ಬೆಂಗಳೂರ: ನಟ ದರ್ಶನ್ ಕೊಲೆ ಆರೋಪದ ಮೇಲೆ ಸದ್ಯ ಬೆಂಗಳೂರಿನಲ್ಲಿ ಪರಪ್ಪನ ಅಗ್ರಹಾರದಲ್ಲಿರುವ ಜೈಲಿಲ್ಲಿ ಇದ್ದಾರೆ. ಕೋರ್ಟ್‌ನಲ್ಲಿ ತಮಗೆ ಬೇಕಾಗಿರುವ ವಸ್ತುಗಳನ್ನು ನೀಡದ ಜೈಲಿನ ಅಧಿಕಾರಿಗಳ ವಿರುದ್ದ ಮನವಿ ಮಾಡಿದ್ದು, ಅದರ ಅರ್ಜಿ ವಿಚಾರಣೆ ಬೆಂಗಳೂರಿನ57ನೇ ಸೇಷನ್ಸ್ ನ್ಯಾಯಾಲಯದಲ್ಲಿ ನಡೆಯುತ್ತಿದೆ.
ಜೈಲಾಧಿಕಾರಿಗಳು ಕೋರ್ಟ್ ಆದೇಶ ಪಾಲಿಸಿದ ಆರೋಪದ ಹಿನ್ನೆಲೆಯಲ್ಲಿ ಕೋರ್ಟ್ ನಲ್ಲಿ ಕೊಲೆ ಆರೋಪಿ ದರ್ಶನ್ ಸಲ್ಲಿಸಿದ ಅರ್ಜಿ ವಿಚಾರಣೆ ಇಂದು ನಡೆಯಿತು. ಕೋರ್ಟಿಗೆ ಖುದ್ದು ಹಾಜರಾದ ಜೈಲು ಅಧಿಕ್ಷಕ ಸುರೇಶ್ ಕೋರ್ಟಿಗೆ ಹಾಜರಾದರು. ಈ ವೇಳೆ ಜೈಲು ಅಧಿಕ್ಷಕ ಸಂಪೂರ್ಣ ವರದಿ ಸಲ್ಲಿಸಿದ್ದಾರೆ.
ಬೆಂಗಳೂರಿನ 57ನೇ ಸೆಷನ್ಸ್ ಕೋರ್ಟಿಗೆ ಜೈಲು ಅಧಿಕ್ಷಕ ವರದಿ ಸಲ್ಲಿಸಿದ್ದಾರೆ. ಕ್ವಾರಂಟೈನ್ ಸೆಲ್ ನಿಂದ ಬ್ಯಾರಕ್ ಗೆ ಸ್ಥಳಾಂತರಿಸಲು ನಟ ದರ್ಶನ್ ಕೋರಿದ್ದಾರೆ. ವಾಕ್ ಮಾಡಲು ಕಡಿಮೆ ಸಮಯ ಜಾಗ ನೀಡಿದ್ದಾರೆ. ಜೈಲಾಧಿಕಾರಿಗಳು ಕೋರ್ಟ್ ಆದೇಶ ಪಾಲಿಸಿದ ಆರೋಪ ಹಿನ್ನೆಲೆಯಲ್ಲಿ ಕೋರ್ಟ್ ನಲ್ಲಿ ಇದೀಗ ಕೊಲೆ ಆರೋಪಿ ದರ್ಶನ ವಿಚಾರಣೆ ನಡೆಯಿತು.
ಇನ್ನು ಜೈಲಿನಲ್ಲಿ ಹೆಚ್ಚುವರಿ ಹಾಸಿಗೆ ದಿಂಬು ನೀಡಿದ ಆರೋಪ ವಿಚಾರಕ್ಕೆ ಸಂಬಂಧಪಟ್ಟಂತೆ ದರ್ಶನ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ಆರಂಭವಾಯಿತು. ಜೈಲು ಅಧಿಕಾರಿಗಳ ಪರವಾಗಿ ಎಸ್‍ಪಿಪಿ ಪ್ರಸನ್ನಕುಮಾರ್ ವಾದ ಆರಂಭಿಸಿದರು. ಜೈಲು ಕೈಪಿಡಿಯಂತೆ ಕ್ರಮ ಕೈಗೊಳ್ಳಲಾಗಿದೆ. ಟೆಲಿಫೋನ್ ವಿಡಿಯೋ ಕಾನ್ಫರೆನ್ಸ್ ವ್ಯವಸ್ಥೆ ಸಹ ಮಾಡಲಾಗಿದೆ. ಚಾದರ್, ಹಾಸಿಗೆ ದಿಂಬು ಕೊಡಲಾಗಿದೆ. ಪಲ್ಲಂಗ ಕೇಳಿದರೆ ಕೊಡಲು ಅವಕಾಶ ಇಲ್ಲ ಓಡಾಡಲು ಅವಕಾಶ ಕೇಳಿದರು ಅದನ್ನು ಸಹ ಕೊಟ್ಟಿದ್ದೇವೆ ಎಂದು ವಾದಿಸಿದರು.