ಬೆಂಗಳೂರು : ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲೊಂದಾದ ಮಹಿಳೆಯರ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆ ವಿಶ್ವದಾಖಲೆಗೆ ಸೇರ್ಪಡೆಯಾಗಿದೆ.
ಹೌದು, ಶಕ್ತಿ ಯೋಜನೆಯು 500 ಕೋಟಿ ಮಹಿಳಾ ಟಿಕೇಟ್ ಉಚಿತ ಪ್ರಯಾಣ ಶಕ್ತಿ ಯೋಜನೆಗೆ ಇಂಟರ್ ನ್ಯಾಷನಲ್ ಬುಕ್ ಆಫ್ ರೆಕಾರ್ಡ್ಸ್ ಹಾಗೂ ವರ್ಲ್ಡ್ ರೆಕಾರ್ಡ್ ಆಫ್ ಎಕ್ಸಲೆನ್ಸ್ ಅವಾರ್ಡ್ ಸಿಕ್ಕಿದೆ. ಈಗಾಗಲೇ ಶಕ್ತಿ ಯೋಜನೆ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ ನಲ್ಲಿ ಸೇರ್ಪಡೆಯಾಗಿದೆ. ಈ ಬಗ್ಗೆ ಕೆಎಸ್ ಆರ್ ಟಿಸಿ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದೆ.
ಮಹಿಳೆಯರನ್ನು ಆರ್ಥಿಕ, ಸಾಮಾಜಿಕ, ಔದೋಗಿಕವಾಗಿ ಸಬಲರನ್ನಾಗಿಸಿದೆ. ಶಕ್ತಿ ಯೋಜನೆ ದೇಶದ ವಿವಿಧ ರಾಜ್ಯಗಳಲ್ಲಿ ಅನುಷ್ಥಾನಗೊಳಿಸುವುದು ಶಕ್ತಿ ಯೋಜನೆಯ ಯಶಸ್ಸು ಬಿಂಬಿಸಿದೆ. ಮತ್ತೊಂದು ವಿಶ್ವದಾಖಲೆಗೆ ಸೇರ್ಪಡೆಯಾಗಿರುವುದು ಹೆಮ್ಮೆಯ ವಿಷಯ. ಈ ಹಿನ್ನೆಲೆಯಲ್ಲಿ 4 ನಿಗಮಗಳ ಅಧಿಕಾರಿ, ಸಿಬ್ಬಂದಿ, ಕಾರ್ಮಿಕ ಮುಖಂಡರು,ಮಹಿಳಾ ಪ್ರಯಾಣಿಕರಿಗೂ ಸಚಿವ ರಾಮಲಿಂಗ ರೆಡ್ಡಿ ಧನ್ಯವಾದ ತಿಳಿಸಿದ್ದಾರೆ.








