ಮೈಸೂರು : ಜಂಬೂ ಸವಾರಿ ಆರಂಭಕ್ಕೂ ಮುನ್ನ ನಡೆದ ವೈಭವದ ದಸರಾ ಮೆರವಣಿಗೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಂಪುಟ ಸಚಿವರೊಂದಿಗೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಮತ್ತು ಸಮಾಜ ಕಲ್ಯಾಣ ಸಚಿವ ಡಾ. ಎಚ್.ಸಿ. ಮಹದೇವಪ್ಪ ಅವರ ಮೊಮ್ಮಗ ಕಾಣಿಸಿಕೊಂಡ ವಿಚಾರವಾಗಿ ಸಚಿವ HC ಮಹದೇವಪ್ಪ ಇದೀಗ ಸ್ಪಷ್ಟನೆ ನೀಡಿದ್ದಾರೆ
ಮೈಸೂರಿನಲ್ಲಿ ಮಾತನಾಡಿದ ಅವರು, ಸಿಎಂ ಪರೇಡ್ ವೇಳೆ ಮಹದೇವಪ್ಪ ಮೊಮ್ಮಗ ಕಾಣಿಸಿಕೊಂಡ ವಿಚಾರವಾಗಿ ಈ ಕುರಿತು, ಅಲ್ಲಿ ಯಾವ ಪ್ರೋಟೋಕಾಲ್ ಕೂಡ ಉಲ್ಲಂಘನೆಯಾಗಿಲ್ಲ ಅದು ಪ್ರೋಟೋಕಾಲ್ ವ್ಯಾಪ್ತಿಗೆ ಬರುವುದೇ ಇಲ್ಲ. ಪರೇಡ್ ಅಲ್ಲ ಮತ್ತು ಅಲ್ಲಿ ಯಾವ ಧ್ವಜ ವಂದನೆಯೂ ಇರಲಿಲ್ಲ. ಕೇವಲ ಜನರಿಗೆ ವಂದನೆ ಸಲ್ಲಿಸಲು ಎಲ್ಲರೂ ಒಟ್ಟಾಗಿ ಹೋಗಿದ್ದೆವು. ಆಚರಣೆ ಬಗ್ಗೆ ಗೊತ್ತಿಲ್ಲದವರು ಈ ರೀತಿ ಸುದ್ದಿ ಹಬ್ಬಿಸುತ್ತಾರೆ ಅಷ್ಟೇ ಎಂದು ಮೈಸೂರಿನಲ್ಲಿ ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್ ಸಿ ಮಹದೇವಪ್ಪ ಸ್ಪಷ್ಟಪಡಿಸಿದರು.