ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದ್ದು, ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಹುದ್ದೆಗಳ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಅರ್ಜಿ ಆಹ್ವಾನಿಸಿದೆ.
ಕೆಳಕಂಡ ಸರ್ಕಾರಿ ಸಂಸ್ಥೆ/ನಿಗಮ/ಸಂಸ್ಥೆಗಳಲ್ಲಿ ಉಳಿಕೆ ಮೂಲ ವೃಂದದಲ್ಲಿರುವ ಖಾಲಿ ಇರುವ ವಿವಿಧ ವೃಂದದ ಹುದ್ದೆಗಳಿಗೆ ನೇರ ನೇಮಕಾತಿ ಮಾಡುವ ಸಂಬಂಧ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳ ನೇಮಕಾತಿಗೆ ಅರ್ಹತೆ ಪಡೆಯಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹಾಜರಾಗಬೇಕು.
1. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ
2. ಕರ್ನಾಟಕ ಸೋಪ್ಸ್ ಆ್ಯಂಡ್ ಡಿಟರ್ಜೆಂಟ್ಸ್ ಲಿಮಿಟೆಡ್
3. ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ
4. ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ
5. ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ
6. ಕೃಷಿ ಮಾರಾಟ ಇಲಾಖೆ
7. ತಾಂತ್ರಿಕ ಶಿಕ್ಷಣ ಇಲಾಖೆ ಮತ್ತು
8. ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ)