದುದ್ದರಿಂದ ಯಾವುದೇ ಕಾರ್ಮಿಕರು ಫ್ಯಾಕ್ಟರಿಯಲ್ಲಿ ಇರಲಿಲ್ಲ. ಹಾಗಾಗಿ ಯಾವುದೇ ರೀತಿಯಾದ ಪ್ರಾಣಹಾನಿ ಸಂಭವಿಸಿಲ್ಲ. ಸ್ಥಳಕ್ಕೆ ಆಗಮಿಸಿ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.ಆದರೆ ಫ್ಯಾಕ್ಟರಿಯಲ್ಲಿ ಇದ್ದಂತಹ ವಸ್ತುಗಳು ಸಂಪೂರ್ಣವಾಗಿ ಸುಟ್ಟು ತರಕಲಾಗಿದೆ. ಘಟನೆ ಕುರಿತಂತೆ ಕೋರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.