ಬೆಂಗಳೂರು : ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ‘ಶಕ್ತಿ’ ಚಂಡಮಾರುತದಿಂದ ರಾಜ್ಯದಲ್ಲಿ ವಾರಪೂರ್ತಿ ಗುಡುಗು ಸಹಿತ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ, ಉತ್ತರ ಕರ್ನಾಟಕ ಸೇರಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಅ.5ರಿಂದ 11ರವರೆಗೆ ಗುಡುಗು ಸಹಿತ ಮಳೆಯಾಗಲಿದೆ. ಈ ಅವಧಿಯಲ್ಲಿ ಕೆಲವೆಡೆ ಮಳೆಗಿಂತ ಬಿರುಗಾಳಿ ಹೆಚ್ಚು ಇರಲಿದೆ.
ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ 5 ದಿನ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅ.5ರಿಂದ 10ರವರೆಗೆ ಉತ್ತಮ ಮಳೆಯಾಗಲಿದೆ. ಈ ಅವಧಿಯಲ್ಲಿ ಕೆಲವೆಡೆ ಮಳೆಗಿಂತ ಬಿರುಗಾಳಿ ಜಾಸ್ತಿ ಇರಲಿದೆ ಎಂದು ಇಲಾಖೆ ಮಾಹಿತಿ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್. ಗದಗ, ಹಾವೇರಿ, ಕೊಪ್ಪಳ, ಯಾದಗಿರಿಯಲ್ಲಿ ಭಾರಿ ಮಳೆಯಾಗಲಿದೆ. ಮುಂದಿನ ಒಂದು ವಾರ ಬಿರುಗಾಳಿ ಸಹಿತ ಸಾಧಾರಣ ಮಳೆಯಾಗುವ ಸಂಭವ ಇದ್ದು, ಇಂದಿನಿಂದ 5 ದಿನ ಕೆಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಉತ್ತರ ಒಳನಾಡಿನ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು ಜಿಲ್ಲೆಯಲ್ಲಿ ಹಲವೆಡೆ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ.