ಚಿತ್ರದುರ್ಗ : ಚಿತ್ರದುರ್ಗದಲ್ಲಿ ಚಡ್ಡಿಗ್ಯಾಂಗ್ ಆತಂಕ ಸೃಷ್ಟಿಸಿದ್ದು, ಹೊಳಲ್ಕೆರೆಯ ಬಡಾವಣೆಗಳಲ್ಲಿ ಕಳ್ಳತನಕ್ಕೆ ಯತ್ನಿಸಿದೆ.
ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆಯ ಬಡಾವಣೆಗಳಲ್ಲಿ ಚಡ್ಡಿ ಗ್ಯಾಂಗ್ ಎಂಟ್ರಿ ಕೊಟ್ಟಿದ್ದು, ಕಳ್ಳತನಕ್ಕೆ ಯತ್ನಿಸಿದೆ. ಸಿದ್ದರಾಮಪ್ಪ ಬಡಾವಣೆಯಲ್ಲಿ ಚಡ್ಡಿ ಗ್ಯಾಂಗ್ ಓಡಾಟದ ದೃಶ್ಯ ಸೆರೆಯಾಗಿದೆ. ಸ್ಥಳೀಯರಲ್ಲಿ ಭೀತಿ ಶುರುವಾಗಿದೆ.
ಹೊಳಲ್ಕೆರೆಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಕೂಡಲೇ ಚಡ್ಡಿ ಗ್ಯಾಂಗ್ ಸೆರೆಹಿಡಿಯುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.