ಬೆಂಗಳೂರು: ವಿಜಯನಗರ ಜಿಲ್ಲೆ ಹೊಸಪೇಟೆಯ ಗಾದಿಗನೂರು ನಲ್ಲಿ ಸಿಲಿಂಡರ್ ಸ್ಫೋಟ ಗೊಂಡು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಾಯಾಳುಗಳ ಪೈಕಿ ಇಬ್ಬರು ಮೃತಪಟ್ಟಿದ್ದಾರೆ. ಇಂತಹ ಮೃತರ ಕುಟುಂಬಸ್ಥರಿಗೆ ತಲಾ ಐದು ಲಕ್ಷ ಪರಿಹಾರವನ್ನು ರಾಜ್ಯ ಸರ್ಕಾರ ಘೋಷಿಸಿದೆ.
ಇಂದು ವಿಷಯ ತಿಳಿದು ವಿಕ್ಟೋರಿಯಾ ಆಸ್ಪತ್ರೆಗೆ ತೆರಳಿದಂತ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್ ಅವರು ಆಸ್ಪತ್ರೆಗೆ ಭೇಟಿ ನೀಡಿ ಮೃತರ ಅಂತಿಮ ದರ್ಶನ ಪಡೆದು ನಮನ ಸಲ್ಲಿಸಿದರು. ಅಲ್ಲದೇ ಮೃತರ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು.
ಇದೇ ಸಂದರ್ಭದಲ್ಲಿ ರಾಜ್ಯ ಸರ್ಕಾರದ ಪರವಾಗಿ ಮೃತರಾದ ಹಾಲಪ್ಪ ಹಾಗೂ ಗಂಗಮ್ಮ ಕುಟುಂಬಗಳಿಗೆ ತಲಾ ಐದು ಲಕ್ಷ ರೂಪಾಯಿ ಪರಿಹಾರ ಘೋಷಿಸಿದರು.
ಈ ವೇಳೆ ಮಾತನಾಡಿದಂತ ಅವರು, ಈ ಘಟನೆಯಿಂದ ಮನೆಗೆ ಹಾನಿಯಾಗಿದ್ದು ವೈಯಕ್ತಿಕ ವೆಚ್ಚದಲ್ಲಿ ಮನೆ ನಿರ್ಮಿಸಿಕೊಡುವುದಾಗಿ ತಿಳಿಸಿದರು.
ನಂತರ ಆಂಬುಲೆನ್ಸ್ ಮೂಲಕ ಪಾರ್ಥಿ ವ ಶರೀರ ಸ್ವ ಗ್ರಾಮಕ್ಕೆ ಕಳುಹಿಸಿಕೊಡಲು ಸಚಿವರು ವ್ಯವಸ್ಥೆ ಮಾಡಿಕೊಟ್ಟರು. ಅಂತ್ಯಕ್ರಿಯೆಗೆ ಎಲ್ಲ ರೀತಿಯ ವ್ಯವಸ್ಥೆ ಮಾಡಲು
ಜಿಲ್ಲಾಧಿಕಾರಿ ಕವಿತಾ ಮಣ್ಣಿಕೇರಿ ಅವರಿಗೆ ಸೂಚನೆ ನೀಡಿದರು.
ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ ವಿರೋಧಿಸಿದ ಬಿಜೆಪಿಗೆ ಶಿಕ್ಷಕರೇ ಉತ್ತರ: ಸಚಿವ ಮಧು ಬಂಗಾರಪ್ಪ
ALERT : ಧೂಮಪಾನಿಗಳೇ ಎಚ್ಚರ : `ಸಿಗರೇಟ್’ನಿಂದ ಈ ಗಂಭೀರ ಕಾಯಿಲೆಗಳು ಬರಬಹುದು.!