ಬೆಂಗಳೂರು: ರಾಜ್ಯ ಸರ್ಕಾರದಿಂದ ಅತಿಥಿ ಉಪನ್ಯಾಸಕರಿಗೆ ಗುಡ್ ನ್ಯೂಸ್ ನೀಡಲಾಗಿದೆ. ಅದೇ 2025-26ನೇ ಶೈಕ್ಷಣಿಕ ಸಾಲಿಗೆ ಅತಿಥಿ ಉಪನ್ಯಾಸಕರನ್ನು ಕಾರ್ಯಭಾರಕ್ಕೆ ಅನುಗುಣವಾಗಿ ಮುಂದುವರಿಸಿ ಆದೇಶಿಸಿದೆ. ಜೊತೆಗೆ ಯುಜಿಸಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳನ್ನು ಅತಿಥಿ ಉಪನ್ಯಾಸಕರನ್ನಾಗಿ ಆಯ್ಕೆ ಮಾಡಿಕೊಳ್ಳಲು ಅನುಮತಿಸಿ ಆದೇಶಿಸಿದೆ.
ಈ ಕುರಿತಂತೆ ಉನ್ನತ ಶಿಕ್ಷಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಯವರು ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ಆಯುಕ್ತರಿಗೆ ಪತ್ರ ಬರೆದಿದ್ದಾರೆ. ಅದರಲ್ಲಿ ಏಕ ಕಡತದಲ್ಲಿ ಕೋರಿರುವ ಪ್ರಸ್ತಾವನೆಯನ್ನು ಪರಿಶೀಲಿಸಲಾಗಿ, ಮಾನ್ಯ ಹೆಚ್ಚುವರಿ ಅಡ್ವಕೆಟ್ ಜನರಲ್ ರವರು ನೀಡಿರುವ ಕಾನೂನು ಅಭಿಪ್ರಾಯದಂತೆ, ರಿಟ್ ಅಪೀಲು ಸಂಖ್ಯೆ:1578/2024 ರಲ್ಲಿ ಮಾನ್ಯ ನ್ಯಾಯಾಲಯವು ದಿನಾಂಕ:09-09-2025 ರಂದು ನೀಡಿರುವ ಮಧ್ಯಂತರ ಆದೇಶದ ಅವಲೋಕನೆಗಳಿಗೆ ಒಳಪಟ್ಟು ಹಾಗೂ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ 2025- 26ನೇ ಶೈಕ್ಷಣಿಕ ಸಾಲಿನ ಹಾಲಿ ಸೆಮಿಸ್ಟರ್ ಪೂರ್ಣಗೊಳ್ಳುವವರೆಗೆ 2024-25ನೇ ಸಾಲಿನಲ್ಲಿ ಕರ್ತವ್ಯ ನಿರ್ವಹಿಸಿದ ಅತಿಥಿ ಉಪನ್ಯಾಸಕರನ್ನು ಕಾರ್ಯಭಾರಕ್ಕೆ ಅನುಗುಣವಾಗಿ ಮುಂದುವರೆಸಲು ಆದೇಶಿಸಿದೆ.
ಈ ರೀತಿ ಮುಂದುವರಿಕೆ ನಂತರವೂ ಕಾರ್ಯಭಾರವಿದ್ದಲ್ಲಿ ಅಂತಹ ಕಾರ್ಯಭಾರಕ್ಕೆ ಎದುರಾಗಿ, ಮಾನ್ಯ ನ್ಯಾಯಾಲದ ಮಧ್ಯಂತರ ಆದೇಶದನುಸಾರ, ಪ್ರಸ್ತುತ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಲ್ಲಿ ಯು.ಜಿ.ಸಿ. ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳನ್ನು ಅತಿಥಿ ಉಪನ್ಯಾಸಕರನ್ನಾಗಿ ಆಯ್ಕೆ ಮಾಡಿಕೊಳ್ಳಲು ಅನುಮತಿಸಲಾಗಿದೆ ಎಂದು ತಿಳಿಸಲು ನಿರ್ದೇಶಿಸಿದ್ದಾರೆ.
ವರದಿ; ವಸಂತ ಬಿ ಈಶ್ವರಗೆರೆ…, ಸಂಪಾದಕರು
SHOCKING :` ಚಿಕನ್’ ಬೇಕು ಎಂದ ಹೆತ್ತ ಮಗನನ್ನೇ ಲಟ್ಟಣಿಗೆಯಿಂದ ಹೊಡೆದು ಕೊಂದ ಪಾಪಿ ತಾಯಿ.!