ಬೆಂಗಳೂರು: ರಾಜ್ಯದ ಗೃಹ ಲಕ್ಷ್ಮಿಯರಿಗೆ ಮತ್ತೊಂದು ಗುಡ್ ನ್ಯೂಸ್ ಅನ್ನು ಸರ್ಕಾರ ನೀಡಿದೆ. ಅದೇ ಶೀಘ್ರವೇ ರಾಜ್ಯ ಸರ್ಕಾರದಿಂದ ಸಹಕಾರ ಸಂಘವನ್ನು ಸ್ಥಾಪನೆ ಮಾಡಲಾಗುತ್ತಿದೆ. ಆ ಮೂಲಕ ಮಹಿಳೆಯರಿಗೆ ಸಾಲಸೌಲಭ್ಯ ದೊರಕಿಸಿಕೊಡುವಂತ ಕೆಲಸ ಮಾಡಲಿದೆ.
ಈ ಬಗ್ಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾಹಿತಿ ಹಂಚಿಕೊಂಡಿದ್ದು, ಮಹಿಳೆಯರಿಗೆ ಬ್ಯಾಂಕ್ ಗಳಿಂದ ಸರಿಯಾಗಿ ಸಾಲ ಸೌಲಭ್ಯ ಸಿಗುತ್ತಿಲ್ಲ. ಇದರ ಪರಿಣಾಮ ಸ್ವಾವಲಂಬಿಯಾಗಿ ಜೀವನ ಕಟ್ಟಿಕೊಳ್ಳಲು ಕಷ್ಟವಾಗುತ್ತಿದೆ. ಇದನ್ನು ಗಮನದಲ್ಲಿಟ್ಟುಕೊಂಡು ರಾಜ್ಯ ಸರ್ಕಾರವು ಗೃಹಲಕ್ಷ್ಮೀ ಯೋಜನೆ ಫಲಾನುಭವಿಗಳ ಹೆಸರಿನಲ್ಲಿ ಸಹಕಾರ ಸಂಘ ಆರಂಭಿಸಲು ಚಿಂತನೆ ನಡೆಸಿದೆ. ಈ ಮೂಲಕ ಮಹಿಳೆಯರಿಗೆ ಸಾಲ ಸೌಲಭ್ಯ ನೀಡಿ ಅವರನ್ನು ಸ್ವಾವಲಂಬಿಗಳಾಗಿ ಮಾಡಲಾಗುವುದು ಎಂದಿದ್ದಾರೆ.
ಗೃಹಲಕ್ಷ್ಮಿಯರ ಸ್ವಯಂ ಉದ್ಯಮದ ಕನಸಿಗೆ ಕಾಂಗ್ರೆಸ್ ಸರ್ಕಾರದ ಆರ್ಥಿಕ ಚೈತನ್ಯ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳನ್ನು ಸ್ವಯಂ ಉದ್ಯಮಿಗಳನ್ನಾಗಿ ಮಾಡಿ ಸ್ವಾವಲಂಬನೆ ಸಾಧಿಸುವಂತೆ ಮಾಡಲು ರಾಜ್ಯ ಕಾಂಗ್ರೆಸ್ ಸರ್ಕಾರ ಸಹಕಾರ ಸಂಘ ಸ್ಥಾಪನೆಯ ಮಹತ್ವದ ಹೆಜ್ಜೆ ಇಟ್ಟಿದೆ. ಗೃಹಲಕ್ಷ್ಮಿ ಯೋಜನೆಯಿಂದ ರಾಜ್ಯದ 1.24 ಕೋಟಿ ಮಹಿಳೆಯರು ಪ್ರತಿ ತಿಂಗಳು ₹2,000 ಪಡೆಯುತ್ತಿದ್ದು, ಸಾಕಷ್ಟು ಮಹಿಳೆಯರು ಗೃಹಲಕ್ಷ್ಮಿ ಯೋಜನೆಯಿಂದ ಬಂದ ಹಣವನ್ನು ಕೂಡಿಟ್ಟು ಸ್ವಂತ ಉದ್ಯಮ ಆರಂಭಿಸುವ ಮೂಲಕ ಸ್ವಾವಲಂಬಿ ಜೀವನ ನಡೆಸುತ್ತಿದ್ದಾರೆ. ಅವರಿಗೆ ಹೆಚ್ಚಿನ ಮಟ್ಟದಲ್ಲಿ ಉದ್ಯಮ ನಡೆಸಲು ಸಾಲ ಸೌಲಭ್ಯ ಕಲ್ಪಿಸಲು ರಾಜ್ಯ ಕಾಂಗ್ರೆಸ್ ಸರ್ಕಾರ ಶೀಘ್ರದಲ್ಲೇ ಗೃಹಲಕ್ಷ್ಮಿ ಸಹಕಾರ ಸಂಘಗಳನ್ನು ಸ್ಥಾಪಿಸಲಿದೆ ಎಂದಿದ್ದಾರೆ.
ಐಸಿಡಿಎಸ್ ವ್ಯಾಪ್ತಿಗೆ ಬರುವ ಅಂಗನವಾಡಿ ಕೇಂದ್ರ ಆರಂಭವಾಗಿ ಐವತ್ತು ವರ್ಷ ಆಗಿದ್ದು, ಇದೀಗ ಸುವರ್ಣ ಮಹೋತ್ಸವ ಕಾರ್ಯಕ್ರಮ ಮಾಡಲು ಚಿಂತನೆ ನಡೆದಿದೆ. ಎಲ್ ಕೆಜಿ, ಯುಕೆಜಿ ಆರಂಭಿಸುವ ಮೂಲಕ ಅಂಗನವಾಡಿಯನ್ನು ಮತ್ತೊಂದು ಹೆಜ್ಜೆ ಮುಂದಕ್ಕೆ ಕೊಂಡೊಯ್ಯಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಮಹಿಳೆ ಎಂದರೇ ಸ್ವಾವಲಂಬನೆಯ ಪ್ರತೀಕ. ಪಂಚ ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಮಹಿಳೆಯರ ಬದುಕು ಸುಧಾರಣೆ ಕಂಡಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಹೇಳಿದ್ದಾರೆ.
ಗೃಹಲಕ್ಷ್ಮಿಯರ ಸ್ವಯಂ ಉದ್ಯಮದ ಕನಸಿಗೆ ಕಾಂಗ್ರೆಸ್ ಸರ್ಕಾರದ ಆರ್ಥಿಕ ಚೈತನ್ಯ
ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳನ್ನು ಸ್ವಯಂ ಉದ್ಯಮಿಗಳನ್ನಾಗಿ ಮಾಡಿ ಸ್ವಾವಲಂಬನೆ ಸಾಧಿಸುವಂತೆ ಮಾಡಲು ರಾಜ್ಯ ಕಾಂಗ್ರೆಸ್ ಸರ್ಕಾರ ಸಹಕಾರ ಸಂಘ ಸ್ಥಾಪನೆಯ ಮಹತ್ವದ ಹೆಜ್ಜೆ ಇಟ್ಟಿದೆ.
ಗೃಹಲಕ್ಷ್ಮಿ ಯೋಜನೆಯಿಂದ ರಾಜ್ಯದ 1.24 ಕೋಟಿ ಮಹಿಳೆಯರು ಪ್ರತಿ ತಿಂಗಳು… pic.twitter.com/MWN4iUzisa
— Karnataka Congress (@INCKarnataka) September 29, 2025
SHOCKING: ರಾಜ್ಯದಲ್ಲೊಂದು ಹೀನಾತಿಹೀನ ಘಟನೆ ಬಯಲು: ಅಪ್ರಾಪ್ತೆ ಜೊತೆ ಲೈಂಗಿಕ ಸಂಪರ್ಕಕ್ಕೆ 20 ಲಕ್ಷಕ್ಕೆ ಡಿಮ್ಯಾಂಡ್