ಬೆಂಗಳೂರು: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಈ ವಾರಾಂತ್ಯದವರೆಗೂ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಗುರುವಾರ ಕರಾವಳಿಯ ಉತ್ತರಕನ್ನಡ, ದಕ್ಷಿಣಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಹಲವು ಪ್ರದೇಶಗಳಲ್ಲಿ ಭಾರಿ ಮಳೆಯಾಗಿದೆ. ಈ ಜಿಲ್ಲೆಗಳಲ್ಲಿ ಇನ್ನೂ ಕೆಲ ದಿನಗಳ ವರೆಗೂ ವರ್ಷಧಾರೆ ಆಗುವ ನಿರೀಕ್ಷೆ ಇದೆ. ಮಲೆನಾಡು ಒಳಗೊಂಡಿರುವ ದಕ್ಷಿಣ ಒಳನಾಡು ಜಿಲ್ಲೆಗಳಲ್ಲೂ ಇಂದಿನಿಂದ 3 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಉತ್ತರ ಒಳನಾಡು ಜಿಲ್ಲೆಗಳಲ್ಲಿ ಶುಕ್ರವಾರ ಹಾಗೂ ಶನಿವಾರ ಮಳೆಯಾಗಲಿದೆ. ವಾರಾಂತ್ಯದ ನಂತರ ಕೆಲ ದಿನಗಳ ಕಾಲ ಮಳೆ ಕ್ಷೀಣಿಸಲಿದ್ದು, ನಂತರ ಮತ್ತೆ ಮಳೆ ಪುನರಾರಂಭವಾಗಲಿದೆ.