ತುಮಕೂರು : ಕನ್ನಂಬಾಡಿ ಕಟ್ಟೆಯನ್ನು ಕಟ್ಟಲು ಅಡಿಗಲ್ಲು ಹಾಕಿದ್ದು ಟಿಪ್ಪು ಸುಲ್ತಾನ್ ಎಂದು ಮಾಜಿ ಸಚಿವ ಕೆ.ಎನ್. ರಾಜಣ್ಣ ಹೇಳಿಕೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕನ್ನಂಬಾಡಿ ಕಟ್ಟೆಯನ್ನು ಪ್ರಾರಂಭ ಮಾಡಿದ್ದೆ ಟಿಪ್ಪು ಸುಲ್ತಾನ್, ಬಳಿಕ ನಾಲ್ವಡಿ ಕೃಷ್ಣರಾಜ ಒಡೆಯರ್ ಕಾಲದಲ್ಲಿ ಸಂಪೂರ್ಣವಾಗಿದೆ. ನಾವು ಇದನ್ನು ಮರೆಯಬಾರದು ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ರೇಷ್ಮೆ ಬರಲು ಟಿಪ್ಪು ಕಾರಣ, ಟಿಪ್ಪು ರೇಷ್ಮೆ ಜನಕ, ಸುಲ್ತಾನ್ ಕಡ್ಡಿ ಅಂತಾ ರೇಷ್ಮೆ ಬೆಳೆ ತಂದಿದ್ದೆ ಟಿಪ್ಪು ಸುಲ್ತಾನ್, ಪರ್ಷಿಯಾದಿಂದ ಕಡ್ಡಿ ತಂದಿದ್ದೆ ಟಿಪ್ಪು ಸುಲ್ತಾನ್ ಎಂದು ಹೇಳಿದ್ದಾರೆ.