ದಕ್ಷಿಣಕನ್ನಡ : ಮಹೇಶ್ ಶೆಟ್ಟಿ ತಿಮ್ಮರೊಡಿಗೆ ಗಡಿಪಾರು ಆದೇಶಕ್ಕೆ ಮಧ್ಯಂತರ ತಡೆಯಾಜ್ಞೆ ವಿಚಾರವಾಗಿ ಗಡಿಪಾರು ಆದೇಶಕ್ಕೆ ತಡೆಯಾಜ್ಞೆ ಸಿಕ್ಕಿದರು ಕೂಡ ಮಹೇಶ್ ಶೆಟ್ಟಿ ತಿಮರೋಡಿಗೆ ಸದ್ಯಕ್ಕೆ ರಿಲೀಫ್ ಇಲ್ಲದಂತಾಗಿದೆ. ಏಕೆಂದರೆ ಶಸ್ತ್ರಾಸ್ತ್ರ ಸಂಗ್ರಹ ಪ್ರಕರಣದಲ್ಲಿ ಮಹೇಶ ಶೆಟ್ಟಿ ತಿಮರೋಡಿ ಬಂಧನದ ಭೀತಿಯಲ್ಲಿ ಇದ್ದಾರೆ.
ಈಗಾಗಲೇ ತಿಮರೋಡಿ ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ. ನಿನ್ನೆ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ಅಕ್ಟೋಬರ್ 4ಕ್ಕೆ ವಿಚಾರಣೆ ಮುಂದೂಡಿದೆ.ದಕ್ಷಿಣ ಕನ್ನಡ ಜಿಲ್ಲಾ ಸೆಕೆಂಡ್ಸ್ ಕೋರ್ಟ್ ಈ ಒಂದು ಅರ್ಜಿಯ ವಿಚಾರಣೆ ಮುಂದೂಡಿತ್ತು. ಈಗಾಗಲೇ ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ಮಹೇಶ ಶೆಟ್ಟಿ ತಿಮರೋಡಿಗೆ ನೋಟಿಸ್ ನೀಡಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಠಾಣೆ ಪೋಲಿಸರು ತಿಮರೋಡಿಗೆ ಮೂರು ಬಾರಿ ನೋಟಿಸ್ ನೀಡಿದ್ದಾರೆ. ಆದರೆ ಮಹೇಶ ಶೆಟ್ಟಿ ತಿಮರೋಡಿ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದಾರೆ. ನಿರೀಕ್ಷಣಾ ಜಾಮೀನು ಸಿಕ್ಕ ಬಳಿಕವೇ ತಿಮ್ಮರೋಡಿ ವಿಚಾರಣೆಗೆ ಹಾಜರಾಗುವ ಸಾಧ್ಯತೆ ಇದೆ ಸದ್ಯ ಮಹೇಶ್ ಶೆಟ್ಟಿ ತಿಮರೋಡಿ ಮುಂಬೈನಲ್ಲಿ ಇರುವ ಮಾಹಿತಿ ಲಭ್ಯವಾಗಿದೆ.