ಬೆಂಗಳೂರು : ಬೆಂಗಳೂರಿನಲ್ಲಿ ಹಿಟ್ ಅಂಡ್ ರನ್ ಗೆ ಆಗಾಗ ಅನೇಕ ಬೈಕ್ ಸವಾರರು ಸಾವನಪುತ್ತಿರುವ ಘಟನೆಗಳು ಸಂಭವಿಸುತ್ತಲೇ ಇರುತ್ತವೆ. ಇದೀಗ ಹಿಟ್ ಅಂಡ್ ರನ್ ಗೆ ವಿದ್ಯಾರ್ಥಿನಿ ಬಲಿಯಾಗಿದ್ದಾಳೆ. ದ್ವಿತೀಯ ವರ್ಷದ ಬಿಕಾಂ ಪದವಿ ಓದುತ್ತಿದ್ದ ವಿದ್ಯಾರ್ಥಿನಿ ದುರ್ಮರಣ ಹೊಂದಿದ್ದಾಳೆ.
ಬೆಂಗಳೂರಿನ ಬೂದಿಗೆರೆ ಕ್ರಾಸ್ ಬಳಿ ಈ ಒಂದು ಅಪಘಾತ ಸಂಭವಿಸಿದೆ. ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದ ವೇಳೆ ಟಿಪ್ಪರ್ ಡಿಕ್ಕಿ ಹೊಡೆದಿದೆಯಾ? ಅಥವಾ ರಸ್ತೆಯಲ್ಲಿ ಗುಂಡಿ ಇರುವುದರಿಂದ ಅದನ್ನು ತಪ್ಪಿಸಲು ಹೋಗಿ ವಿದ್ಯಾರ್ಥಿಗೆ ಕೆಳಗೆ ಬಿದ್ದಿದ್ದಾಳೆ. ಈ ವೇಳೆ ಟಿಪ್ಪರ್ ಏನಾದರೂ ವಿದ್ಯಾರ್ಥಿನಿ ಮೇಲೆ ಹರಿದಿದೆಯಾ ಎನ್ನುವ ಅನುಮಾನ ವ್ಯಕ್ತವಾಗುತ್ತಿದೆ. ಸದ್ಯ ಘಟನಾ ಸ್ಥಳಕ್ಕೆ ಕೆಆರ್ ಪುರಂ ಸಂಚಾರಿ ಠಾಣೆ ಪೋಲಿಸರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.