ಕಲಬುರ್ಗಿ : ಕ್ಷುಲ್ಲಕ ವಿಚಾರಕ್ಕೆ ಪೆಟ್ರೋಲ್ ಬಂಕ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿರುವ ಘಟನೆ ಕಲಬುರ್ಗಿ ನಗರದ ವಿಶ್ವರಾಧ್ಯ ದೇವಸ್ಥಾನದ ಬಳಿ ಈ ಒಂದು ಘಟನೆ ನಡೆದಿದೆ. ನಗರದ ಆಳಂದ್ ರಸ್ತೆಯಲ್ಲಿರುವ ವಿಶ್ವರಾಧ್ಯ ದೇವಸ್ಥಾನದ ಬಳಿ ಇರುವ ಪೆಟ್ರೋಲ್ ಬಂಕ್ ನಲ್ಲಿ ಸಿಬ್ಬಂದಿಯ ಮೇಲೆ ಐದಾರು ಜನರ ಗ್ಯಾಂಗ್ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದೆ.
ಐದಾರು ಜನರ ಗುಂಪಿನಿಂದ ಯುವಕ ತ್ರಿಶೂಲ್ ಮೇಲೆ ಹಲ್ಲೆ ನಡೆಸಲಾಗಿದೆ. ಮಾರಕಾಸ್ತ್ರಗಳಿಂದ ಹಾಗೂ ಚಾಕುವಿನಿಂದ ಈ ಒಂದು ಗ್ಯಾಂಗ್ ಇರಿದಿದೆ. ಬಂಕ್ ಸಿಬ್ಬಂದಿ ಮೇಲೆ ಹಲ್ಲೆ ಮಾಡುತ್ತಿರುವ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಕಲ್ಬುರ್ಗಿಯ ಸಬ್ ಅರ್ಬನ್ ಠಾಣೆಯಲ್ಲಿ ಘಟನೆ ಕುರಿತು ಪ್ರಕರಣ ದಾಖಲಾಗಿದೆ.