ದಕ್ಷಿಣಕನ್ನಡ : ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತು ಹಾಕಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಸ್ ಐ ಟಿ ಅಧಿಕಾರಿಗಳು ಶೋಧ ನಡೆಸುವ ವೇಳೆ ಹೋರಾಟಗಾರ ಮಹೇಶ ಶೆಟ್ಟಿ ತಿಮರೋಡಿ ಮನೆಯಲ್ಲಿ ಅಕ್ರಮವಾಗಿ ಸಂಗ್ರಹಿಸಿದ ಶಸ್ತ್ರಾಸ್ತ್ರಗಳು ಪತ್ತೆಯಾಗಿದ್ದವು. ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ದಕ್ಷಿಣ ಕನ್ನಡ ಜಿಲ್ಲೆಯ ಸೇಷನ್ಸ್ ಕೋರ್ಟ್ ಅಕ್ಟೋಬರ್ 9ಕ್ಕೆ ಆದೇಶ ಕಾಯ್ದಿರಿಸಿದೆ.
ಇಂದು ದಕ್ಷಿಣ ಕನ್ನಡ ಜಿಲ್ಲಾ ಸೇಷನ್ಸ್ ನ್ಯಾಯಾಲಯದಲ್ಲಿ ಈ ಒಂದು ಪ್ರಕರಣದ ಕುರಿತು ವಿಚಾರಣೆ ನಡೆಯಿತು.ಅಕ್ರಮ ಶಸ್ತ್ರಾಸ್ತ್ರ ಹೊಂದಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ನಡೆಯಿತಿ. ಈ ವೇಳೆ ವಾದ ಪ್ರತಿವಾದ ಆಲಿಸಿ ನ್ಯಾಯಾಧೀಶರು ಆದೇಶ ಕಾಯ್ದಿಸಿದ್ದಾರೆ. ಅಕ್ಟೋಬರ್ 9ಕ್ಕೆ ಆದೇಶ ಆದೇಶ ಕಾಯ್ದಿರಿಸಿ ಆದೇಶ ಹೊರಡಿಸಿದ್ದಾರೆ.