ಬೆಂಗಳೂರು: ನಗರದಲ್ಲಿ ಕಟ್ಟಡ ನಿರ್ಮಾಣದ ವೇಳೆಯಲ್ಲಿ ಮಣ್ಣು ಕುಸಿದು ಇಬ್ಬರು ಕಾರ್ಮಿಕರು ಸಾವನ್ನಪ್ಪಿರುವಂತ ಘಟನೆ ನಡೆದಿದೆ. ಈ ದುರಂತದಲ್ಲಿ ಮತ್ತೋರ್ವ ಕಾರ್ಮಿಕ ಗಂಭೀರವಾಗಿ ಗಾಯಗೊಂಡಿದ್ದಾರೆ.
ಬೆಂಗಳೂರಿನ ಮಡಿವಾಳದ ಸಿದ್ಧಾರ್ಥ ಕಾಲೋನಿಯಲ್ಲಿ ಈ ದುರ್ಘಟನೆ ನಡೆದಿದೆ. ಕಟ್ಟಡ ನಿರ್ಮಾಣದ ವೇಳೆಯಲ್ಲಿ ಮಣ್ಣು ಕುಸಿದು ಲಾಲ್ ಮದನ್(33) ಹಾಗೂ ರಜಾವುದ್ದೀನ್ (30) ದುರ್ಮರಣ ಹೊಂದಿದ್ದಾರೆ. ಮತ್ತೊಬ್ಬ ಕಾರ್ಮಿಕ ಸೈಪುಲ್ಲಾ ಸ್ಥಿತಿ ಗಂಭೀರವಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಕಟ್ಟಡ ನಿರ್ಮಾಣಕ್ಕೆ ಪಿಲ್ಲರ್ ಹಾಕಲು ಮಣ್ಣು ತೆಗೆಯುತ್ತಿದ್ದಂತ ಸಂದರ್ಭದಲ್ಲಿ ಈ ದುರಂತ ಸಂಭವಿಸಿದೆ. ಪಿಲ್ಲರ್ ಗಾಗಿ 20ಕ್ಕೂ ಹೆಚ್ಚು ಅಡಿ ಮಣ್ಣು ತೆಗೆಯಲಾಗುತ್ತಿತ್ತು. ಈ ವೇಳೆ ಕೆಳಗೆ ಕೆಲಸ ಮಾಡುತ್ತಿದ್ದ ಕಾರ್ಮಿಕರ ಮೇಲೆ ಮಣ್ಣು ಬಿದ್ದು ಇಬ್ಬರು ಸಾವನ್ನಪ್ಪಿದ್ದಾರೆ. ಈ ಸಂಬಂಧ ಮಡಿವಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಿಜೆಪಿಗರೇ ‘ಮಹಿಷಾಸುರ ಟ್ಯಾಕ್ಸ್’ ನೀವು ಅಧಿಕಾರದಲ್ಲಿದ್ದಾಗಲೇ ಜಾರಿಗೆ ತಂದಿದ್ದು: ಸಚಿವ ರಾಮಲಿಂಗಾರೆಡ್ಡಿ ತಿರುಗೇಟು