ಬೆಂಗಳೂರು : ರಾಜ್ಯದಲ್ಲಿ ಇನ್ಮುಂದೆ ಏಕೀಕೃತ ಭೂಸ್ವಾಧೀನ ವ್ಯವಸ್ಥೆ ಜಾರಿಗೆ ತರಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ರಾಜ್ಯ ಸರ್ಕಾರಿ ಯೋಜನೆಗಳಿಗೆ ನಡೆಯುವ ಭೂಸ್ವಾಧೀನ ಪ್ರಕ್ರಿಯೆಯಲ್ಲಿ ಅಕ್ರಮ, ಪರಿಹಾರ ನೀಡಿಕೆಯಲ್ಲಿ ಅನ್ಯಾಯ, ಅವ್ಯವಹಾರ ತಡೆ ಯಲು ರಾಜ್ಯದಲ್ಲಿ ಆನ್ಲೈನ್ ಆಧಾರಿತ ಏಕೀಕೃತ ಭೂಸ್ವಾಧೀನ ವ್ಯವಸ್ಥೆ-ದತ್ತಾಂಶ ಮಾದರಿ ಜಾರಿಗೆ ತರಲಾಗಿದ್ದು, ಭೂಸ್ವಾಧೀನ ಪ್ರಕ್ರಿಯೆ ಸಮನ್ವಯಗೊಳಿಸಲು. ಪ್ರಸ್ತುತ ಕೈಗೊಳ್ಳುತ್ತಿರುವ ಭೂಸ್ವಾಧೀನ ಪ್ರಕ್ರಿಯೆಗಳು ಮತ್ತು ಹಿಂದಿನ ಭೂಸ್ವಾಧೀನ ಪ್ರಕರಣಗಳಲ್ಲಿನ ಮೊಕದ್ದಮೆ ಗುರುತಿಸುವ ಏಕೀಕೃತ ಡಿಜಿಟಲ್ ವೇದಿಕೆ ಇದಾಗಿದೆ ಎಂದು ತಿಳಿಸಿದ್ದಾರೆ.
ಭೂಸ್ವಾಧೀನ ಸ್ಥಿತಿಗಳ ಕುರಿತು ನೈಜ ಮಾಹಿತಿ ಪಾಲುದಾರರು ಮತ್ತು ತೀರ್ಮಾನ ಕೈಗೊಳ್ಳುವ ಸಂಸ್ಥೆಗಳಿಗೆ ಕ್ರೋಢೀಕೃತ ಡ್ಯಾಶ್ಬೋರ್ಡ್ನ ಮೂಲಕ ತಲುಪಿಸಲು ಅನುವಾಗಲಿದ್ದು, ಈ ತಂತ್ರವು ಕಂದಾಯ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ನಗರಾಭಿವೃದ್ಧಿಯ ಭೂ ತಂತ್ರವಾಗಿದೆ. ಇಲಾಖೆಯಇ-ಸ್ವತ್ತು ತಂತ್ರಾಂಶಗಳು, ಯುಎಲ್ ಇಎಂಎಸ್ ಇ-ಖಾತಾ, ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕಾವೇರಿ 2.0 ತಂತ್ರಾಂಶ ಸೇರಿ ಸಂಬಂಧಿಸಿದ ಎಲ್ಲ ವ್ಯವಸ್ಥೆಗಳೊಂದಿಗೆ ಜೋಡಣೆಯಾಗಿರುವ ಏಕೀಕೃತ ವ್ಯವಸ್ಥೆಯಾಗಿದೆ ಎಂದು ಹೇಳಿದ್ದಾರೆ.
.








