ಮಂಡ್ಯ : ಮಂಡ್ಯದಲ್ಲಿ 18 ಜನರ ಮೇಲೆ ಬೀದಿ ನಾಯಿಗಳು ದಾಳಿ ಮಾಡಿವೆ ಮಂಡ್ಯ ಜಿಲ್ಲೆಯ ಹಲಗೂರು ಗ್ರಾಮದಲ್ಲಿ ನಾಯಿಗಳ ದಾಳಿಯಿಂದ ಜನರು ಬೆಚ್ಚಿಬಿದ್ದಿದ್ದಾರೆ. ಕಳೆದ ಮೂರು ದಿನಗಳಲ್ಲಿ 18 ಜನರ ಮೇಲೆ ಬೀದಿನಾಯಿಗಳು ಡೆಡ್ಲಿ ಅಟ್ಯಾಕ್ ನಡೆಸಿವೆ. ಹಾಗಾಗಿ ಗ್ರಾಮಸ್ಥರು ಮನೆಯಿಂದ ಹೊರಬರಲು ಭಯಪಡುತ್ತಿದ್ದಾರೆ.
ಮಕ್ಕಳು, ವೃದ್ದರು ಹೊರಗೆ ಓಡಾಡುವುದಕ್ಕೆ ಹೆದರುತ್ತೀದ್ದಾರೆ. ಬೀದಿ ನಾಯಿಗಳ ಹಾವಳಿ ನಿಯಂತ್ರಿಸುದಕ್ಕೆ ಜಿಲ್ಲಾಡಳಿತ ಮತ್ತು ತಾಲೂಕು ಆಡಳಿತದ ವಿರುದ್ಧ ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ದಾರೆ. ಬೀದಿ ನಾಯಿಗಳ ಹಾವಳಿ ತಪ್ಪಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ. ಮಕ್ಕಳು ಸೇರಿದಂತೆ ಇದುವರೆಗೂ 18 ಜನರ ಮೇಲೆ ಬೀದಿ ನಾಯಿಗಳು ದಾಳಿ ಮಾಡಿವೆ.