ಬೆಂಗಳೂರು: ರಾಷ್ಟ್ರೀಯ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಪಿ.ಜಿ ದ್ವಾರಕನಾಥ್ ಅವರು ನಿಧನರಾಗಿದ್ದಾರೆ. ಅವರ ನಿಧನಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸಂತಾಪ ಸೂಚಿಸಿದ್ದಾರೆ.
ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ರಾಷ್ಟ್ರೀಯ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಪಿ.ಜಿ ದ್ವಾರಕನಾಥ್ ಅವರ ನಿಧನ ಅತ್ಯಂತ ದುಃಖಕರ ಸಂಗತಿಯಾಗಿದೆ. ಅವರ ಶೈಕ್ಷಣಿಕ ಮತ್ತು ಆಡಳಿತಾತ್ಮಕ ಅನುಭವವೂ ಶ್ಲಾಘನೀಯ ಹಾಗೂ ಅವರ ನಾಯಕತ್ವವು ವಿದ್ಯಾವರ್ಧಕ ಸಂಘದ ಬೆಳವಣಿಗೆಗೆ ಕಾರಣವಾಗಿತ್ತು ಎಂದಿದ್ದಾರೆ.
25 ವರ್ಷಗಳ ಕಾಲ ಹೈಸ್ಕೂಲ್ ಶಿಕ್ಷಕರಾಗಿ, ಮುಖ್ಯೋಪಾಧ್ಯಾಯರಾಗಿ ಸೇವೆ ಸಲ್ಲಿಸಿರುವ ಪಿ.ಜಿ ದ್ವಾರಕನಾಥ್ ಅವರ ಅಗಲಿಕೆ ಶೈಕ್ಷಣಿಕ ಕ್ಷೇತ್ರಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಹೇಳಿದ್ದಾರೆ.
ಇಂದು ಅವರ ಅಂತಿಮ ದರ್ಶನ ಪಡೆದು ಕುಟುಂಬಸ್ಥರಿಗೆ ಸಾಂತ್ವನ ತಿಳಿಸಲಾಯಿತು. ಅಗಲಿದ ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಕುಟುಂಬಕ್ಕೆ ಈ ನೋವನ್ನು ಭರಿಸುವ ಶಕ್ತಿ ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿ ಎಂದು ತಿಳಿಸಿದ್ದಾರೆ.
ಉತ್ತಮ ಶಿಕ್ಷಕನಿಗೆ ವಿದಾಯ..
ರಾಷ್ಟ್ರೀಯ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಪಿ.ಜಿ ದ್ವಾರಕನಾಥ್ ಅವರ ನಿಧನ ಅತ್ಯಂತ ದುಃಖಕರ ಸಂಗತಿಯಾಗಿದೆ. ಅವರ ಶೈಕ್ಷಣಿಕ ಮತ್ತು ಆಡಳಿತಾತ್ಮಕ ಅನುಭವವೂ ಶ್ಲಾಘನೀಯ ಹಾಗೂ ಅವರ ನಾಯಕತ್ವವು ವಿದ್ಯಾವರ್ಧಕ ಸಂಘದ ಬೆಳವಣಿಗೆಗೆ ಕಾರಣವಾಗಿತ್ತು. 25 ವರ್ಷಗಳ ಕಾಲ ಹೈಸ್ಕೂಲ್ ಶಿಕ್ಷಕರಾಗಿ,… pic.twitter.com/WPnSogufun
— DK Shivakumar (@DKShivakumar) October 4, 2025
BREAKING: ಬಾಲಿವುಡ್ ಖ್ಯಾತ ನಟಿ ಸಂಧ್ಯಾ ಶಾಂತಾರಾಮ್ ವಿಧಿವಶ | Actor Sandhya Shantaram No More
ಗಮನಿಸಿ : ನಿಮ್ಮ ಮನೆಯಲ್ಲಿ ಎಷ್ಟು ದಿನಗಳವರೆಗೆ `ನೀರು’ ಸಂಗ್ರಹಿಸಿಡಬಹುದು ಗೊತ್ತಾ?