ಬಳ್ಳಾರಿ: ಇಂದು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಜನತಾ ದರ್ಶನ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಡಿಸಿ ಕಚೇರಿ ಮುಂಭಾಗದಲ್ಲಿ ನಡೆಯುತ್ತಿದ್ದಂತ ಜನತಾ ದರ್ಶನದಲ್ಲಿ ಬಂದೋಬಸ್ತ್ ನಲ್ಲಿ ಎಎಸ್ಐ ತೊಡಗಿದ್ದರು. ಇಂತಹ ಎಎಸ್ಐ ಒಬ್ಬರು ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ.
ಬಳ್ಳಾರಿಯ ಹೊಸ ಡಿಸಿ ಕಚೇರಿ ಮುಂಭಾಗದಲ್ಲಿ ಸಚಿವ ಜಮೀರ್ ಅಹ್ಮದ್ ಜನತಾ ದರ್ಶನವನ್ನು ನಡೆಸುತ್ತಿದ್ದಾರೆ. ಈ ಜನತಾ ದರ್ಶನದ ಬಂದೋಬಸ್ತ್ ಕಾರ್ಯಕ್ಕೆ ಬಳ್ಳಾರಿಯ ಎಪಿಎಂಸಿ ಠಾಣೆಯ ಎಎಸ್ಐ ಶ್ರೀನಿವಾಸ ರಾವ್(54) ನಿಯೋಜಿಸಲಾಗಿತ್ತು.
ಕರ್ತವ್ಯದ ವೇಳೆಯಲ್ಲಿ ಲೋ ಬಿಪಿಯಿಂದ ಎಎಸ್ಐ ಶ್ರೀನಿವಾಸ ರಾವ್ ಕುಸಿದು ಬಿದ್ದಿದ್ದರು. ಅವರನ್ನು ಕೂಡಲೇ ಬಿಮ್ಸ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಆದರೇ ಚಿಕಿತ್ಸೆ ಫಲಿಸದೇ ಶ್ರೀನಿವಾಸ ರಾವ್ ಅವರು ಮೃತಪಟ್ಟಿದ್ದಾರೆ ಎಂಬುದಾಗಿ ತಿಳಿದು ಬಂದಿದೆ.
ಪ್ಲೇ ಸ್ಟೋರ್ ನಲ್ಲಿ ನಂ.1 ಸ್ಥಾನ ತಲುಪಿದ ಭಾರತದ ಸ್ವದೇಶಿ ಮೆಸೇಜಿಂಗ್ ಆ್ಯಪ್ ಅರಟ್ಟೈ | Arattai App
SHOCKING :` ಚಿಕನ್’ ಬೇಕು ಎಂದ ಹೆತ್ತ ಮಗನನ್ನೇ ಲಟ್ಟಣಿಗೆಯಿಂದ ಹೊಡೆದು ಕೊಂದ ಪಾಪಿ ತಾಯಿ.!