ಬೆಂಗಳೂರು : ರಾಜ್ಯದ ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ರಚಿಸಲಾಗಿರುವ ಮಹಿಳೆಯರ ಮತ್ತು ಮಕ್ಕಳ ರಕ್ಷಣೆಯ ಕಾವಲು ಸಮಿತಿಯು ನಿರ್ವಹಿಸಬೇಕಾದ ಜವಾಬ್ದಾರಿಗಳ ಮಾಹಿತಿ ಇಲ್ಲಿದೆ.
ಗ್ರಾಮ ಪಂಚಾಯತಿಯ ಪ್ರತಿ ಶಾಲೆಗಳಲ್ಲಿ ಮಕ್ಕಳ ಹಕ್ಕುಗಳ ಕ್ಲಬ್ ಅಥವಾ ಬಾಲಕಿಯರ ಗುಂಪು ತಂಡ ರಚಿಸುವುದು.
ಹೆಣ್ಣು ಮಕ್ಕಳಿಗೆ ಪ್ರತ್ಯೇಕ ಶೌಚಾಲಯ, ವಿಕಲಚೇತನ ಮಕ್ಕಳಿಗೆ ಶೌಚಾಲಯ ಹಾಗೂ ಇತರೆ ಮೂಲಭೂತ ಸೌಕರ್ಯಗಳು ಲಭ್ಯವಾಗುವಂತೆ ನೋಡಿಕೊಳ್ಳುವುದು.
ಮಹಿಳೆಯರು ಮತ್ತು ಮಕ್ಕಳ ಕಳ್ಳಸಾಗಾಣಿಕೆ ತಡೆಯಲು ಗ್ರಾಮ ಮಟ್ಟದಲ್ಲಿ ಅರಿವು ಮೂಡಿಸಲು ಕಾರ್ಯಕ್ರಮ ಆಯೋಜನೆ.
ಗ್ರಾಮ ಪಂಚಾಯತಿ ಮಟ್ಟದಲ್ಲಿ 18 ವರ್ಷದೊಳಗಿನ ಹೆಣ್ಣು ಮಕ್ಕಳು ಮತ್ತು 21 ವರ್ಷದೊಳಗಿನ ಗಂಡು ಮಕ್ಕಳ ಮಾಹಿತಿಯನ್ನು ಹೊಂದಿರಬೇಕು.
ಶಾಲೆಯಿಂದ ಹೊರಗುಳಿದಿರುವ ಮಕ್ಕಳ ಅಂಕಿ ಸಂಖ್ಯೆಗಳನ್ನು ದಾಖಲಿಸಿಕೊಂಡಿರಬೇಕು.
ಮಹಿಳೆಯರಿಗೆ ಮತ್ತು ಮಕ್ಕಳಿಗೆ ರಕ್ಷಣೆ ನೀಡುವುದು ಮತ್ತು ಅವರಿಗೆ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ, ನೈತಿಕ ಮತ್ತು ವೈದ್ಯಕೀಯ ನೆರವು ದೊರೆಯುವಂತೆ ಮಾಡುವುದು.
ಹೆಣ್ಣು ಮಕ್ಕಳನ್ನು ಗೌರವಿಸುವುದು ಮತ್ತು ರಕ್ಷಣೆ ನೀಡುವುದು ನಮ್ಮೆಲ್ಲರ ಜವಾಬ್ದಾರಿ.
ಬಾಲ್ಯ ವಿವಾಹದಿಂದ ಉಂಟಾಗುವ ದುಷ್ಪರಿಣಾಮಗಳ ಮತ್ತು ಬಾಲ್ಯವಿವಾಹ ನಿಷೇಧದ ಕಾನೂನಿನ ಬಗ್ಗೆ ಅರಿವು ಮೂಡಿಸುವುದು.
ಗ್ರಾಮದಲ್ಲಿ ಬಾಲ್ಯವಿವಾಹ ನಡೆಯುತ್ತಿರುವುದು ಕಂಡುಬಂದಲ್ಲಿ ಕೂಡಲೇ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತರುವುದು.
ಗ್ರಾಮ ಪಂಚಾಯತಿ ವ್ಯಾಪ್ತಿಯ 18 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಗುಣಮಟ್ಟದ ಶಿಕ್ಷಣವನ್ನು ನೀಡಲು ಸಂಘಸಂಸ್ಥೆಗಳಿಂದ ಅಗತ್ಯ ನೆರವನ್ನು ಪಡೆದುಕೊಳ್ಳುವುದು.
ಹೆಣ್ಣುಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವುದು ನಮ್ಮೆಲ್ಲರ ಆದ್ಯ ಕರ್ತವ್ಯ.








