ಬೆಂಗಳೂರು: ನಿನ್ನೆ ಹಿರಿಯ ಪತ್ರಕರ್ತ ಟಿ.ಜೆ.ಎಸ್ ಜಾರ್ಜ್ ನಿಧನರಾಗಿದ್ದರು. ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸುವಂತೆ ರಾಜ್ಯ ಸರ್ಕಾರ ಆದೇಶಿಸಿದೆ.
ಈ ಸಂಬಂಧ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದಾರೆ. ಪದ್ಮಭೂಷಣ ಪ್ರಶಸ್ತಿ ಪುರಸ್ಕೃತ ಹಿರಿಯ ಪತ್ರಕರ್ತ ಟಿ.ಜೆ.ಎಸ್ ಜಾರ್ಜ್ ದಿನಾಂಕ 03-10-2025ರಂದು ನಿಧನರಾಗಿರುತ್ತಾರೆ. ಅವರ ನಿಧನಕ್ಕೆ ಸರ್ಕಾರವು ತೀವ್ರ ಸಂತಾಪವನ್ನು ವ್ಯಕ್ತಪಡಿಸುತ್ತದೆ ಎಂದಿದ್ದಾರೆ.
ಇನ್ನೂ ಮೃತರ ಗೌರವಾರ್ಥ ಹಿರಿಯ ಪತ್ರಕರ್ತ ಹಾಗೂ ಪದ್ಮ ಭೂಷಣ ಪ್ರಶಸ್ತಿ ಪುರಸ್ಕೃತ ಟಿ.ಜೆ.ಎಸ್ ಜಾರ್ಜ್ ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲು ಆದೇಶಿಸಿದ್ದಾರೆ.