ಚಿತ್ರದುರ್ಗ: ರಾಜ್ಯದಲ್ಲೊಂದು ಭೀಕರ ಅಪಘಾತ ಎನ್ನುವಂತೆ ಚಿತ್ರದುರ್ಗದಲ್ಲಿ ಕಾರು ಪಲ್ಟಿಯಾಗಿ ಮೂವರು ದುರ್ಮರಣ ಹೊಂದಿದ್ದಾರೆ. ಈ ಅಪಘಾತದಲ್ಲಿ ಇನ್ನೂ ಹಲವರು ಗಾಯಗೊಂಡಿರುವುದಾಗಿ ತಿಳಿದು ಬಂದಿದೆ.
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಮೇಟಿಕುರ್ಕೆ ಬಳಿಯಲ್ಲಿ ಕಾರು ಪಲ್ಟಿಯಾಗಿ ಮೂವರು ಸಾವನ್ನಪ್ಪಿದ್ದಾರೆ. ಮೃತರನ್ನು ಯಾದಗಿರಿ ದಿಲ್ಲೆಯವರು ಎಂದು ಹೇಳಲಾಗುತ್ತಿದೆ.
ಅಪಘಾತಕ್ಕೀಡಾದಂತ ಕಾರು ಚಿತ್ರದುರ್ಗ ಕಡೆಯಿಂದ ಬೆಂಗಳೂರಿಗೆ ತೆರಳುತ್ತಿತ್ತು. ಹಿರಿಯೂರಿನ ಮೇಟಿಕುರ್ಕೆ ಬಳಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಅಪಘಾತ ಸಂಭವಿಸಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.