ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಗಳು ಅಕ್ಟೋಬರ್ 07, 2025 ರಂದು ಬೆಳಿಗ್ಗೆ 10 ಗಂಟೆಗೆ ತಮ್ಮ ಅಧೀನದಲ್ಲಿ ಬರುವ ಎಲ್ಲಾ ಕಚೇರಿ ಮತ್ತು ಸಂಸ್ಥೆಗಳಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ರವರ ಜಯಂತಿಯನ್ನು ಕಡ್ಡಾಯವಾಗಿ ಆಚರಿಸಲು ಸರ್ಕಾರ ಆದೇಶ ಹೊರಡಿಸಿದೆ.
ಈ ಕುರಿತು ಸುತ್ತೋಲೆ ಹೊರಡಿಸಲಾಗಿದ್ದು, ಅಕ್ಟೋಬರ್ 07, 2025 ರಂದು ಬೆಳಗ್ಗೆ 9 ಗಂಟೆಗೆ ತಮ್ಮ ಕಚೇರಿಗಳಲ್ಲಿ ಕಡ್ಡಾಯವಾಗಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಕಡ್ಡಾಯವಾಗಿ ಆಚರಿಸಲು ಸೂಚನೆ ನೀಡಲಾಗಿದೆ.
ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಗಳು ಅಕ್ಟೋಬರ್ 07, 2025 ರಂದು ಬೆಳಿಗ್ಗೆ 10 ಗಂಟೆಗೆ ತಮ್ಮ ಅಧೀನದಲ್ಲಿ ಬರುವ ಎಲ್ಲಾ ಕಚೇರಿ ಮತ್ತು ಸಂಸ್ಥೆಗಳಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ರವರ ಜಯಂತಿಯನ್ನು ಕಡ್ಡಾಯವಾಗಿ ಆಚರಿಸಲು ಪ್ರಭಾರ ಜಿಲ್ಲಾಧಿಕಾರಿ ಭುವನೇಶ ಪಾಟೀಲ ಅವರು ನಿರ್ದೇಶಿಸಿದ್ದಾರೆ.
ಜಿಲ್ಲಾ ಮಟ್ಟದ ಕಾರ್ಯಕ್ರಮ: ಅಕ್ಟೋಬರ 7 ರಂದು ಬೆಳಗ್ಗೆ 9 ಗಂಟೆಗೆ ಶ್ರೀ ಮಹರ್ಷಿ ವಾಲ್ಮೀಕಿ ಅವರ ಭಾವ ಚಿತ್ರದ ಮೆರವಣಿಗೆಯು ಜಿಲ್ಲಾಧಿಕಾರಿಗಳ ಕಚೇರಿಯಿಂದ ಟೋಲ್‍ನಾಕ ಹತ್ತಿರದ ಶ್ರೀ ಮಹರ್ಷಿ ವಾಲ್ಮೀಕಿ ದೇವಸ್ಥಾನಕ್ಕೆ ಆಗಮಿಸಿ, ಮಾಲಾರ್ಪಣೆ ಮಾಡಲಾಗುತ್ತದೆ. ನಂತರ ಭಾವಚಿತ್ರದ ಮೆರವಣಿಗೆಯು ಟೋಲ್‍ನಾಕಾ, ಕೋರ್ಟ್ ಸರ್ಕಲ್, ಜುಬ್ಲಿ ಸರ್ಕಲ್ ಮಾರ್ಗವಾಗಿ, ಕರ್ನಾಟಕ ವಿದ್ಯಾವರ್ಧಕ ಸಂಘದ ಡಾ.ಪಾಟೀಲ ಪುಟ್ಟಪ್ಪ ಸಭಾಭವನಕ್ಕೆ ಬಂದು ಮುಕ್ತಾಯವಾಗುತ್ತದೆ.
ನಂತರ ಜುಬ್ಲಿ ವೃತ್ತದಲ್ಲಿರುವ ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ ರವರ ಪುತ್ಥಳಿಗೆ ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ, ಹುಬ್ಬಳ್ಳಿ-ಧಾರವಾಡ ಮಾಹಾನಗರ ಪಾಲಿಕೆ ಮತ್ತು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಮಾಲಾರ್ಪಣೆ ಮಾಡಲಾಗುವುದು, ನಂತರ ಡಾ.ಪಾಟೀಲ ಪುಟ್ಟಪ್ಪ ಸಭಾ ಭವನದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯ ವೇದಿಕೆ ಕಾರ್ಯಕ್ರಮ ಜರುಗುತ್ತದೆ.