ಬೆಂಗಳೂರು: ಅಕ್ಟೋಬರ್.2ರಂದು ಗಾಂಧಿ ಜಯಂತಿ ಪ್ರಯುಕ್ತ ಪ್ರಾಣಿವಧೆ ಹಾಗೂ ಮಾಂಸ ಮಾರಾಟ ನಿಷೇಧ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಆದೇಶಿಸಿದೆ.
ದಿನಾಂಕ: 02-10-2025 (ಗುರುವಾರ) ದಂದು “ಗಾಂಧಿ ಜಯಂತಿ” ಪ್ರಯುಕ್ತ ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವಿಶೇಷ ಆಯುಕ್ತರು(ಆರೋಗ್ಯ & ಶಿಕ್ಷಣ) ರವರು ತಿಳಿಸಿದ್ದಾರೆ.
ಬೆಂಗಳೂರು ಪಶ್ಚಿಮ ನಗರ ಪಾಲಿಕೆ ಆಯುಕ್ತರಿಂದ ಜಾತಿಗಣತಿ ತರಬೇತಿ ಕಾರ್ಯಗಾರಕ್ಕೆ ಭೇಟಿ ಹಾಗೂ ಪರಿಶೀಲನೆ
ಬೆಂಗಳೂರು ಪಶ್ಚಿಮ ನಗರ ಪಾಲಿಕೆ ಆಯುಕ್ತರಿಂದ ಸಾಮಾಜಿಕ ಶೈಕ್ಷಣಿಕ ಸಮೀಕ್ಷಾ ಕಾರ್ಯ 2025ರ ತರಬೇತಿ ಕಾರ್ಯಗಾರಕ್ಕೆ ಭೇಟಿ ಹಾಗೂ ಪರಿಶೀಲನೆ:
ಬೆಂಗಳೂರು ಪಶ್ಚಿಮ ನಗರ ಪಾಲಿಕೆ ಆಯುಕ್ತರಾದ ಡಾ. ರಾಜೇಂದ್ರ ಕೆ. ವಿ. ರವರು ಸಾಮಾಜಿಕ, ಶೈಕ್ಷಣಿಕ ಸಮೀಕ್ಷಾ ಕಾರ್ಯ 2025ರ ತರಬೇತಿ ಕಾರ್ಯಗಾರಕ್ಕೆ ಭೇಟಿ ನೀಡಿ ಗಣತಿದಾರರಿಗೆ ಹಾಗೂ ಅಧಿಕಾರಿಗಳಿಗೆ ಅಗತ್ಯ ಸೂಚನೆಗಳನ್ನು ನೀಡಿದರು.
ಆಯುಕ್ತರು ಗೋವಿಂದರಾಜ ನಗರ ವಿಧಾನಸಭಾ ಕ್ಷೇತ್ರದಲ್ಲಿ ಸಾಮಾಜಿಕ, ಶೈಕ್ಷಣಿಕ ಸಮೀಕ್ಷಾ ಕಾರ್ಯದ ತರಬೇತಿ ಕಾರ್ಯಗಾರಕ್ಕೆ ಹಾಗೂ ಕೆ.ಎಲ್.ಇ. ಕಾಲೇಜಿನಲ್ಲಿ ಏರ್ಪಡಿಸಿದ್ದ ರಾಜಾಜಿನಗರ ಮತ್ತು ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರಗಳ ಸಾಮಾಜಿಕ ಶೈಕ್ಷಣಿಕ ಸಮೀಕ್ಷಾ ಕಾರ್ಯದ ತರಬೇತಿ ಕಾರ್ಯಗಾರಕ್ಕೆ ಭೇಟಿ ನೀಡಿದರು.
ಈ ವೇಳೆ ಆಯುಕ್ತರು ಗಣತಿದಾರರಾಗಿ ನೇಮಕವಾಗಿರುವ ಸಿಬ್ಬಂದಿಗಳಿಗೆ ಸಮೀಕ್ಷಾ ಕಾರ್ಯ ನಿರ್ವಹಣೆಯ ಸಂಬಂಧ ಸಂಕ್ಷಿಪ್ತವಾಗಿ ವಿವರಿಸಿದರು ಮತ್ತು ಸಿಬ್ಬಂದಿಗಳನ್ನು ಸಮೀಕ್ಷಾ ಕಾರ್ಯ ನಿರ್ವಹಿಸಲು ಹುರಿದುಂಬಿಸಿದರು.
ಈ ಸಂದರ್ಭದಲ್ಲಿ ಜಂಟಿ ಆಯುಕ್ತರಾದ ಸಂಗಪ್ಪ, ಕೆಎಎಸ್ ನೋಡಲ್ ಅಧಿಕಾರಿಗಳಾದ ಶ್ರೀನಿವಾಸ ಗೌಡ ಹಾಗೂ ಶ್ರೀನಿವಾಸ ರವರು ಹಾಜರಿದ್ದರು.
ಆಯುಕ್ತರಿಂದ ನಗರ ಪಾಲಿಕೆಯ ವ್ಯಾಪ್ತಿಯ ವಿವಿಧ ಸ್ಥಳಗಳಿಗೆ ಭೇಟಿ ಹಾಗೂ ಸಮಗ್ರ ಪರಿಶೀಲನೆ:
ಇಂದು ಬೆಳಿಗ್ಗೆ ನಗರ ಪಾಲಿಕೆಯ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಸಮಗ್ರ ಪರಿಶೀಲನೆ ನಡೆಸಿದ ಆಯುಕ್ತರು, ನಾಗರಿಕ ಸೌಲಭ್ಯಗಳಿಗೆ ಸಂಬಂಧಿಸಿದಂತೆ ಹಲವು ವಿಷಯಗಳಿಗೆ ಅಗತ್ಯ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಪರಿಶೀಲನೆಯ ವೇಳೆ ಮಲ್ಲೇಶ್ವರ ವಿಭಾಗದ ವಾರ್ಡ್ ಸಂಖ್ಯೆ 35, ಅರಮನೆ ನಗರ ವ್ಯಾಪ್ತಿಯ ನ್ಯೂ ಬಿಇಎಲ್ ರಸ್ತೆಯಿಂದ ಎಮ್.ಎಸ್.ಆರ್ ನಗರ, ಆರ್.ಕೆ ಗಾರ್ಡನ್, ಆರ್.ಎಮ್.ವಿ ಎರಡನೇ ಹಂತ ಅಶ್ವತ್ಥ ನಗರ, ವಾರ್ಡ್ 36ರ ಮತ್ತಿಕೆರೆಗೆ ತೆರಳಿ ಸ್ಥಳ ಪರಿಶೀಲನೆ ನಡೆಸಿದರು.
ವ್ಯವಸ್ಥಿತ ತ್ಯಾಜ್ಯ ನಿರ್ವಹಣೆಗೆ ಸೂಚನೆ:
ಪರಿಶೀಲನೆಯ ವೇಳೆ ಆಯುಕ್ತರು ನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಿ ಸೂಕ್ತ ರೀತಿಯಲ್ಲಿ, ವ್ಯವಸ್ಥಿತವಾಗಿ ತ್ಯಾಜ್ಯ ನಿರ್ವಹಣೆಯ ಕಾರ್ಯವನ್ನು ನಿರ್ವಹಿಸಿ, ನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಸ್ವಚ್ಛತೆ ಕಾಪಾಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಪಾದಚಾರಿ ಮಾರ್ಗ ಸೂಕ್ತ ನಿರ್ವಹಣೆಗೆ ಸೂಚನೆ:
ಪಾದಚಾರಿಗಳಿಗೆ ಅನುಕೂಲವಾಗುವಂತೆ ಅಡೆತಡೆಗಳಿಲ್ಲದಂತಹ ಪಾದಚಾರಿ ಮಾರ್ಗ ನಿರ್ಮಿಸಿ, ಒತ್ತುವರಿಗಳನ್ನು ತೆರವುಗೊಳಿಸಿ, ದುರಸ್ತಿಯ ಅಗತ್ಯವಿದ್ದಲ್ಲಿ ತ್ವರಿತವಾಗಿ ದುರಸ್ತಿ ಕಾರ್ಯ ಕೈಗೆತ್ತಿಕೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಕ್ಷಿಪ್ರ ಗತಿಯಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚಿ:
ನಗರ ಪಾಲಿಕೆಯ ವ್ಯಾಪ್ತಿಯಲ್ಲಿ ರಸ್ತೆ ಗುಂಡಿಗಳನ್ನು ಕ್ಷಿಪ್ರ ಗತಿಯಲ್ಲಿ ಮುಚ್ಚುವಂತೆ ಹಾಗೂ ಗುಣಮಟ್ಟವನ್ನು ಕಾಯ್ದುಕೊಂಡು ರಸ್ತೆ ಗುಂಡಿಗಳನ್ನು ಮುಚ್ಚುವಂತೆ ಆಯುಕ್ತರು ಅಧಿಕಾರಿಗಳಿಗೆ ಸೂಚಿಸಿದರು.
ಆಸ್ತಿ ತೆರಿಗೆ ಸಂಗ್ರಹದತ್ತ ಗಮನ ಹರಿಸಿ:
ನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಅಧಿಕಾರಿಗಳು ಆಸ್ತಿ ತೆರಿಗೆ ಸಂಗ್ರಹದತ್ತ ಗಮನ ಹರಿಸಿ, ಸೂಕ್ತ ರೀತಿಯಲ್ಲಿ ತೆರಿಗೆ ಸಂಗ್ರಹ ಕಾರ್ಯವನ್ನು ನಡೆಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಈ ಪರಿಶೀಲನಾ ಭೇಟಿಯಲ್ಲಿ ಜಂಟಿ ಆಯುಕ್ತರಾದ ಸಂಗಪ್ಪ ಹಾಗೂ ವಿಭಾಗಕ್ಕೆ ಸಂಬಂಧಿಸಿದ ಎಲ್ಲ ಅಧಿಕಾರಿಗಳು ಉಪಸ್ಥಿತರಿದ್ದರು.
ಗ್ಯಾರಂಟಿ ಯೋಜನೆಯಿಂದ ಜೀವನ ಗುಣಮಟ್ಟ ಸುಧಾರಣೆ: ಶಿವಮೊಗ್ಗ ತಾಲ್ಲೂಕು ಘಟಕ ಅಧ್ಯಕ್ಷ ಮಧು ಎಚ್.ಎಂ
BREAKING : ವರದಕ್ಷಿಣೆಗಾಗಿ ಪತಿಯ ಮನೆಯವರಿಂದ ಮೃಗಿಯ ವರ್ತನೆ : ಮಹಿಳೆಯ ಕೂದಲು ಹಿಡಿದು, ಒದ್ದು ಭೀಕರ ಹಲ್ಲೆ!